Rashi Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರು ಸಮಯಕ್ಕೆ ಬೆಲೆ ಕೊಡುವುದು ಉತ್ತಮ

ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜುಲೈ 26) ರಾಶಿಭವಿಷ್ಯ ಇಲ್ಲಿದೆ. ಮೇಷ ರಾಶಿಯವರಿಗೆ ಶತ್ರುಗಳ ಉಪಟಳ ಕಡಿಮೆ ಆಗಿದ್ದು ನಿಶ್ಚಿಂತೆಯಿಂದ ಇರಲಿದ್ದಾರೆ. ವೃಷಭ ರಾಶಿಯವರು ಮನಸ್ಸಿನ ಚಂಚಲತೆಯನ್ನು ಸರಿಮಾಡಿಕೊಳ್ಳುವುದು ಉತ್ತಮ.

Rashi Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರು ಸಮಯಕ್ಕೆ ಬೆಲೆ ಕೊಡುವುದು ಉತ್ತಮ
ದಿನಭವಿಷ್ಯImage Credit source: istock
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Jul 26, 2023 | 12:15 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 26 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ನವಮೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಸಾಧ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:39 ರಿಂದ 02:15ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:51 ರಿಂದ 09:27ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ.

ಮೇಷ: ಎಷ್ಟೇ ಕಷ್ಟಪಟ್ಟರೂ ಬಯಸಿದ್ದನ್ನು ಪಡೆಯಲು ಕಷ್ಟವಾದೀತು. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಬಂಧುಗಳು ನಿಮಗೆ ಬೇಕಾದ ಸಹಾಯವನ್ನು ಮಾಡುವರು. ಆರ್ಥಿಕವಾಗಿ ಸಬಲರಾಗಲು ಅನೇಕ ಆರ್ಥಿಕ ಮೂಲವನ್ನು ಹುಡುಕುವಿರಿ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವನ್ನು ಮಾಡುವರು. ಮಕ್ಕಳ‌ ವಿವಾಹ ಕೆಲಸದಲ್ಲಿ ನೀವು ಮಗ್ನರಾಗುವಿರಿ. ಶತ್ರುಗಳ ಉಪಟಳ ಕಡಿಮೆ ಆಗಿದ್ದು ನೀವು ನಿಶ್ಚಿಂತೆಯಿಂದ ಇರುವಿರಿ. ಶುಭ ಕಾರ್ಯದಲ್ಲಿ ನೀವು ತೊಡಗುವಿರಿ. ಮಾತನ್ನು ಕಡಿಮೆ ಮಾಡುವಿರಿ.

ವೃಷಭ: ಸಂಗಾತಿಯ ನಡುವೆ ಭಿನ್ನಾಭಿಪ್ರಾಯವು ಬರಬಹುದು. ಸತತ ಸುತ್ತಾಟದಿಂದ ಆಯಾಸವಾಗಲಿದೆ. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನಿಮಗೆ ಚಿಂತೆಯು ಕಾಡಬಹುದು. ಹೊಸ ಕೆಲಸಕ್ಕೆ‌ ನಿಮಗೆ ಧೈರ್ಯವು ಸಾಕಾಗದು. ಇರುವುದರಲ್ಲಿ ನೆಮ್ಮದಿಯನ್ನು ಕಾಣಲು ಹೆಚ್ಚು ಇಷ್ಟಪಡುವಿರಿ. ಮನಸ್ಸಿನ ಚಂಚಲತೆಯನ್ನು ಸರಿಮಾಡಿಕೊಳ್ಳುವುದು ಉತ್ತಮ. ನೀರಿನ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ವೃತ್ತಿಯಲ್ಲಿ ಮೇಲಧಿಕಾರಿಗಳಿಂದ ತೊಂದರೆಯಾಗಬಹುದು. ಕೆಲವು ವಿಚಾರದಲ್ಲಿ ನಿಮ್ಮ‌ ಮಾನಸಿಕ ಸ್ಥಿತಿಯು ಬದಲಾಗಬಹುದು.

ಮಿಥುನ: ಸಂಗಾತಿಯ ನೋವನ್ನು ಕೇಳುವಷ್ಟು ತಾಳ್ಮೆ ಇಲ್ಲವಾದೀತು. ಸರಿಯಾದ ಸಮಯಕ್ಕೆ ವೈದ್ಯರ ಬಳಿ ಹೋಗಿ ಆರೋಗ್ಯವನ್ನು ಸರಿ ಮಾಡಿಕೊಳ್ಳುವಿರಿ. ಕಛೇರಿಯ ಒತ್ತಡದ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಮಾನಸಿಕವಾಗಿ ನೀವು ಕುಗ್ಗುವಿರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಿರಿ. ವೇತನವನ್ನು ಹೆಚ್ಚಿಸಿಕೊಳ್ಳಲು ಮಾರ್ಗವನ್ನು ಹುಡುಕುವ ಸಂಭವ ಇದೆ. ಹೊಸ ಉದ್ಯೋಗಕ್ಕೆ ಬೇಕಾದ ಸಿದ್ಧತೆಯನ್ನೂ ಮಾಡಿಕೊಳ್ಳುವಿರಿ. ಸಂಗಾತಿಯನ್ನು ಹೊರಗೆ ಸುತ್ತಾಡಲು ಕರೆಯುವಿರಿ. ಯಾರೋ ಕೊಟ್ಟದ್ದನ್ನು ಸ್ವೀಕರಿಸುವುದಿಲ್ಲ. ‌ಆಹಾರದಲ್ಲಿ ವ್ಯತ್ಯಾಸ ಆಗಿ ಆರೋಗ್ಯದಲ್ಲಿ ತೊಂದರೆಯಾದೀತು.

ಕಟಕ: ನಿಮ್ಮ ಬಳಿ ಸಾಲವನ್ನು ಕೇಳಬಹುದು. ವೈದ್ಯರಿಗೆ ಪ್ರಶಂಸೆ ಸಿಗಬಹುದು.‌ ಸರ್ಕಾರಿ ಉದ್ಯೋಗಿಗಳ ಸ್ಥಾನವು ಬದಲಾಗುವುದು. ಭವಿಷ್ಯದ ಬಗ್ಗೆ ದೊಡ್ಡ ಕನಸನ್ನು ಇಟ್ಟುಕೊಳ್ಳುವಿರಿ. ಮಕ್ಕಳು ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು. ಬೇರೆ ಕಡೆಗೆ ಕಳುಹಿಸುವ ವಸ್ತುಗಳು ನಿಮಗೆ ಕೊರತೆಯಾಗಬಹುದು. ಮನೆಯ ವಾತಾರಣದಲ್ಲಿ ಇರಲು ಖುಷಿಪಡುವಿರಿ. ನಿಮ್ಮ ವಸ್ತುಗಳನ್ನು ಸ್ನೇಹಿತನಿಗೆ ದಾನವಾಗಿ ಕೊಡುವಿರಿ. ಮಕ್ಕಳ‌ ಜೊತೆ ಸಮಯವನ್ನು ಕಳೆಯುವುದು ಇಷ್ಟವಾದೀತು. ರಹಸ್ಯ ವಿಚಾರಗಳನ್ನು ಗೊತ್ತಿಲ್ಲದೇ ಹಂಚಿಕೊಳ್ಳುವಿರಿ. ಗೆಲುವನ್ನು ಸಾಧಿಸುವಿರಿ. ಸಮಯಕ್ಕೆ ಬೆಲೆಯನ್ನು ಕೊಡುವುದು ಉತ್ತಮ.

-ಲೋಹಿತಶರ್ಮಾ (ವಾಟ್ಸ್​ಆ್ಯಪ್ 8762924271)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ