AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ದುರ್ಬಲರಿಗೆ ಸಹಾಯ ಮಾಡುವಿರಿ, ನಕಾರಾತ್ಮಕತೆಗೆ ಅವಕಾಶ ಬೇಡ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ದುರ್ಬಲರಿಗೆ ಸಹಾಯ ಮಾಡುವಿರಿ, ನಕಾರಾತ್ಮಕತೆಗೆ ಅವಕಾಶ ಬೇಡ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 23, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 23 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ:ಮೂಲಾ, ಯೋಗ:ಸೌಭಾಗ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 27 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:24 ರಿಂದ 10:54 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:56 ರಿಂದ 03:26 ರವರೆಗೆ, ಗುಳಿಕ ಕಾಲ ಸಂಜೆ 06:23 ರಿಂದ 07:53ರ ವರೆಗೆ.

ಮೇಷ ರಾಶಿ: ನಿಮ್ಮ‌ಖರ್ಚಿನಿಂದಲೇ ಪ್ರಯಾಣವನ್ನು ಮಾಡುವಿರಿ. ಪೂರ್ವಾಗ್ರಹವಿಲ್ಲದೇ ಮಾತನಾಡುವುದು ಸೂಕ್ತ. ಮಿತ್ರರ ಸಲಹೆಗಳು ನಿಮಗೆ ಪೂರಕ ಮಾನಸಿಕತೆಯನ್ನು ತಂದುಕೊಡಬಹುದು.‌ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಯಶಸ್ಸನ್ನು ಪಡೆಯುವ ಹಂಬಲದಿಂದ ಏನಾದರೂ ಮಾಡಿಕೊಳ್ಳುವಿರಿ. ಸಿಕ್ಕ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ಹೂಡಿಕೆಯತ್ತ ಗಮನಹರಿಸುವುದು ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ನಕಾರಾತ್ಮಕತೆಗೆ ಅವಕಾಶ ಬೇಡ. ಪ್ರಯಾಣವು ಅನಿವಾರ್ಯವಾದರೆ ಮಾಡಿ. ಅನಗತ್ಯ ಖರ್ಚನ್ನು ನಿಲ್ಲಿಸುವಿರಿ. ಹೊರಗಡೆಯ ಆಹಾರದಿಂದ ಅನಾರೋಗ್ಯವು ಅಧಿಕವಾಗಬಹುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಕಾಣಬಹುದು.

ವೃಷಭ ರಾಶಿ: ಖಾಸಗಿ ಉದ್ಯೋಗದಲ್ಲಿ ನಿಮಗೆ ಮನ್ನಣೆಯು ಸಿಗುವುದು. ನಿಮ್ಮ ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವಿದ್ಯಾರ್ಥಿಗಳ ಬಗ್ಗೆ ಅಸಮಾಧನವು ಇರುವುದು. ಉದ್ವೇಗಕ್ಕೆ ಒಳಗಾಗುವ ಸಂದರ್ಭವು ಬರಬಹುದು. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವುದಿಲ್ಲ. ದ್ವೇಷವನ್ನು ಮರೆತು ಪ್ರೀತಿಯಿಂದ ಇರುವಿರಿ. ಆಪದ್ಧನವನ್ನು ವಿನಿಯೋಗ ಮಾಡುವ ಸ್ಥಿತಿಯು ಬರುವುದು. ದುರಾಲೋಚನೆಯು ನಿಮ್ಮ ಸಂತೋಷಕ್ಕೆ ತೊಂದರೆಯನ್ನು ಕೊಡಬಹುದು. ಮನೆಗೆ ಬೇಕಾಗಿ ವಸ್ತುಗಳನ್ನು ಖರೀದಿಸುವಿರಿ. ಸಾಧ್ಯವೆನಿಸಿದ ಕಾರ್ಯವನ್ನಷ್ಟನ್ನೇ ಮಾಡಿ. ತಂತ್ರಜ್ಞರಿಗೆ ಕೆಲವು ಅವಕಾಶಗಳು ಸಿಗಬಹುದು. ಕುಲದೇವರ ಸ್ತೋತ್ರವನ್ನು ಪಠಿಸಿ.

ಮಿಥುನ ರಾಶಿ: ಉದ್ಯಮವು ಯಶಸ್ಸಿನ ಒಂದೊಂದೇ ಹಂತವನ್ನು ಏರಲಿದೆ. ಸಹೋದರರ ಬಾಂಧವ್ಯವು ಸಡಿಲಾಗುವುದು. ಇಂದಿನ‌ ಕಾರ್ಯದಲ್ಲಿ ರೋಚಕತೆ ಕಾಣಿಸುವುದು. ಹತ್ತಾರು ವಿಚಾರಗಳನ್ನು ನೀವು ಒಂದೇ ಬಾರಿ ಅಲೋಚಿಸುವಿರಿ. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ. ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಆರೋಗ್ಯವು ವ್ಯತ್ಯಾಸವಾದ ಕಾರಣ ಕಷ್ಟವಾದೀತು. ನಿಮ್ಮ ನಿರ್ಧಾರವನ್ನು ಬದಲು ಮಾಡಿದ್ದಕ್ಕೆ ಬೇಸರವಾದೀತು. ಹೇಳಲಾಗದ ಒಂದು ವಿಚಾರವನ್ನು ಹೇಳಲು ಭಯವು ನಿಮ್ಮನ್ನು ಕಾಡಬಹುದು. ಆಭರಣವನ್ನು ಖರೀದಿಸಲು ಸಂಗಾತಿಯನ್ನು ಪೀಡಿಸುವಿರಿ. ಏಕಾಂತವು ಬೇಕು ಎಂದು ಅನ್ನಿಸದೇ ಇದ್ದರೂ ಹಾಗಯೇ ಇರುವಿರಿ. ಮಹಾವಿಷ್ಣುವಿನ ಸ್ತೋತ್ರವನ್ನು ಪಠಿಸಿ.

ಕಟಕ ರಾಶಿ: ಕೆಲಸಕ್ಕೋಸ್ಕರ ನಿಮ್ಮನ್ನು ಹೊಗಳುವರು. ಎಚ್ಚರಿಕೆ ಇರಲಿ. ಕೆಲಸ ಕಾರ್ಯಗಳಲ್ಲಿ ಪೂರ್ಣಜಯವು ಪ್ರಾಪ್ತವಾಗದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು. ನೀವು ಸ್ವಾರ್ಥಿಗಳಂತೆ ಕಾಣುವಿರಿ ಅಷ್ಟೇ. ಎಲ್ಲವೂ ನಿಮ್ಮದಾಗಬೇಕು ಎನ್ನುವ ಬಯಕೆ ಇರಿವುದು. ಆರ್ಥಿಕತೆಯ ವೃದ್ಧಿಗಾಗಿ ತಂತ್ರವನ್ನು ಮಾಡುವಿರಿ. ಪ್ರಭಾವೀ ವ್ಯಕ್ತಿಗೆ ಮೆಚ್ಚಿಸಿ ಅಧಿಕಾರವನ್ನು ಪಡೆಯುವಿರಿ. ಸಿಗದ ವಸ್ತುವಿನ ಬಗ್ಗೆ ಅತಿಯಾದ ಮೋಹವನ್ನು ಬೆಳೆಸಿಕೊಳ್ಳುವುದು ಬೇಡ. ನಿಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಮನೆಗೆ ಬರುವಿರಿ. ನಿಮ್ಮ ತಪ್ಪಿನಿಂದ ಪಶ್ಚಾತ್ತಾಪಪಡಬೇಕಾದೀತು. ಮನಸ್ಸು ಬಹಳ ಚಂಚಲವಾಗಿ ಇರುವಿದು.