AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಸಾಮಾಜಿಕ ಕಾರ್ಯಗಳು ನಿಮಗೆ ಪ್ರಶಂಸೆಯನ್ನು ತಂದುಕೊಡುವುದು

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಸಾಮಾಜಿಕ ಕಾರ್ಯಗಳು ನಿಮಗೆ ಪ್ರಶಂಸೆಯನ್ನು ತಂದುಕೊಡುವುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Aug 23, 2023 | 12:30 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಬ್ರಹ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:43 ರಿಂದ 02:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:01 ರಿಂದ 12:35ರ ವರೆಗೆ.

ಮೇಷ ರಾಶಿ : ಸಾಮಾಜಿಕ ಕಾರ್ಯಗಳು ನಿಮಗೆ ಪ್ರಶಂಸೆಯನ್ನು ತಂದುಕೊಡುವುದು. ಅಂದುಕೊಂಡ ಕಾರ್ಯವು ಪೂರ್ಣವಾಗಿ ಆಗುವುದಿಲ್ಲ. ಮಾತುಗಳನ್ನು ಇಂದು ಕಡಿಮೆ ಮಾಡಿಕೊಳ್ಳುವಿರಿ. ಸಂಪತ್ತಿನ‌ ನಿರ್ವಹಣೆಯನ್ನು ಮಾಡಲು ನೀವು ಸಮರ್ಥರಾಗುವಿರಿ. ಅಪರಿಚಿತರು ನಿಮ್ಮನ್ನು ಭೇಟಿಯಾಗಲಿದ್ದಾರೆ. ಸಂಗಾತಿಯಿಂದ ಉಡುಗೊರೆ ಸಿಗಲಿದೆ. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ಕೃಷಿಯಲ್ಲಿ ನಿಮಗೆ ಸ್ವಲ್ಪ ಆಸಕ್ತಿಯು ಬರುವುದು. ವಿದ್ಯಾರ್ಥಿಗಳ ಯಶಸ್ಸಿನಲ್ಲಿ ನಿಮ್ಮ ಪಾಲೂ ಇರುವುದು. ನಿಮ್ಮನ್ನು ನೇರವಾಗಿ ಕೇಳಿದ್ದಕ್ಕೆ ಮಾತ್ರ ಉತ್ತರಿಸುವುದು ಒಳ್ಳೆಯದು.

ವೃಷಭ ರಾಶಿ : ಬರುವ ಅಲ್ಪ ಆದಾಯವನ್ನು ನೀವು ರಕ್ಷಿಸಿಕೊಳ್ಳಲು ಪ್ರಯತ್ನಿಸುವಿರಿ. ಕುಟುಂಬಕ್ಕೆ ನಿಮ್ಮ ಮೇಲೆ ಪ್ರೀತಿಯು ಅಧಿಕವಾಗಲಿದೆ. ಓಡಾಟದಿಂದ ಆಯಾಸಗೊಳ್ಳುವಿರಿ. ಬಂಧುಗಳಿಂದ ಸಲ್ಲದ ಮಾತುಗಳು ಕೇಳಿಬರಬಹುದು. ಆಸ್ತಿಯ ವಿಚಾರದಲ್ಲಿ ವಾದಗಳು ಆಗಬಹುದು. ಆಲಸ್ಯದಿಂದ ನಿಮ್ಮ ಎಲ್ಲ ಕೆಲಸಗಳೂ ಹಾಗೆಯೇ ಉಳಿಯಬಹುದು. ಯಾವುದನ್ನೂ ನೀವು ಅತಿಯಾಗಿ ಇಷ್ಟಪಡದೇ ಇರುವುದು ಉತ್ತಮ. ಅನಂತರ ಇದರಿಂದ ದುಃಖಿಸಬೇಕಾಗಬಹುದು. ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ಆರೋಗ್ಯವು ಹದ ತಪ್ಪುವ ಸಾಧ್ಯತೆ ಇದೆ.

ಮಿಥುನ ರಾಶಿ : ನಿಮ್ಮ ಕುಶಲ ಕಾರ್ಯಗಳು ಇತರರಿಗೂ ಗೊತ್ತಾದೀತು. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ನಿಮ್ಮ ಕಡೆಯಿಂದ ಅಮೂಲ್ಯವಾದ ಉಡುಗೊರೆಯನ್ನು ಕೊಡುವಿರಿ. ನಿಮ್ಮನ್ನು ಹಾಸ್ಯವಾಗಿ ಯಾರದರೂ ಕಾಣಬಹುದು. ನಿಮ್ಮ ಬಗ್ಗೆ ನಿಕವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರಿಗೆ ಗೊತ್ತಾಗುವುದು. ಸಂಗಾತಿಗೆ ನೀವು ಸಹಾಯವನ್ನು ಮಾಡುವಿರಿ. ಸಂಗಾತಿಯ ಜೊತೆ ಸಂತೋಷದಿಂದ ಇರುವಿರಿ. ಸಂಪತ್ತಿನ ಉಳಿತಾಯದ ಮಾರ್ಗವನ್ನು ನೀವು ಕಂಡುಕೊಳ್ಳುವಿರಿ. ನಿಮಗೆ ಸಿಗದೇ ಇರುವ ಜವಾಬ್ದಾರಿಯ ಬಗ್ಗೆ ಸಿಮಗೆ ಸ್ವಲ್ಪ ಅಸಮಾಧನ ಇರಬಹುದು. ಮುಚ್ಚು ಮರೆ ಇಲ್ಲದೇ ಎಲ್ಲವನ್ನೂ ಆಪ್ತರ ಜೊತೆ ಹಂಚಿಕೊಳ್ಳುವ ಸಂಭವವಿದೆ.

ಕರ್ಕ ರಾಶಿ : ವಿದ್ಯಾರ್ಥಿಗಳ ಪ್ರಗತಿಯ ವಿಷಯವು ಮಂದಗತಿಯಲ್ಲಿಯೇ ಇರುವುದು. ನಂಬಿಕೆಯನ್ನು ಉಳಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಕಷ್ಟವಾದೀತು. ಆದಾಯ ಮೂಲದ ಬಗ್ಗೆ ನಿಮಗೇ ಸಂತೃಪ್ತಿ ಇರದು. ನಿಮ್ಮದೇ ಸರಿ ಎಂಬ ಅಹಂ ಭಾವವು ಇನ್ನೊಬ್ಬರ ಮನಸ್ಸಿನ ಮೇಲೆ ಪರಿಣಾಮವನ್ನು ಉಂಟುಮಾಡೀತು. ನಿಮ್ಮ ಬಳಿ‌ ಕೇಳಿದರಷ್ಟೇ ಸಲಹೆಯನ್ನು ಕೊಡಿ.‌ ತಂದೆಯ ಕೋಪಕ್ಕೆ ನೀವು ಗುರಿಯಾಗಬಹುದು. ಕಛೇರಿಯಲ್ಲಿ ನಿಮಗೆ ಆಗದವರ ಸಂಗವು ನಿರ್ಮಾಣವಾಗಲಿದೆ. ಶುಭ ಸಮಾರಂಭಗಳಿಗೆ ಭೇಟಿ ಕೊಡುವಿರಿ. ಸರ್ಕಾರದ ಕೆಲಸವು ಸ್ವಲ್ಪ ವೇಗವನ್ನು ಪಡೆದುಕೊಳ್ಳುವುದು. ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳಬೇಕಾದೀತು.

-ಲೋಹಿತಶರ್ಮಾ – 8762924271 (what’s app only)

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್