AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಜನಸಾಮಾನ್ಯರ ಜೊತೆ ಬೆರೆಯುವುದು ಆಗದು, ನಕಾರಾತ್ಮಕ ವಿಚಾರಗಳಿಂದ ದೂರವಿರುವುದು ಉತ್ತಮ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆ ಜನಸಾಮಾನ್ಯರ ಜೊತೆ ಬೆರೆಯುವುದು ಆಗದು, ನಕಾರಾತ್ಮಕ ವಿಚಾರಗಳಿಂದ ದೂರವಿರುವುದು ಉತ್ತಮ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 24, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 24 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಐಂದ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:08 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:21 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:28 ರಿಂದ 11:01ರ ವರೆಗೆ.

ಮೇಷ ರಾಶಿ: ನೌಕರರ ಬಗ್ಗೆ ನಿಮಗೆ ಕಾಳಜಿ‌ ಇರುವುದು. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮಾಡುವ ಕೌಶಲವು ನಿಮ್ಮದಾಗಲಿದೆ. ರಪ್ತು ವ್ಯವಹಾರವು ನಿಮಗೆ ಲಾಭದಾಯಕವಾಗಲಿದೆ. ಉದ್ಯಮಿಗಳು ಇಂದು ನಿಮ್ಮನ್ನು ಭೇಟಿಯಾಗಬಹುದು. ಭೂಮಿಯ ಖರೀದಿಗೆ ಸೂಕ್ತ ಸಮಯವು ಇದಾಗಿದೆ. ಸಂಗಾತಿಯ ವಿಚಾರಕ್ಕೆ ನೀವು ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಮನಸ್ಸಿನ ಚಾಂಚಲ್ಯವನ್ನು ನೀವು ನಿಗ್ರಹಿಸುವ ವಿಧಾನವನ್ನು ಕಂಡಿಲುಕೊಂಡಿರುವಿರಿ. ಅಧಿಕೃತ ಮೂಲದಿಂದ‌ ಬಂದ ವಿಚಾರಗಳನ್ನು ಮಾತ್ರ ನಂಬಿ. ನಿಮ್ಮ ಬಗ್ಗೆ ಅತಿಯಾದ ಆತ್ಮವಿಶ್ವಾಸವು ಇರಲಿದ್ದು ಕೆಲವು ಕೆಲಸಗಳಿಗೆ ಇದು ತೊಡಕನ್ನು ತಂದೀತು.

ವೃಷಭ ರಾಶಿ: ಹೇಳಬೇಕಾದ‌ ವಿಚಾರವನ್ನು ನೀವು ಸರಿಯಾಗಿ ಹೇಳಿ.‌ ಬೇರೆಯವರನ್ನು ಗೊಂದಲಕ್ಕೆ ನೀವು ಸಿಕ್ಕಿಹಾಕಿಸುವುದು ಬೇಡ. ನಿಮ್ಮ ಕಾರ್ಯದಲ್ಲಿ ಮಗ್ನತೆಯು ಎಲ್ಲಿರಿಗೂ ಇಷ್ಟವಾಗುವುದು. ನೀವು ಹೋದಕಡೆ ನಿಮಗೆ ಬೇಕಾದ ವಾತಾವರಣವನ್ನು ಸೃಷ್ಟಿಸಿಕೊಳ್ಳುವಿರಿ. ಕೇಳಿ ಬಂದವರಿಗೆ ನೀವು ಇಂದು ಧನ ಸಹಾಯವನ್ನು ಮಾಡುವಿರಿ. ಮಕ್ಕಳ‌ ಆರೋಗ್ಯದ ಮೇಲೆ ನಿಗಾ ಇರಲಿ. ಹೆಚ್ಚಿ‌ನ ಆದಾಯಕ್ಕೆ ನೀವು ಯೋಜನೆಯನ್ನು ರೂಪಿಸುವಿರಿ. ಅಧ್ಯಾತ್ಮದಲ್ಲಿ ನಿಮಗೆ ನಿರಾಸಕ್ತಿಯು ಉಂಟಾಗಬಹುದು. ಏಕತಾನತೆಯಿಂದ ಹೊರಬರಲು ಪ್ರಯತ್ನಿಸುವಿರಿ.

ಮಿಥುನ ರಾಶಿ: ಬೇಕಾದ ವಸ್ತುಗಳನ್ನು ಖರೀದಿಸುವ ಉತ್ಸಾಹದಲ್ಲಿ ಅನಗತ್ಯ ವಸ್ತುಗಳನ್ನು ಖರೀದಿಸುವಿರಿ. ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗುವರು. ಯಾರೋ‌ ಮಾಡಬೇಕಾದ ಕೆಲಸವನ್ನು ನೀವು ಮಾಡುವಿರಿ. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತಾತ್ಕಾಲಿಕವಾಗಿ ಸಾಲವನ್ನು ಮಾಡಬೇಕಾಗಬಹುದು. ಸ್ನೇಹಿತರ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಕೆಲಸದ ಒತ್ತಡದಿಂದ ನಿಮಗೆ ಇಂದು ಆಯಾಸವಾಗಬಹುದು. ತಲೆನೋವು ನಿಮ್ಮ ಉತ್ಸಾಹವನ್ನು ಕಡಿಮೆ ಮಾಡಬಹುದು.

ಕಟಕ ರಾಶಿ: ನಿದ್ರೆ ಇಲ್ಲದೇ ಮಾನಸಿಕ‌ ಕಿರಿಕಿರಿಯು ಅಧಿಕವಾಗುವುದು. ಸ್ಪರ್ಧೆಯಲ್ಲಿ ಗೆಲುವಿಗಾಗಿ ನಿಮ್ಮ ಶ್ರಮವು ವ್ಯರ್ಥವಾದೀತು. ಆಸ್ತಿಯ ವಿಚಾರಕ್ಕೆ ನೆರಮನೆಯವರ ಜೊತೆ ಕಲಹವಾಗಬಹುದು. ಸಂಗಾತಿಯಿಂದ ನಿಮಗೆ ಬೆಂಬಲವು ಪೂರ್ಣವಾಗಿ ಸಿಗದೇ ಇರಬಹುದು. ಧಾರ್ಮಿಕ ವಿಷಯದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಇರುವುದು. ನಕಾರಾತ್ಮಕ ಚಿಂತನೆಯನ್ನು ದೂರ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೀಗುವುದು ಬೇಡ.‌ ಜನಸಾಮಾನ್ಯರ ಜೊತೆ ಬೆರೆಯುವುದು ನಿಮಗೆ‌ ಆಗದು. ಮಾತನಾಡುವಾಗ ಬಹಳ ಆಯ್ಕೆ ಮಾಡುವಿರಿ. ಇನ್ನೊಬ್ಬರ ಸಂಕಷ್ಟಕ್ಕೆ ನಿಮಗಮ ಸ್ಪಂದನೆಯು ಇರದು.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..