Daily Horoscope: ಈ ರಾಶಿಯವರಿಗೆ ಇಂದು ಸಂಗಾತಿಯಿಂದ ಮಾನಸಿಕ ಕಿರಿಕಿರಿ ಉಂಟಾಗಬಹುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರಿಗೆ ಇಂದು ಸಂಗಾತಿಯಿಂದ ಮಾನಸಿಕ ಕಿರಿಕಿರಿ ಉಂಟಾಗಬಹುದು
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 24, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 24 ಸೋಮವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಶಿವ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:51 ರಿಂದ 09:27 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ.

ಮೇಷ: ಉಪಾಯದಿಂದ ನಿಮ್ಮ ಸ್ಥಾನವನ್ನು ಗಟ್ಟಿಮಾಡಿಕೊಳ್ಳುವಿರಿ. ಕೃಷಿಯಲ್ಲಿ ಆಸಕ್ತಿಯು ನಿಮಗೆ ಹೆಚ್ಚಾಗಲಿದೆ. ಇನ್ನೊಬ್ಬರ ಬಗ್ಗೆ ಸದ್ಭಾವನೆ ಇರಲಿ. ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯಲ್ಲಿ ನೀವು ಇರುವಿರಿ.‌ ನಿಮ್ಮ ಸಾಮರ್ಥ್ಯದ ಪರೀಕ್ಷೆಯು ಇಂದು ಆಗಬಹುದು. ಇಷ್ಟವಾದುದನ್ನು ಬಿಟ್ಟುಕೊಡಬೇಕಾದೀತು. ಎಲ್ಲದಕ್ಕೂ ಇನ್ನೊಬ್ಬರನ್ನು ದೂರುವಿರಿ. ಖರ್ಚಿನ‌ ಮೇಲೆ‌ ಹಿಡಿತವಿರಲಿ. ವ್ಯಕ್ತಿತ್ವವನ್ನು ನೀವು ಸುಧಾರಿಸಿಕೊಳ್ಳುವತ್ತ ಗಮನ ಇರಲಿ. ನಿಮ್ಮ ಬಗ್ಗೆ ಆಡಿಕೊಳ್ಳುವವರಿಗೆ ಉತ್ತರಿಸಲು ಹೋಗುವುದು ಬೇಡ. ಸರ್ಕಾರಿ ಕೆಲಸದ ವೇಗವನ್ನು ನೀವು ಹೆಚ್ಚಿಸಿ ಆಗಬೇಕಾದುದನ್ನು ಮಾಡಿಸಿಕೊಳ್ಳುವಿರಿ.

ವೃಷಭ: ಕರ್ತವ್ಯದಲ್ಲಿ ನಿರಾಸಕ್ತಿ ಬರಬಹುದು. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರಲ ಬಯಸುವಿರಿ. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ಹೆಚ್ಚಾಗಲಿದೆ. ಪ್ರವಾಸವನ್ನು ಹೆಚ್ಚು ಮಾಡುವ ಆಸಕ್ತಿಯನ್ನು ಹೊಂದಿರುವಿರಿ. ನಿಮ್ಮ ವರ್ತನೆಯು ಅಹಂಕಾರದಂತೆ ತೋರಲಿದೆ. ಹಣವನ್ನು ಬಹಳ ಜೋಪಾನವಾಗಿ ಇಟ್ಟುಕೊಳ್ಳಿ. ಇಷ್ಟ ಮಿತ್ರರ ಸಹವಾಸವು ಸಿಗಬಹುದು. ಕಳೆದ ಸಂದರ್ಭಗಳನ್ನು ಬಹಳ ಇಷ್ಟಪಡುವಿರಿ. ಭವಿಷ್ಯದ ಬಗ್ಗೆ ಚಿಂತೆ ಆರಂಭವಾಗಲಿದೆ. ಹಿರಿಯರಿಂದ ಸಮಾಧಾನವೂ ಸಿಗಬಹುದು.

ಮಿಥುನ: ಹಣಕಾಸಿನ ವಿಚಾರಕ್ಕೆ ದಾಂಪತ್ಯದಲ್ಲಿ ಕಲಹವುಂಟಾಗಿ ಕೊನೆಗೆ ಮೌನದಲ್ಲಿ ಮುಕ್ತಾಯವಾಗಬಹುದು. ಕುಟುಂದ ಜೊತೆ ಸಮಯವನ್ನು ಕೊಡುವುದು ಇಂದು ಕಷ್ಟವಾದೀತು. ನಿಮ್ಮ ಸಿಟ್ಟನ್ನು ಎಲ್ಲ ಕಡೆಗಳಲ್ಲಿ ತೋರಿಸುವುದು ಬೇಡ. ಸುಮ್ಮನೇ ವ್ಯರ್ಥವಾದೀತು. ಇರುವುದರಲ್ಲಿ ಸುಖಪಡುವುದನ್ನು ಕಲಿತುಕೊಳ್ಳುವುದು ಉತ್ತಮ. ನಿಮ್ಮವರ ಪ್ರೀತಿಯನ್ನು ನೀವು ಗಳಿಸುವಿರಿ. ಒಂದೇ ಕೆಲಸವನ್ನು ಹೆಚ್ಚು ಸಮಯ ಮಾಡಲು ನಿಮಗೆ ಇಷ್ಟವಾಗದು. ಆಸ್ತಿ ಖರೀದಿಯ ಬಗ್ಗೆ ನಿಮಗೆ ಸ್ಪಷ್ಟತೆ ಸಾಕಾಗದು. ಮಾಧ್ಯಮದಲ್ಲಿ ಇರುವವರು ಹೆಚ್ಚು ಪ್ರಚಾರವನ್ನು ಪಡೆಯುವರು. ಕಲಾವಿದರಿಗೆ ಕೆಲವು ಒಳ್ಳೆಯವ ಅವಕಾಶಗಳು ಸಿಗಲಿವೆ.

ಕಟಕ: ಮೋಸ ಹೋಗುವ ಸಾಧ್ಯತೆ ಇದೆ. ಮನೋಬಲವನ್ನು ಹೆಚ್ಚಿಸಿಕೊಳ್ಳುವ ವಿಧಾನವನ್ನು ತಿಳಿಯುವುದು ಒಳ್ಳೆಯದು. ಸುಮ್ಮನೇ ಮಾತನಾಡುವುದು ವ್ಯರ್ಥ ಎಂದು ನಿಮಗೆ ಅನ್ನಿಸಬಹುದು. ಯಾರ ಮೇಲೋ ನಿಮ್ಮ ಅನುಮಾನ ಬರಬಹುದು. ನಿಮ್ಮ‌ ಬಗ್ಗೆ ಬಂಧುಗಳು ಆಡಿಕೊಳ್ಳಬಹುದು. ಸಂಗಾತಿಯಿಂದ ಮಾನಸಿಕ ಕಿರಿಕಿರಿಯಾಗಲಿದೆ. ಪ್ರತಿಭೆಗೆ ಅವಕಾಶಗಳು ಕಡಿಮೆ ಸಿಗಬಹುದು. ವೃತ್ತಿಯಲ್ಲಿ ನೀವು ಸ್ವಸ್ಥಾನವನ್ನು ಭದ್ರವಾಗಿರಿಸಿಕೊಳ್ಳಲು ಪ್ರಯತ್ನಿಸಿ. ಇನ್ನೊಬ್ಬರನ್ನು ನೋಡಿ ಖುಷಿಯಿಂದ ಇರುವುದನ್ನು ಕಲಿಯುವ ಅವಶ್ಯಕತೆ ಇದೆ.

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ