AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರಿಗೆ ತಮ್ಮ ಸಂಗಾತಿಯ ಮೇಲಿನ‌ ಪ್ರೀತಿ ಕಡಿಮೆ ಆಗಬಹುದು

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರಿಗೆ ತಮ್ಮ ಸಂಗಾತಿಯ ಮೇಲಿನ‌ ಪ್ರೀತಿ ಕಡಿಮೆ ಆಗಬಹುದು
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 26, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 26 ಗುರುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಧ್ರುವ / ವ್ಯಾಘಾತ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:44 ರಿಂದ 03:11 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:27 ರಿಂದ 07:54 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:22 ರಿಂದ 10:49ರ ವರೆಗೆ.

ಮೇಷ ರಾಶಿ: ಸಂಗಾತಿಯ ಮೇಲಿನ‌ ಪ್ರೀತಿ ಕಡಿಮೆ ಆಗಬಹುದು. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ಅನಿವಾರ್ಯವಾಗಿ ನೀವು ಹಣವನ್ನು ಕೊಡಬೇಕಾಗಬಹುದು. ನಿಮ್ಮ‌ ಸ್ವಾಭಿಮಾನಕ್ಕೆ ತೊಂದರೆಯಾಗುವ ಮಾತುಗಳು ಬರಬಹುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ಅತಿಥಿಯನ್ನು ಸಂತೋಷಗೊಳಿಸುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವು ಕಾಡುವುದು. ಕಳೆದ ಸುಖದ ಕಾಲವನ್ನು ನೆನಪಿಸಿಕೊಳ್ಳುವಿರಿ. ಅರ್ಥಿಕ ವಿಷಯಕ್ಕೆ ಸಹೋದರರ ನಡುವೆ ಮಾತು ಬರಬಹುದು. ಮೋಸಗೊಳಿಸಲು ಹೋಗಿ ನಗೆಗೀಡಾಗುವಿರಿ. ನಿಮಗೆ ಇಷ್ಟವಾದವರನ್ನು ಬೆಂಬಲಿಸುವಿರಿ.

ವೃಷಭ ರಾಶಿ: ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಉದ್ಯೋಗದ ಅವಕಾಶವನ್ನು ಬಿಟ್ಟುಬಿಡುವಿರಿ. ನಿಮ್ಮ ಊಹೆಯು ಸತ್ಯವಾಗಬಹುದು. ಬಂಧುಗಳು ನಿಮ್ಮ ಬಗ್ಗೆ ಮಾತನಾಡಿಕೊಳ್ಳುವರು. ಹಿರಿಯರ ಜೊತೆ ವಾಗ್ವಾದ ಆಗಬಹುದು. ಆಹಾರದ ವ್ಯತ್ಯಾಸದಿಂದ ಉದರಬಾಧೆ ಕಾಣಿಸಿಕೊಂಡೀತು. ಅಪರಿಚಿತರು ನಿಮ್ಮನ್ನು ವಶ ಮಾಡಿಕೊಳ್ಳಲು ಉಪಾಯವನ್ನು ಮಾಡಬಹುದು. ನಿಮ್ಮ ಮತ್ತೊಂದು‌ ಮುಖದ ಪರಿಚಯವೂ ಆಪ್ತರಿಗೆ ಆಗಲಿದೆ. ಪ್ರಯಾಣದಿಂದ ಸ್ವಲ್ಪ ಆಯಾಸವಾಗಲಿದ್ದು ವಿಶ್ರಾಂತಿಯಿಂದ ಸರಿಮಡಿಕೊಳ್ಳಿ. ನಿಮ್ಮದಲ್ಲದ ವಸ್ತುಗಳನ್ನು ಇತರರಿಗೆ ಕೊಟ್ಟುಬಿಡುವಿರಿ. ಕೆಲವರ ಮಾತು ನಿಮಗೆ ಕೋಪ ತರಿಸಬಹುದು.

ಮಿಥುನ ರಾಶಿ: ನಿಮಗೆ ಒತ್ತಡವು ಅಧಿಕವಾಗಿ ಇರಲಿದ್ದು, ಯಾವುದೋ ಭಯವು ಕಾಡಬಹುದು. ಆಪ್ತರು ನಿಮಗೆ ಧೈರ್ಯವನ್ನು ತುಂಬುವರು. ಆಭರಣಪ್ರಿಯರು ಹೆಚ್ಚಿನ ಉತ್ಸಾಹದಲ್ಲಿ ಇರುವರು. ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮಲ್ಲಿ ಆದ ಬದಲಾವಣೆಯನ್ನು ಸಹೋದ್ಯೋಗಿಗಳು ಗಮನಿಸಬಹುದು. ವಿದ್ಯಾರ್ಥಿಗಳು ಮನೆಯ ಜವಾಬ್ದಾರಿಯನ್ನೂ‌ ನಡೆಸುವ ಸಂದರ್ಭವು ಬರಬಹುದು.‌ ಮೃಷ್ಟಾನ್ನ ಭೋಜನದಿಂದ ಸಂತೃಪ್ತಿ. ಇಂಸು ಕೆಲವರ ಮಾತುಗಳು ಉತ್ಸಾಹವನ್ನು ಕಡಿಮೆ‌ ಮಾಡಬಹುದು. ಸಂಗಾತಿಯ ಜೊತೆ ವಾಗ್ವಾದವನ್ನು ಮಾಡಲಿದ್ದೀರಿ. ಆರ್ಥಿಕಸ್ಥಿತಿಯು ಯಥಾಸ್ಥಿತಿಯಲ್ಲಿ ಇರಲಿದೆ‌. ಪ್ರಾಮಾಣಿಕ ಪ್ರಯತ್ನವು ನಿಮ್ಮ ಸಾಧನೆಯ ಗುಟ್ಟು. ವ್ಯವಹಾರಸ್ಥರು ಅಜಾಗರೂಕರಾಗುವುದು ಬೇಡ. ಆಸ್ತಿ ಹಂಚಿಕೆ ವಿಚಾರಕ್ಕೆ ಸೊಪ್ಪು ಹಾಕದೇ ಇದ್ದರೆ ಅದು ಅಲ್ಲಿಯೇ ಶಾಂತವಾಗುವುದು.

ಕಟಕ ರಾಶಿ: ರಾಜಕೀಯವು ನಿಮಗೆ ಇಷ್ಟವಾಗದು. ಒಂದು ಕೆಲಸವನ್ನು ಮೈ ಮೇಲೆ ಬಿದ್ದು ಮಾಡಿಸಿಕೊಳ್ಳಬೇಕಾಗುವುದು. ಕಲಾವಿದರು ಗೌರವವನ್ನೂ ಯಶಸ್ಸನ್ನೂ ಗಳಿಸುವರು. ನಿಮಗೆ ಆಗುವಷ್ಟೇ ಕೆಲಸವನ್ನು ಮಾಡಿ. ಮತ್ತೆ ಮತ್ತೆ ಬರುವ ಅಪರಿಚಿತ ಕರೆಗಳಿಂದ ಕುಗ್ಗುವಿರಿ. ಹೊಸ ಯೋಜನೆಗಳನ್ನು ಆರಂಭಿಸಲು ಧೈರ್ಯ ಮಾಡುವುದು ಬೇಡ. ಏನಾದರೂ ಒಂದು ಅಸಂಬದ್ಧವನ್ನು ಮಾಡುವ ಹಣೆಪಟ್ಟಿ ಬರಬಹುದು. ವಂಚನೆಯಿಂದ ಆಟವನ್ನು ಗೆಲ್ಲುವಿರಿ. ಶತ್ರುಗಳ ವ್ಯವಹಾರವನ್ನು ಇನ್ನೊಬ್ಬರ ಮೂಲಕ ತಿಳಿದುಕೊಳ್ಳುವಿರಿ. ನಿಮ್ಮ ಮೇಲೆ ಯಾರದ್ದಾದರೂ ದೃಷ್ಟಿಯು ಬೀಳಬಹುದು. ದೃಷ್ಟಿಯನ್ನು ತೆಗೆದುಕೊಳ್ಳಿ. ಯಾರ ಬೆಂಬಲವನ್ನೂ ಅಪೇಕ್ಷಿಸದೇ ಕೆಲಸವನ್ನು ಮಾಡುವಿರಿ.

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ