Horoscope: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಹುಸಿಗೊಳಿಸುವಿರಿ, ಅತಿ ಕೋಪ ಒಳ್ಳೆಯದಲ್ಲ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಹುಸಿಗೊಳಿಸುವಿರಿ, ಅತಿ ಕೋಪ ಒಳ್ಳೆಯದಲ್ಲ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 27, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 27  ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಪ್ರೀತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹುಕಾಲ ಬೆಳಿಗ್ಗೆ 05:13 ರಿಂದ 06:47ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:13ರ ವರೆಗೆ.

ಮೇಷ ರಾಶಿ: ಹೆಚ್ಚು ಖುಷಿಯಾಗಿ ಇಂದು ಇರಲಿದ್ದೀರಿ.‌ ಒಬ್ಬರೇ ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾದೀತು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ಆರ್ಥಿಕ ಮೌಲ್ಯವನ್ನು ನೀವು ತಿಳಿದುಕೊಳ್ಳುವಿರಿ. ಇಂದು ನಿಮ್ಮ‌ ಮನಸ್ಸು ಬಹಳ ಅತಂತ್ರವಾಗಿ ಇರಲಿದೆ. ಒಂದೇ ವಿಚಾರವನ್ನು ಮತ್ತೆ ಮತ್ತೆ ನೆನಪಿಸಬೇಕಾದೀತು. ಉದ್ಯೋಗದಲ್ಲಿ ಬದಲಾವಣೆಯನ್ನು ನೀವು ಬಯಸುವಿರಿ. ಮನೆಯ ಹೆಚ್ಚಿನ ವಿಚಾರಗಳು ನಿಮಗೆ ಗೊತ್ತಾಗದೆ ಬೇಸರಿಸುವಿರಿ. ಸಾಮರಸ್ಯವನ್ನು ಕಾಪಾಡಿಕೊಳ್ಳಲು ಯತ್ನಿಸುವಿರಿ.

ವೃಷಭ ರಾಶಿ: ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಹೋಗುವಿರಿ. ವಿದ್ಯಾರ್ಥಿಗಳು ಕೌಶಲವನ್ನು ಪ್ರದರ್ಶಿಸುವರು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಹುಸಿಗೊಳಿಸುವಿರಿ. ದಿನದ ಆರಂಭವು ಬಹಳ ಸಂತೋಷದಿಂದ‌ ಇರಲಿದೆ. ಸ್ವಾಭಿಮಾನವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಕೋಪವನ್ನು ಸ್ವಲ್ಪ ಕಡಿಮೆ‌ ಮಾಡಿಕೊಳ್ಳುವುದು ಉತ್ತಮ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಸೂಕ್ತ ಪರಿಹಾರ. ಸಂಗಾತಿಯನ್ನು ನೀವು ಕೆಲವು ವಿಚಾರಗಳಿಗೆ ಬೇಸರಿಸಿ ಸಮಾಧಾನ ಮಾಡುವಿರಿ. ಅಸಮಯದ ಭೋಜನದಿಂದ‌ ನಿಮಗೆ ಆರೋಗ್ಯವು ಹಾಳಾಗುವುದು. ನೀವು ಯತ್ನಿಸಿದ ಕೆಲಸವು ಪೂರ್ಣಫಲಪ್ರದವಾಗದು.

ಮಿಥುನ ರಾಶಿ: ಉದ್ಯೋಗವನ್ನು ಪ್ರಾಮಾಣಿಕತೆಯಿಂದ ಮಾಡುವಿರಿ. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ. ನಿಮ್ಮ ಆಸ್ತಿಯ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿಯ ಕೊರತೆ ಇರಲಿದೆ.‌ ಮನಸ್ಸಿನಲ್ಲಿ ಇರುವು ವಿಚಾರವನ್ನು ಯಾರ ಜೊತೆಗಾದರೂ ಹೇಳಿಕೊಳ್ಳಿ. ನಿಮ್ಮ‌ ನೋವಿಗೆ‌ ಸ್ಪಂದಿಸಲು ಸಿಗುವರು. ನಿಮ್ಮ‌ ಕ್ರಿಯಾಶೀಲತೆಗೆ ಪ್ರಶಂಸೆ ಸಿಗಲಿದೆ. ಎಷ್ಟೋ ವಿಚಾರಗಳನ್ನು ನೀವು ನಿಮ್ಮಲ್ಲಿಯೇ ಇಟ್ಟಕೊಂಡು ಅನುಭವಿಸುವಿರಿ. ನಿಮಗೆ ಇಷ್ಟವಾದುದನ್ನು ಕೇಳಿ ಪಡೆದುಕೊಳ್ಳುವಿರಿ. ಹಣವನ್ನು ಉಳಿತಾಯ ಮಾಡಿದ್ದರ ಸಮಾಧಾನವು ಸಿಗಲಿದೆ.

ಕಟಕ ರಾಶಿ: ಹಣಕಾಸಿನ ವಿಚಾರದಲ್ಲಿ ನೀವು ಹತಾಶಭಾವದಿಂದ ಇರುವಿರಿ. ದಿನದಿಂದ ದಿನಕ್ಕೆ ಆರೋಗ್ಯದಲ್ಲಿ ಕ್ಷೀಣತೆ ಇರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ಅಧಿಕವಾಗಿ ಕಾಣಿಸುವುದು. ನಿಮಗೆ ಸ್ಥಿರ ಬುದ್ಧಿಯನ್ನು ತಂದುಕೊಳ್ಳಲು ಆಗದು.‌ ಹತ್ತಾರು ಯೋಚನೆಗಳು ಒಂದಾದಮೇಲೆ ಒಂದರಂತೆ ಬರುವುದು. ನೀವು ಮಾಡಿದ ಕೆಲಸವು ನಿಮಗೇ ಇಷ್ಟವಾಗದು. ತಾಯಿಯ ಮಾತನ್ನು ನೀವು ಅಸಡ್ಡೆಯಿಂದ ಕೇಳುವಿರಿ. ಸಾಹಸಮಯವಾದ ಕೆಲಸಕ್ಕೆ ಹೋಗುವುದು ಬೇಡ.‌ ನಿಮಗೆ ಸಿಗಬೇಕಾದ ಹಣವು ವಿಳಂಬವಾಗಿದ್ದಕ್ಕೆ ಬೇಸರಗೊಳ್ಳುವಿರಿ. ನಿಮ್ಮ‌ ಕೌಶಲವನ್ನು ಕೆಲಸದಲ್ಲಿ ತೋರಿಸಿ. ಯಾರ ಜೊತೆಗೋ ವಾಗ್ವಾದಕ್ಕೆ ಹೋಗಿ ನೀವೇ ಸಿಕ್ಕಿಕೊಳ್ಳುವಿರಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ