AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಸಾಮಾಜಿಕ ತಾಣಗಳಿಂದ ಕೆಲವು ವ್ಯಕ್ತಿಗಳ ಪರಿಚಯ, ನಿಮ್ಮ ಮಾನಸಿಕ ಸ್ಥಿತಿಯನ್ನು ಕಾಪಾಡಿಕೊಳ್ಳಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆ ಸಾಮಾಜಿಕ ತಾಣಗಳಿಂದ ಕೆಲವು ವ್ಯಕ್ತಿಗಳ ಪರಿಚಯ, ನಿಮ್ಮ ಮಾನಸಿಕ ಸ್ಥಿತಿಯನ್ನು ಕಾಪಾಡಿಕೊಳ್ಳಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 22, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 22 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಅತಿಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 28 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:55 ರಿಂದ 12:25 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:57 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:55 ರಿಂದ 09:24ರ ವರೆಗೆ.

ಮೇಷ ರಾಶಿ: ಆದಾಯದ ಮೂಲಗಳು ಸೊರಗಿಹೋದಂತೆ ಅನ್ನಿಸಬಹುದು. ಕೊಟ್ಟಿದ್ದನ್ನು ಮರಳಿ ಕೊಡುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಇನ್ನೊಬ್ಬರಿಗೆ ಆಕರ್ಷಿತರಾಗುವಿರಿ. ನಿಮ್ಮ ಶಾಂತ ಮನಸ್ಸಿನಿಂದ ಸಂಕಷ್ಟವನ್ನು ಎದುರಿಸುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆತುರಾತುರವಾಗಿ ಏನನ್ನೂ ಮಾಡಲು ಹೋಗುವುದು ಬೇಡ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅನುಮಾನ ಸಂದೇಹ ಬರಬಹುದು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗದು. ನಿಮ್ಮ ಆಪ್ತರ ಜೊತೆ ಕೆಲವು ರಹಸ್ಯವನ್ನು ಹೇಳಿಕೊಳ್ಳುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯಕ ಬೇಕು. ವಿವಾಹದ ವಿಚಾರದಲ್ಲಿ ಒಳ್ಳೆಯದಾಗುವುದು. ನಿಮ್ಮನ್ನು ಹೊಗಳಿ ಕೆಲಸ ಮಾಡಿಸಿಕೊಳ್ಳುವರು.

ವೃಷಭ ರಾಶಿ: ಗೆಳೆತನ ಸಾಕು ಎನಿಸಿ ಒಂಟಿಯಾಗಿ ಇರಬೇಕು ಎನಿಸುವುದು. ನಿಮ್ಮದಾದ ಸ್ವಂತಿಕೆಯನ್ನು ಉಳಿಸಿಕೊಳ್ಳಿ. ಮಕ್ಕಳ ವಿಚಾರಕ್ಕೆ ವಾದಗಳು ಆಡಬಹುದು. ನಿಮ್ಮ ವಿರುದ್ಧ ತಂತ್ರಗಳು ನಡೆಯಲಿದ್ದು ನಿಮಗೆ ಗೊತ್ತಾಗದು. ಅನಿರೀಕ್ಷಿತ ಘಟನೆಯು ನಿಮ್ಮನ್ನು ಬೆಚ್ಚಿಬೀಳಿಸುವುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು.‌ ಹಳೆಯ ಸಾಲಗಳಿಗೆ ನೀವೇ ಮುಕ್ತಿ ಕೊಡಿಸುವಿರಿ. ಉದ್ಯೋಗಿಗಳ ಆದಾಯದಲ್ಲಿ ಅಲ್ಪ ಏರಿಕೆ. ಪಾಲುದಾರಿಕೆಯಲ್ಲಿ ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಅವಿವಾಹಿತರಿಗೆ ವಿವಾಹಯೋಗವು ಬರಬಹುದು. ನಿಮ್ಮ ಸ್ವಭಾವವನ್ನು ಬೇಕೆಂದೇ ಬದಲಿಸಿಕೊಳ್ಳುವಿರಿ. ಎಲ್ಲರ ಜೊತೆ ಅತಿಯಾದ ಸಲುಗೆ ಬೇಡ.

ಮಿಥುನ ರಾಶಿ: ಸಾಮಾಜಿಕ ತಾಣದಿಂದ ನಿಮಗೆ ಕೆಲವು ವ್ಯಕ್ತಿಗಳ ಪರಿಚಯವಾದೀತು. ನಿಮ್ಮ ಮಾನಸಿಕ ಸ್ಥಿತಿಯನ್ನು ಕಾಪಾಡಿಕೊಳ್ಳಿ. ಇಷ್ಟವಾಗದವರು ನಿಮ್ಮೆದುರಿಗೆ ಬರುವಾಗ ಕಣ್ತಪ್ಪಿಸಿಕೊಳ್ಳುವಿರಿ. ದಂಡವನ್ನು ತುಂಬಬೇಕಾದ ಸ್ಥಿತಿಯು ಬರಬಹುದು. ಸ್ವಂತ ವಾಹನದಲ್ಲಿ ಒಂಟಿಯಾಗಿ ಓಡಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅತ್ತ ಕಡೆ ಹೆಚ್ಚು ಪ್ರಯತ್ನಿಸಿ. ಹಿಂದೆ ಮಾಡಿದ ಕಾರ್ಯಕ್ಕಾಗಿ ಇಂದು ಒಳ್ಳೆಯ ಫಲವು ದೊರೆಕಿದ ಸಂತೋಷದಲ್ಲಿ ಇರುವಿರಿ. ಮನೆಯವರನ್ನು ಕರೆದುಕೊಂಡು ಪ್ರಯಾಣ ಮಾಡುವಿರಿ. ಆಸ್ತಿಯ ದಾಖಲೆಗಳನ್ನು ಅಧಿಕಾರಿಗಳು ವಿಚಾರಿಸಬಹುದು. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಸಂಗಾತಿಯ ಆದಾಯವನ್ನು ಅನಿವಾರ್ಯವಾಗಿ ಬಳಸಿಕೊಳ್ಳಬೇಕಾಗುವುದು. ಸತ್ಯವನ್ನು ಮುಚ್ಚಿಟ್ಟಿದ್ದು ನಿಮ್ಮ ಮಾತಿನಲ್ಲಿ ಗೊತ್ತಾಗುವುದು.

ಕಟಕ ರಾಶಿ: ಸಾಲದಿಂದ ನಿಮ್ಮ ದೊಡ್ಡ ಆಲೋಚನೆಗಳು ಸಣ್ಣದಾಗುವುವು. ನಿಮ್ಮ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು. ಬಂಧುಗಳ ಆರೋಗ್ಯದ ವಿಚಾರಣೆಗೆ ತಿರುಗಾಟ ಮಾಡಬೇಕಾಗುವುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳಿಂದ ಶಾಂತಿ ಲಭಿಸುವುದು. ಮಕ್ಕಳ ಬಗ್ಗೆ ಅನವಶ್ಯಕ ಅನುಮಾನ ಇರುವುದು. ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳುವಿರಿ. ಅಗತ್ಯದ ಖರ್ಚುಗಷ್ಟೇ ಪ್ರಾಧಾನ್ಯವಿರಲಿ. ಅನಿರೀಕ್ಷವಾಗಿ ಬರುವ ಕಾರ್ಯದ ಒತ್ತಡಕ್ಕೆ ಸಿಕ್ಕಿಕೊಳ್ಳುವಿರಿ. ಧ್ಯಾನದ ಅವಶ್ಯಕತೆ ಇದೆ ಎಂದು ಅನ್ನಿಸಬಹುದು. ಸಣ್ಣ ವಿಷಯವನ್ನು ದೊಡ್ಡ ಮಾಡಿಕೊಳ್ಳುವಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳ ಸಹಾಯವು ಸಿಗುವುದು ಕಷ್ಟವಾದೀತು. ಹೆಚ್ಚು ಆಯ್ಕೆಯಲ್ಲಿ ನಿಮಗೆ ಗೊಂದಲವಾದೀತು.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ