ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 21 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 08 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:22 ರಿಂದ 10:49ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:45 ರಿಂದ 03:13ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:26 ರಿಂದ 07:54ರ ವರೆಗೆ.
ಮೇಷ ರಾಶಿ: ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ಕೆಲವರ ವ್ಯಕ್ತಿತ್ವವು ನಿಮಗೆ ಇಷ್ಟವಾದೀತು. ಅಪರಿಚಿತರು ಇರುವ ಕಡೆ ನೀವು ಮೌನವಾಗಿ ಇರುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಭಾವನೆಯು ಇರಲಿದ್ದು ಅದನ್ನು ಲೆಕ್ಕಿಸದೇ ಕಾರ್ಯದಲ್ಲಿ ಮಗ್ನರಾಗುವಿರಿ. ನಿತ್ಯ ಕರ್ಮದಲ್ಲಿ ಶ್ರದ್ಧೆಯಿಂದ ತೊಡಗಿಕೊಳ್ಳುವಿರಿ.
ವೃಷಭ ರಾಶಿ: ಸಾಹಿತ್ಯಾಸಕ್ತರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವರು. ಲೆಕ್ಕಕ್ಕೆ ಸಿಗದೇ ಇಂದು ಎಷ್ಟೋ ಹಣವನ್ನು ಕಳೆದುಕೊಳ್ಳುವಿರಿ. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ವ್ಯವಹಾರದಲ್ಲಿ ಗೊಂದಲವಿಟ್ಟುಕೊಳ್ಳುವುದು ಬೇಡ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ಪರೀಕ್ಷೆಯ ಸಮಯವಿದ್ದರೂ ವಿದ್ಯಾರ್ಥಿಗಳು ಅನ್ಯ ಚಟುವಟಿಕೆಯಲ್ಲಿ ನಿಶ್ಚಿಂತೆಯಿಂದ ಭಾಗವಹಿಸುವರು. ಯೋಗ್ಯತೆ ಇದ್ದರೂ ಯೋಗವೂ ಜೊತೆಗೆ ಬಂದಾಗ ಸಿಗಬೇಕಾದುದು ಸಿಗಲಿದೆ. ಆತುರದಲ್ಲಿ ಏನನ್ನಾದರೂ ಮಾಡಿಕೊಳ್ಳುವುದು ಬೇಡ.
ಮಿಥುನ ರಾಶಿ: ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ನಿಮಗೆ ಆಗದವರ ಮೇಲೆ ಸಲ್ಲದ ದೂರನ್ನು ಕೊಡುವಿರಿ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಕ್ಕೆ ಕೊಡುವಿರಿ. ಒತ್ತಡವು ಬಂದರೆ ಸ್ವಲ್ಪ ಕಾಲ ಎಲ್ಲವನ್ನೂ ಮರೆತು ಓಡಾಡಿ ಬನ್ನಿ. ರಾಜಕೀಯವಾಗಿ ಮೇಲೆ ಬರಲು ನಿಮ್ಮ ತಂತ್ರಗಾರಿಕೆ ಇರುವುದು. ಸ್ನೇಹಿತರ ಜೊತೆಗಿನ ಓಡಾಟದಿಂದ ನಿಮ್ಮವರಿಗೆ ಅನುಮಾನವು ಬರುವುದು. ನೀವಾಡುವ ಮಾತು ಜವಾಬ್ದಾರಿಯ ಸ್ಥಾನದ್ದು ಎನ್ನುವುದನ್ನು ನೆನಪಿನಲ್ಲಿ ಇಡಿ. ಸಹೋದರಿಯ ಜೊತೆ ಕುಟುಂಬದ ಸಮಸ್ಯೆಯನ್ನು ಹಂಚಿಕೊಳ್ಳುವಿರಿ.
ಕರ್ಕ ರಾಶಿ: ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ. ಚಂಚಲವಾದ ಮನಸ್ಸು ನಿಮ್ಮ ಸಂಗಾತಿಗೆ ಇಷ್ಡವಾಗದು. ಆದಾಯ ಮೂಲದ ರಹಸ್ಯವನ್ನು ಹೇಳಿಕೊಳ್ಳುವುದು ಬೇಡ. ನಕಾರಾತ್ಮಕ ಚಿಂತನೆಯನ್ನು ಕಡಿಮೆ ಮಾಡುವುದು ಉತ್ತಮ. ಹಳೆಯ ಗೆಳತಿಯು ನಿಮ್ಮನ್ನು ಇಷ್ಟಪಡಬಹುದು. ಅತಿಯಾದರೆ ಅಮೃತವೂ ವಿಷ ಎನ್ನುವ ಮಾಹಿತಿ ಗೊತ್ತಿರಲಿ. ಎಲ್ಲದಕ್ಕೂ ಸಿಟ್ಟು ಮಾತ್ರವೇ ಪರಿಹಾರವಲ್ಲ. ಕುಶಲಕಾರ್ಯದ ಹೆಸರು ಸಿಗಬಹುದು.