Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Aug 26, 2023 | 5:27 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 26 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದಶಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹುಕಾಲ ಬೆಳಿಗ್ಗೆ 09:08 ರಿಂದ 11:01ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:07 ರಿಂದ 03:41ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:21 ರಿಂದ 07:54ರ ವರೆಗೆ.

ಮೇಷ ರಾಶಿ: ನಿಮ್ಮ‌ ಅಭಿಮಾನಕ್ಕೆ ಘಾಸಿಯಾಗುವ ಮಾತುಗಳನ್ನು ಕೇಳಬೇಕಾಗಬಹುದು. ಎಲ್ಲ ಮಾತುಗಳೂ ಇಂದು ನಿಮಗೆ ನಕಾರಾತ್ಮಕವಾಗಿಯೇ ಕೇಳಿಸುವುದು. ಅತಿಥಿ ಸತ್ಕಾರಕ್ಕೆ ಹೆಚ್ಚಿನ ಮಹತ್ತ್ವವನ್ನು ಕೊಡುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವು ಇರಲಿದೆ. ಸಂಗಾತಿಯ ಪ್ರೀತಿಯು ಇಂದು ಲಭಿಸುವುದು. ಕಳೆದ ದುಃಖದ ಸಮಯವನ್ನು ನೆನಪಿಸಿಕೊಳ್ಳುವಿರಿ. ಅರ್ಥಿಕ ವಿಚಾರದಲ್ಲಿ ಸಹೋದರರ ನಡುವೆ ಕಲಹವಾಗಬಹುದು. ವಂಚನೆಯಿಂದ ನೀವು ತಪ್ಪಿಸಿಕೊಳ್ಳುವಿರಿ. ನೆಮ್ಮದಿಗೆ ಅವಕಾಶಗಳನ್ನು ಹುಡುಕುವಿರಿ.

ವೃಷಭ ರಾಶಿ: ಸಂಕೀರ್ಣವಾದ ಕೆಲಸವನ್ನು ಸುಲಭ ಮಾಡಿಕೊಳ್ಳುವ ಕಲೆಯಿಂದ ಪ್ರಶಂಸೆಯು ಸಿಗಲಿದೆ. ಹಿರಿಯರ ಜೊತೆ ಮಾತಿನ ಚಕಮಕಿ ಆಗಬಹುದು. ಸರಿಯಾದ ಆಹಾರವನ್ನು ಸಕಾಲದಲ್ಲಿ ಸೇವಿಸಿ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ಅಪರಿಚಿತರು ನಿಮ್ಮ ವಶವನ್ನು ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವರು. ಇಂದು ನಿಮ್ಮ ವಿದ್ಯೆಯ ಪರೀಕ್ಷೆಯೂ ಆಗುವುದು. ನಿಮ್ಮ ಮತ್ತೊಂದು‌ ಮುಖದ ಪರಿಚಯವೂ ಆಪ್ತರಿಗೆ ಆಗಲಿದೆ. ಪ್ರಯಾಣದಿಂದ ಸ್ವಲ್ಪ ಆಯಾಸವಾಗಲಿದ್ದು ವಿಶ್ರಾಂತಿಯಿಂದ ಅದನ್ನು ಪರಿಹರಿಸಿಕೊಳ್ಳುವಿರಿ. ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವ ವಿಧಾನವನ್ನು ಚಿಂತಿಸಿ.

ಮಿಥುನ ರಾಶಿ: ವಿದ್ಯಾರ್ಥಿಗಳು ಅನಗತ್ಯ ವ್ಯವಹಾರಗಳತ್ತ ಗಮನ ಹರಿಸುತ್ತಿದ್ದು ಪೋಷಕರು ಇದರ ಬಗ್ಗೆ ವಿಚಾರಿಸುವ ಅಗತ್ಯವೂ ಬರಬಹುದು. ಮೃಷ್ಟಾನ್ನ ಭೋಜನದಿಂದ ಸಂತೃಪ್ತಿ ಇರಲಿದೆ. ಕೆಲವರ ಮಾತುಗಳು ನಿಮ್ಮ ಉತ್ಸಾಹವನ್ನು ಕುಗ್ಗಿಸಬಹುದು. ಸಂಗಾತಿಯ ಜೊತೆ ವಾಗ್ವಾದವನ್ನು ಮಾಡಲಿದ್ದೀರಿ. ಆರ್ಥಿಕಸ್ಥಿತಿಯು ಏರದೇ ಇಳಿಯದೇ ಒಂದೇ ರೀತಿಯಲ್ಲಿ ಇರಲಿದೆ‌. ಪ್ರಾಮಾಣಿಕ ಪ್ರಯತ್ನವು ನಿಮ್ಮ ಕಾರ್ಯಸಾಧನೆಯ ಗುಟ್ಟಾಗಲಿದೆ. ವ್ಯವಹಾರಸ್ಥರು ಎಚ್ಚರಿಕೆಯಿಂದ ವ್ಯವಹರಿಸಬೇಕಾಗಬಹುದು. ಆಸ್ತಿಯ ವಿಚಾರದಲ್ಲಿ ನೀವು ಸೊಪ್ಪು ಹಾಕದೇ ಇರುವುದು ಅದು ಅಲ್ಲಿಯೇ ಶಾಂತವಾಗುವುದು.

ಕಟಕ ರಾಶಿ: ಮತ್ತೆ ಮತ್ತೆ ಬರುವ ಅಪರಿಚಿತ ಕರೆಗೆ ನೀವು ಮಾನಸಿಕವಾಗಿ ಕುಗ್ಗುವಿರಿ. ಹೊಸ ಯೋಜನೆಗಳನ್ನು ಆರಂಭಿಸಲು ನಿಮಗೆ ಧೈರ್ಯವು ಕಡಿಮೆ‌ ಇರುವುದು. ಏನಾದರೂ ಒಂದು ಅಸಂಬದ್ಧವನ್ನು ಮಾಡುವರು ಎಂಬ ಹಣೆಪಟ್ಟಿ ಬೀಳಬಹುದು. ಮೋಸಗಾರಿಕೆಯಿಂದ ಆಟವನ್ನು ಗೆಲ್ಲುವಿರಿ. ಶತ್ರುಗಳ ಚಲನವಲನದ ಮೇಲೆ ನಿಮ್ಮ ದೃಷ್ಟಿಯು ಇರಲಿದೆ. ಯಾರದೋ ಮಾತಿಗೆ ಸ್ನೇಹಿತರನ್ನು ದೂರ ಮಾಡಿಕೊಳ್ಳುವಿರಿ. ಗೊಂದಲ ವಿಚಾರವನ್ನು ಬಿಟ್ಟು ಬಿಡುವುದು ಒಳ್ಳೆಯದು. ಅರ್ಥಿಕ ವಿಚಾರದಲ್ಲಿ ಸ್ವಲ್ಪ ಅಭಿವೃದ್ಧಿಯು ಇರುವುದು. ಮನಸ್ಸು ಬೇಸರದಿಂದ ಯಥಾಸ್ಥಿತಿಗೆ ಮರಳಲಿದೆ.

-ಲೋಹಿತಶರ್ಮಾ 8762924271 (what’s app only)

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ