Horoscope: ದಿನಭವಿಷ್ಯ, ಈ ರಾಶಿಯವರು ಕೇಳಿ ಬಂದವರಿಗೆ ಇಂದು ಧನ ಸಹಾಯವನ್ನು ಮಾಡುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ಕೇಳಿ ಬಂದವರಿಗೆ ಇಂದು ಧನ ಸಹಾಯವನ್ನು ಮಾಡುವಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 24, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 24 ಮಂಗಳವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:12 ರಿಂದ 04:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:22 ರಿಂದ 10:49ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:17 ರಿಂದ 01:44ರ ವರೆಗೆ.

ಮೇಷ ರಾಶಿ: ಸ್ನೇಹಿತರಿಂದ ಸಿಕ್ಕ ಬೆಂಬಲವು ನಿಮಗೆ ಭವಿಷ್ಯಕ್ಕೆ ಉತ್ಸಾಹವನ್ನು ಕೊಡುವುದು. ಪಾಲುದಾರಿಕೆಯು ನಿಮಗೆ ಮೋಸದಂತೆ ಕಾಣುವುದು. ಶತ್ರುಗಳ ಬಗ್ಗೆ ಯಾರಾದರೂ ಕಿವಿಚುಚ್ಚುವರು. ನೀರಿನ ಸ್ಥಳದಲ್ಲಿ ಎಚ್ಚರಿಕೆಯಿಂದ ಇರಿ. ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಆಮದು ವ್ಯವಹಾರವು ಸ್ವಲ್ಪ ಲಾಭವನ್ನು ಕೊಡುವುದು. ಉದ್ಯಮಿಗಳ ಭೇಟಿ ಮಾಡುವಿರಿ. ಭೂಮಿಯ ಖರೀದಿಗೆ ಸೂಕ್ತ ಸಮಯವಿದ್ದು ಇಷ್ಟಪಟ್ಟ ಭೂಮಿಯು ಸಿಗುವುದು. ಸಂಗಾತಿಯ ಮಾತಿನಿಂದ ನೀವು ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಮನಸ್ಸಿನ ಚಾಂಚಲ್ಯವನ್ನು ಯೋಗವೇ ಮದ್ದಾಗಲಿದೆ. ಅಧಿಕೃತ ಮೂಲದಿಂದ‌ ಬಂದ ವಿಚಾರಗಳನ್ನು ಮಾತ್ರ ನಂಬಿ. ಗಾಳಿ ಸುದ್ದಿಯನ್ನಲ್ಲ. ನಿಮ್ಮ ಬಗ್ಗೆ ಅತಿಯಾದ ಆತ್ಮವಿಶ್ವಾಸವು ಇರಲಿದೆ.

ವೃಷಭ ರಾಶಿ: ನಿಮ್ಮ ಪ್ರಯತ್ನಕ್ಕೆ ಸರಿಯಾದ ಫಲವು ಸಿಗುವುದು. ಆದಾಯವನ್ನು ನಿರೀಕ್ಷಿತ ಖರ್ಚಿನ ಬಗ್ಗೆ ನಿಯಂತ್ರಣ ಬೇಕು. ನಿಮ್ಮ ಗುರಿಯನ್ನು ಬದಲಾಯಿಸುವುದು ಬೇಡ. ಹೇಳಬೇಕಾದ‌ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.‌ ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿಹಾಕಿಸುವುದು ಬೇಡ. ನಿಮ್ಮ ಕಾರ್ಯದಲ್ಲಿನ ಶಿಸ್ತು ಉಳಿದವರಿಗೆ ಕಷ್ಟವಾದೀತು. ನೀವು ಹೋದಕಡೆ ನಿಮಗೆ ಬೇಕಾದ ಹಾಗೆ ವಾತಾವರಣವನ್ನು ಸೃಷ್ಟಿಸಿಕೊಳ್ಳುವಿರಿ. ಕೇಳಿ ಬಂದವರಿಗೆ ನೀವು ಇಂದು ಧನ ಸಹಾಯವನ್ನು ಮಾಡುವಿರಿ. ಮಕ್ಕಳ‌ ಆರೋಗ್ಯವು ಕೆಡಬಹುದು. ಹೆಚ್ಚಿ‌ನ ಆದಾಯಕ್ಕೆ ನೀವು ಚಿಂತನೆ ನಡೆಸುವಿರಿ. ಅಧ್ಯಾತ್ಮದಲ್ಲಿ ನಿಮಗೆ ನಿರಾಸಕ್ತಿಯು ಉಂಟಾಗಬಹುದು. ಏಕತಾನತೆಯಿಂದ ಹೊರಬರುವಿರಿ.

ಮಿಥುನ ರಾಶಿ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ಅಲ್ಪ ಕಾರ್ಯದಿಂದ ಎಲ್ಲವೂ ಸಿದ್ಧಿಸುವುದಾದರೂ ಅಧಿಕ ಶ್ರಮವಿರುವುದು. ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗಲಿದ್ದಾರೆ. ಯಾರೋ‌ ಮಾಡಬೇಕಾದ ಕೆಲಸಕ್ಕೆ ನೀವು ಹೋಗಬೇಕಾದೀತು. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತುರ್ತಾಗಿ ಸಾಲವನ್ನು ಮಾಡಬೇಕಾಗುವುದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ನಿಮ್ಮ ವೃತ್ತಿಯಿಂದ ಹೆಚ್ಚಿನ ಆದಾಯವನ್ನು ನಿರೀಕ್ಷಿಸುವಿರಿ. ಸಂಗಾತಿಯು ನಿಮ್ಮನ್ನು ಬೆಂಬಲಿಸರು.

ಕಟಕ ರಾಶಿ: ನಿಮ್ಮನ್ನು ವಿರೋಧಿಸುವವರು ಹೆಚ್ಚಾದಾರು. ವಿರೋಧಿಗಳನ್ನು ಲೆಕ್ಕಿಸದೇ ನಿಮ್ಮಷ್ಟಕ್ಕೆ ಇರುವಿರಿ. ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ನಿದ್ರೆ ಇಲ್ಲದೇ ಮಾನಸಿಕ‌ವಾಗಿ ಕುಗ್ಗುವಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ಆಸ್ತಿಯ ವಿಚಾರಕ್ಕೆ ನೆರಮನೆಯವರ ಜೊತೆ ಕಲಹವಾಗಲಿದೆ. ಸಂಗಾತಿಯಿಂದ ನಿರೀಕ್ಷಿತ ಬೆಂಬಲವು ಸಿಗದು. ಧಾರ್ಮಿಕ ವಿಷಯದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗಲಿದೆ. ಸಕಾರಾತ್ಮಕ ಚಿಂತನೆಯನ್ನು ದೂರ ಮಾಡಿಕೊಳ್ಳುವಿರಿ.‌ ಸದಾ ಅನುಮಾನದಿಂದಲೇ ಇರುವಿರಿ.‌ ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೋಗುವುದು ಬೇಡ.‌ ಜನಸಾಮಾನ್ಯರ ಜೊತೆ ಬೆರೆಯುವುದು ಇಷ್ಟವಾಗದು. ಕುತೂಹಲದಲ್ಲಿ ಈ ದಿನವನ್ನು ಕಳೆಯುವಿರಿ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ