Daily Horoscope: ಹೊಸತನ್ನು ಕಲಿಯುವ ಹಂಬಲ ಕಡಿಮೆ, ನಿಮ್ಮ ಬೆಂಬಲಕ್ಕೆ ಯಾರೂ ಬರದಿರುವುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಹೊಸತನ್ನು ಕಲಿಯುವ ಹಂಬಲ ಕಡಿಮೆ, ನಿಮ್ಮ ಬೆಂಬಲಕ್ಕೆ ಯಾರೂ ಬರದಿರುವುದು
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 25, 2023 | 12:15 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 25 ಮಂಗಳವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಸಿದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:51 ರಿಂದ 05:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:27 ರಿಂದ 11:03ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:39 ರಿಂದ 02:15ರ ವರೆಗೆ.

ಮೇಷ: ಅನಿವಾರ್ಯ ಕಾರಣದಿಂದ ನಿಮ್ಮ ಇಂದಿನ ಯೋಜನೆಯನ್ನು ಬದಲಿಸಬೇಕಾಗುವುದು. ಸಿಟ್ಟುಗೊಳ್ಳುವ ಸಂದರ್ಭದಲ್ಲಿ ನಿಮ್ಮ ನಿಯಂತ್ರಣವನ್ನು ಕಳೆದುಕೊಳ್ಳುವುದು ಬೇಡ. ಸಂಗಾತಿಯನ್ನು ನೀವು ಬೇಸರಿಸಿ ಸಮಾಧಾನ ಮಾಡುವಿರಿ. ನಿದ್ರೆಯನ್ನು ಅಧಿಕವಾಗಿ ಮಾಡಲಿದ್ದೀರಿ. ಸಹೋದರರ ಭೇಟಿಯು ಸಂತಸವನ್ನು ನೀಡುವುದು. ನೌಕರರಿಂದ ನಿಮ್ಮ ಕೆಲಸವು ಸುಲಭವಾಗುವುದು. ಮನೆಯಲ್ಲಿ ನೆಮ್ಮದಿಯ ಕೊರತೆ ಇದ್ದ ಕಾರಣ ವಾಯುವಿಹಾರವನ್ನು ಸ್ನೇಹಿತರ‌ ಜೊತೆ ಮಾಡುವಿರಿ. ಒತ್ತಡವನ್ನು ಉಪಾಯದಿಂದ ಕಡಿಮೆ ಮಾಡಿಕೊಳ್ಳುವಿರಿ.

ವೃಷಭ: ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಜಯವು ಸಿಗಲಿದೆ. ಹಳೆಯ ಖಾಯಿಲೆಯು ಮರುಕಳಿಸಿದ್ದರಿಂದ ಸಂಕಟಪಡುವಿರಿ. ಗೆಳೆಯರ ಸಹವಾಸವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ. ಮುಖಂಡರಾಗಿ ಪಕ್ಷಪಾತವನ್ನು ಮಾಡುವುದು ಯೋಗ್ಯವಾಗದು. ನಿಮಗೆ ಹೆಚ್ಚು ವಿದ್ಯಾಭ್ಯಾಸವನ್ನು ಮಾಡಬೇಕು ಎಂದನಿಸಬಹುದು. ಮನೆಯಿಂದ ದೂರವಿರಲು ಇಷ್ಟಪಡುವಿರಿ. ಬರುವ ಹಣದ ನಿರೀಕ್ಷೆಯಲ್ಲಿ ಇರುವಿರಿ. ಸಾಹಸಕ್ಕೆ ಹೋಗುವುದು ಬೇಡ. ಇರುವ ಉದ್ಯೋಗವನ್ನು ಸರಿಯಾಗಿ ಮಾಡಲು ಪ್ರತ್ನಿಸುವುದು ಉತ್ತಮ.

ಮಿಥುನ: ನಿಮ್ಮವರೇ ಆದರೂ ನೀವು ನಂಬಿಕೆಯನ್ನು ಇಡಲಾರಿರಿ. ಹೊಸತನ್ನು ಕಲಿಯುವ ಹಂಬಲವು ಕಡಿಮೆಯಾಗಬಹುದು. ನಿಮ್ಮದೇ ರೀತಿಯ ಮಾರ್ಗದಲ್ಲಿ ನೀವು ಮುಂದುವರಿಯುವಿರಿ. ಯಾರ ಮಾತನ್ನೂ ಕೇಳುವ ತಾಳ್ಮೆ ಕಡಿಮೆ ಆಗಬಹುದು. ಕಛೇರಿಯಲ್ಲಿ ನಿಮ್ಮ ಬೆಂಬಲಕ್ಕೆ ಯಾರೂ ಬರದಿರುವುದು ಬೇಸರವನ್ನು ತರಿಸುವುದು. ಇಂದಿನ ಕೆಲಸವು ಸಮಯದ ಅಭಾವದಿಂದ ಪೂರ್ಣವಾಗದು. ಮನಸ್ಸಿನ ಸ್ಥಿರತೆಯನ್ನು ತಂದುಕೊಳ್ಳುವುದು ಕಷ್ಟವಾದೀತು. ಪರನಿಂದನೆಯಿಂದ ಆಚೆ ಬರುವುದು ಉತ್ತಮ.

ಕಟಕ: ದಾನದಲ್ಲಿ‌ ನೀವು ಬಹಳ ಹಿಂಗೈಯುಳ್ಳವರಾಗುವಿರಿ. ಬಿಚ್ಚು ಮನಸ್ಸಿನಿಂದ ನೀವು ಮಾತನಾಡುವುದು ಕಷ್ಟವಾದೀತು. ಕಛೇರಿಯಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯಗಳು ಕೇಳಿ ಬಂದರೂ ನಿಮ್ಮ‌ ಮೌನವು ಮಾತಾಗಿ ಬಾರದು. ಸಂಗಾತಿಯನ್ನು ಪಡೆಯಲು ನೀವು ಬಹಳ ಶ್ರಮವಹಿಸುವಿರಿ. ಕೃಷಿಕರು ತಮ್ಮ ಕಾರ್ಯದಲ್ಲಿ ಮಗ್ನರಾಗುವರು. ಆಹಾರದ ವಿಚಾರದಲ್ಲಿ ನೀವು ಆಯ್ಕೆಯನ್ನು ಇಟ್ಟುಕೊಳ್ಳುವಿರಿ. ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನವು ಬಹಳ ಉತ್ಸಾಹದಿಂದ ಸಾಗುವುದು. ಮಕ್ಕಳಿಗೆ ಪ್ರೀತಿಯನ್ನು ತೋರಿಸಲು ಸಮಯದ ಅಭಾವ ಆಗಬಹುದು.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್