Horoscope: ದಿನಭವಿಷ್ಯ, ಈ ರಾಶಿಯವರು ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 25, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 25 ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:17 ರಿಂದ 01:44 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:22 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:49 ರಿಂದ 12:17ರ ವರೆಗೆ.

ಮೇಷ ರಾಶಿ : ಮನೋವಿಕಾರಕ್ಕೆ‌ ಆಸ್ಪದ ಕೊಡುವುದು ಬೇಡ. ನಿಮಗೆ ಸೂಚಿತ ದಿಕ್ಕಿನಲ್ಲಿ‌ ತೆರಳಿ ಕಾರ್ಯವನ್ನು ಸಾಧಿಸಿಕೊಳ್ಳಿ. ಸುಮ್ಮನೇ ಒತ್ತಡವಿದ್ದಂತೆ ತೋರಿಸುವಿರಿ. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಅತಿಥಿಗಳ ಸತ್ಕಾರವನ್ನು ಮಾಡುವಿರಿ. ಸಂಗಾತಿಯ ಜೊತೆ ಸರಸದಿಂದ ಕಾಲ ಕಳೆಯುವಿರಿ. ಮಕ್ಕಳ‌ ಕಾರ್ಯವು ಹೆಮ್ಮೆ ಎನಿಸುವುದು. ನಿಮಗೆ ಯಾರಾದರೂ ಉತ್ಸಾಹವನ್ನು ತುಂಬುವವರ ಅವಶ್ಯಕತೆ ಇದೆ. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಕಳೆದ ವ್ಯರ್ಥ ಕಾಲವನ್ನು ಮತ್ತೆ ಸೇರಿಸಲಗಾದು ಎಂದು ವ್ಯಥೆಪಡುವುದು ಬೇಡ. ಮುಂದಿನದ್ದರ ಬಗ್ಗೆ ಆಲೋಚಿಸಿ. ನಿಮ್ಮ ಮಾತಿನಿಂದ ಕುಟುಂಬದ ಕೆಲವು ಸಮಸ್ಯೆಯು ದೂರಾಗುವುದು.

ವೃಷಭ ರಾಶಿ : ನಿಮ್ಮ ನಿರೀಕ್ಷೆಯು ಹುಸಿಯಾಗುವುದು. ಧನಸಂಪಾದನೆಯ ಚಿಂತೆ ಇರಲಿದೆ. ಆಲಸ್ಯದಿಂದ ನಿಮ್ಮ ಸಾಮರ್ಥ್ಯವು ಕಡಿಮೆ ಆಗಲಿದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಅಧಿಕ ಓಡಾಟದಿಂದ‌ ದಣಿವಾಗಲಿದೆ. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು.‌ ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಅಪರಿಚಿತರ ಸಹವಾಸವು ಸಿಗುವುದು. ಎಲ್ಲವನ್ನೂ ಒಬ್ಬರೇ ಮಾಡುವ ಉತ್ಸಾಹವು ಇದ್ದರೂ ಮತ್ತೊಬ್ಬರ ಸಹಕಾರವನ್ನು ಪಡೆದು ಕಾರ್ಯವನ್ನು ಪೂರ್ಣಗೊಳಿಸಿ. ಇರುವುದನ್ನು ಹಾಗೇ ಹೇಳುವುದರಿಂದ ತೊಂದರೆಯಾಗಬಹುದು.

ಮಿಥುನ ರಾಶಿ : ನೀವು ಇಂದು ಸ್ವಂತ ವಾಹನವನ್ನು ಬಾಡಿಗೆ ಕೊಡುವಿರಿ. ಇರುವ ಸಾಲವನ್ನು ತೀರಿಸಿಕೊಳ್ಳಲುಬೇಕಾದ ಯೋಜನೆ ಮಾಡಿ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ. ಸಂಬಂಧಿಕರನ್ನೇ ಪಾಲುದಾರಿಕೆಯಲ್ಲಿ ಇಟ್ಟಕೊಳ್ಳುವಿರಿ. ಸರ್ಕಾರದಿಂದ ಆಗಬೇಕಾದ ಕಾರ್ಯಕ್ಕೆ ಹೆಚ್ಚು ಓಡಾಟ ಮಾಡಬೇಕಾದೀತು. ಭೂಮಿಯ ವ್ಯವಹಾರದಿಂದ ಲಾಭವಿಲ್ಲದಿದ್ದರೂ ಅದನ್ನೇ‌ ನಡೆಸಲು ಇಷ್ಟಪಡುವಿರಿ. ಸುಖವಾದ ಜೀವನಕ್ಕೆ ಸರಳ‌ ಸೂತ್ರವನ್ನು ಬಳಸಿ. ನ್ಯಾಯಾಲಯದಲ್ಲಿ ನಿಮ್ಮ ದಾಯಾದಿ ಕಲಹವನ್ನು ಇತ್ಯರ್ಥ ಮಾಡಿಕೊಂಡು ಮುಂದಿನ ಕ್ರಮದತ್ತ ಆಲೋಚಿಸಿ. ನಗುಮುಖವೂ ಯಾರನ್ನೂ ನಕ್ಕಿಸೀತು.

ಕರ್ಕ ರಾಶಿ : ಸ್ತ್ರೀಯರು ಇಂದಿನ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಗಳಿಸುವರು. ಎಷ್ಟೋ ಕಾಲದ ಅನಂತರ ನೀವು ಮಿತ್ರನನ್ನು ಭೇಟಿಯಾಗುವಿರಿ. ಅನ್ನಿಸಿದ್ದನ್ನು ನೇರವಾಗಿ ಹೇಳುವುದು ಬೇಡ. ಸಮಯಕ್ಕಾಗಿ ಕಾದು ನೋಡಿ. ದಿನಚರಿಯನ್ನು ಬದಲಾಯಿಸಿಕೊಳ್ಳುವುದು ಬೇಕಾಗಬಹುದು. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ. ಹಣಕಾಸಿನ ವ್ಯವಸ್ಥೆಯನ್ನು ಸರಿ ಮಾಡಿಕೊಳ್ಳುವುದು ಸೂಕ್ತ. ಅರ್ಧ ಪ್ರಯಾಣ ಮಾಡಿ‌ ಮನೆಗೆ ಹಿಂದಿರುಗುವಿರಿ. ಕೆಲವೊಮ್ಮೆ ಸುಮ್ಮನಿರುವುದೂ ದೊಡ್ಡ ಕೆಲಸವನ್ನು ಮಾಡಿಸುತ್ತದೆ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ