Horoscope: ದಿನಭವಿಷ್ಯ, ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಉತ್ತಮ ದಿನ, ಶ್ರದ್ಧೆ ಹೆಚ್ಚಲಿದೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಉತ್ತಮ ದಿನ, ಶ್ರದ್ಧೆ ಹೆಚ್ಚಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 22, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 22 ಭಾನುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಸುಕರ್ಮಾ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಸಂಜೆ 04:40 ರಿಂದ 06:08ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:17 ರಿಂದ 01:45ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:12 ರಿಂದ 04:40ರ ವರೆಗೆ.

ಮೇಷ ರಾಶಿ: ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ಕಾರ್ಯದಲ್ಲಿ ಶ್ರದ್ಧೆಯಿರುವ ಕಾರಣ ಅನ್ಯ ಆಲೋಚನೆಯನ್ನು ಮಾಡಲಾರಿರಿ. ನಿಮ್ಮ ಬಗ್ಗೆ ಸುಳ್ಳು ವದಂತಿಗಳನ್ನು ಹರಡುವುದು. ನೀವು ಇಂದು ಸೌಂದರ್ಯಕ್ಕೆ ಬೆಲೆ‌ ಕೊಡುವಿರಿ. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರಗಳಾದಾರು.‌ ಸಂಗಾತಿಯು ನಿಮ್ಮನ್ನು ನಿರ್ಲಕ್ಷಿಸಬಹುದು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಂತೆ ತೋರಬಹುದು. ‌ನೀವೊಬ್ಬ ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸುವರು. ಬಂಧುಗಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ.

ವೃಷಭ ರಾಶಿ: ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಆಗದು. ಕೆಲವು ಸನ್ನಿವೇಶವು ನಿಮಗೆ ಇಷ್ಟವಾಗದು. ಅದರೂ ಅನಿವಾರ್ಯ ಎನಿಸೀತು. ಕೋಪವನ್ನು ಬಿಟ್ಟರೂ ಬಿಡಲಾಗದು.‌ ಯಾವುದಾದರೂ ರೀತಿಯಲ್ಲಿ ಮತ್ತೆ ನಿಮ್ಮನ್ನು ಸೇರಿಕೊಳ್ಳುವುದು.‌ ನಕಾರಾತ್ಮಕ ಸೂಚನೆ ನಿಮಗೆ ಸಿಗಲಿದ್ದು, ಅದನ್ನು ನಿರ್ಲಕ್ಷ್ಯ ಮಾಡುವಿರಿ. ಸಮಾಧಾನದ ಚಿತ್ತವು‌ ಅನೇಕ ವಿಚಾರಕ್ಕೆ ಪೂರಕ. ನಿಮ್ಮ‌ ಮನೋಬಲದ ಪ್ರದರ್ಶನವನ್ನು ತೋರಿಸಬೇಕಾದೀತು. ಸುಮ್ಮನೇ ವಾಗ್ವಾದವನ್ನು ಮಾಡಲು ಹೋಗಿ ಸಮಯವನ್ನು ಹಾಗೂ ಇತರರ‌‌ ಸಮಯವನ್ನೂ ಹಾಳು ಮಾಡುವಿರಿ. ಹಲವರ ಕಾರಣದಿಂದ ನಿಮ್ಮ ಗುರಿಯು ಬದಲಾಗಬಹುದು. ಹೃದಯ ವೈಶಾಲ್ಯವನ್ನು ತೋರಿಸುವಿರಿ.

ಮಿಥುನ ರಾಶಿ: ಮನೆಯಲ್ಲಿ ಹರ್ಷದ ವಾತಾವರಣ ಇದ್ದು ಬಂಧುಗಳು ನಿಮ್ಮ ಜೊತೆಗಿರುವರು. ಸರಳವಾದ ನಿಮ್ಮ ವ್ಯಕ್ತಿತ್ವಕ್ಕೆ ಯಾರೂ ಮನಸೋಲುವರು. ಕರ್ತವ್ಯವನ್ನು ನಿಷ್ಠೆಯಿಂದ ಮಾಡುವಿರಿ. ಪ್ರೀತಿಗೆ ಮಿತ್ರರಿಂದ‌ ಸಹಕಾರವು ಇರುವುದು. ಸ್ನೇಹ ಸಂಬಂಧವನ್ನು ಹೆಚ್ಚು ಆಪ್ತ ಎನಿಸುವುದು. ಅಪೇಕ್ಷಿಸದಿದ್ದರೂ ನಿಮ್ಮ ಪರಿಶ್ರಮಕ್ಕೆ ಯೋಗ್ಯವಾದ ಗೌರವವು ಸಿಗುವುದು. ಕೆಟ್ಟ ಕೆಲಸಕ್ಕೆ ಯಾರಾದರೂ ಪ್ರೇರಣೆ ಕೊಡಬಹುದು. ದುರಭ್ಯಾಸವು ನಿಮಗೆ ಬೇಡವೆನಿಸುವುದು. ಸಂಗಾತಿಯ ಮೇಲೇ ಪ್ರೀತಿಯು ಹೆಚ್ಚಾಗಿ ಅದನ್ನು ಹೇಳಿಕೊಳ್ಳಲು ಸಂಕೋಚಪಡುವಿರಿ. ನಿಮಗೆ ಏಕಾಂಗಿಯಂತೆ ಅನ್ನಿಸಬಹುದು. ಪ್ರಾಣಿಗಳ ಸಹಾವಾಸದಿಂದ ಮನಸ್ಸಿಗೆ ಹಿತ ಎನಿಸುವುದು.

ಕರ್ಕ ರಾಶಿ: ವಾಹನ ಮುಂತಾದ ಉದ್ಯಮವನ್ನು ನಡೆಸುತ್ತಿದ್ದರೆ ಲಾಭವಿರಲಿದೆ. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ವಾಹನದಲ್ಲಿ ಸಣ್ಣ ಅಪಘಾತವಾಗಲಿದೆ. ಆಕಸ್ಮಿಕವಾಗಿ ವಿವಾಹ ಮಾತುಕತೆಗೆ ತಯಾರಿಯಾಗಬಹುದು. ಇನ್ನೊಬ್ಬರ ಬಗ್ಗೆ ದೋಷವನ್ನೇ ಹುಡುಕುತ್ತ ಕುಳಿತುಕೊಳ್ಳುವ ಬದಲು ಗುಣಗಳನ್ನು ಸ್ವೀಕರಿಸಿ ಸಖ್ಯ ಮಾಡಿಕೊಳ್ಳುವುದು ಉತ್ತಮ. ಉಪಕಾರದ ಸ್ಮರಣೆಯನ್ನು ನೀವು ಮಾಡಿಕೊಳ್ಳುವುದಿಲ್ಲ. ಮುಂಗೋಪವು ಸಂಬಂಧವನ್ನು ಹಾಳು ಮಾಡುವುದು. ವಿವಿಧ ವಸ್ತುಗಳ ಖರೀದಿಯನ್ನು ಮಾಡಲಿದ್ದೀರಿ. ಸಂಗಾತಿಯ ಒರಟಾದ ಮಾತಿಗೆ ಉತ್ತರ‌ಕೊಡಲು ಹೋಗುವುದು ಬೇಡ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ