Horoscope: ದಿನಭವಿಷ್ಯ, ಈ ರಾಶಿಯ ರಾಜಕೀಯ ವ್ಯಕ್ತಿಗಳು ಜನಮನ್ನಣೆ ಗಳಿಸುತ್ತಾರೆ, ಹಿರಿಯರಿಂದ ಸಮಾಧಾನ
ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 27 ಶುಕ್ರವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಹರ್ಷಣ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:49 ರಿಂದ 12:16 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:11 ರಿಂದ 04:38 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:55 ರಿಂದ 09:22ರ ವರೆಗೆ.
ಮೇಷ ರಾಶಿ: ಗಟ್ಟಿ ಇದೆ ಎಂದು ತಲೆಯನ್ನು ಬಂಡೆಗೆ ಕುಟ್ಟಲು ಆಗದು. ನಿಮ್ಮ ಯೋಗ್ಯತೆ ತಕ್ಕ ಕೆಲಸವು ಸಿಗಲಿದ್ದು ಇನ್ನೊಬ್ಬರನ್ನು ಹೋಲಿಕಾ ಮಾಡುತ್ತ ನಿಮ್ಮ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅಪ್ರಯೋಜಕ ವಸ್ತುಗಳು ಅರ್ಧ ಬೆಲೆಗೆ ಮಾರಾಟ ಮಾಡುವಿರಿ. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ಇಂದು ನಿಮ್ಮ ಮನಸ್ಸು ಬಹಳ ಡೋಲಾಯಮಾನವಾಗಿ ಇರಲಿದೆ. ಒಂದೇ ವಿಚಾರವನ್ನು ನಿಮಗೆ ಮತ್ತೆ ಮತ್ತೆ ನೆನಪಿಸಬೇಕಾದೀತು. ಕಛೇರಿಯನ್ನು ಏಕತಾನತೆಯನ್ನು ಬದಲಿಸಿಕೊಳ್ಳುವಿರಿ. ಸಂಗಾತಿಯಿಂದ ಸಾಮರಸ್ಯ ಕೊರತೆ ನೀಗಬಹುದು. ಬೇಕಾಗುವ ವಸ್ತುಗಳನ್ನು ಸ್ನೇಹಿತರಿಂದ ಪಡೆಯುವಿರಿ.
ವೃಷಭ ರಾಶಿ: ಆರ್ಥಿಕ ಸಂಕಷ್ಟವನ್ನು ಯಾರ ಸಮೀಪವೂ ಹೇಳಿಕೊಳ್ಳುವುದು ಬೇಡ. ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ಸಿಟ್ಟನ್ನು ಅಲ್ಪ ಸಮಯದಲ್ಲಿ ಶಮನ ಮಾಡಿಕೊಂಡು ಯಥಾಸ್ಥಿತಿಗೆ ಬರುವಿರಿ. ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಆಹ್ವಾನ ಬರಬಹುದು. ವಿದ್ಯಾರ್ಥಿಗಳು ಕೌಶಲಕ್ಕೆ ಪ್ರಶಂಸೆ ಲಭ್ಯವಾಗುವುದು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಪರಿಹಾರ. ಸಂಗಾತಿಯನ್ನು ನೀವು ಬೇಸರಿಸಿ ಸಮಾಧಾನ ಮಾಡುವಿರಿ. ಅಸಮಯದ ಭೋಜನದಿಂದ ನಿಮಗೆ ಆರೋಗ್ಯವು ಹಾಳಾಗುವುದು. ನಿಮ್ಮ ಅಲ್ಪ ಶ್ರಮದ ಯತ್ನವು ಫಲಪ್ರದವಾಗದು.
ಮಿಥುನ ರಾಶಿ: ಅನಿರೀಕ್ಷಿತವಾಗಿ ಅಮೂಲ್ಯವಾದ ವಸ್ತುವು ಸಿಗಲಿದ್ದು ಬೇಕೋ ಬೇಡವೋ ಎನ್ನುವುದನ್ನು ಯಾರ ಬಳಿಯಾದರೂ ವಿಚಾರಿಸಿ. ಧಾರ್ಮಿಕ ಕಾರ್ಯವನ್ನು ನಿರ್ಮಲ ಮನಸ್ಸಿನಿಂದ ಮಾಡುವಿರಿ. ಯಾರ ಜೊತೆಯೂ ಮಿತಿಮೀರಿದ ಸಲುಗೆ ಬೇಡ. ಆಪ್ತರು ನಿಮ್ಮನ್ನು ಬಿಡಬಹುದು. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ. ನಿಮ್ಮ ನೋವಿಗೆ ಸ್ಪಂದನೆ ಸಿಗುವುದು. ಅನಾರೋಗ್ಯದ ಭೀತಿಯು ಇರಲಿದೆ. ಮನಸ್ಸು ನಕಾರಾತ್ಮಕವಾಗಿ ಹರಡಬಹುದು. ನಿಮ್ಮ ಕ್ರಿಯಾಶೀಲ ಕಾರ್ಯಕ್ಕೆ ಪ್ರಶಂಸೆ ಸಿಗಲಿದೆ. ಎಷ್ಟೋ ವಿಚಾರಗಳನ್ನು ನಿಮ್ಮಲ್ಲಿಯೇ ಇಟ್ಟಕೊಂಡು ಅನುಭವಿಸುವಿರಿ. ನಿಮಗೆ ಇಷ್ಟವಾದುದನ್ನು ಕೇಳಿ ಪಡೆದುಕೊಳ್ಳಿ. ದುಂದುವೆಚ್ವದ ಹಣವನ್ನು ಉಳಿತಾಯ ಮಾಡಿದ್ದರ ಬಗ್ಗೆ ಸಮಾಧಾನವು ಸಿಗಲಿದೆ.
ಕಟಕ ರಾಶಿ: ಮಕ್ಕಳ ಆಸೆಗಳನ್ನು ಪೂರೈಸುವತ್ತ ನಿಮ್ಮ ಗಮನ ಇರಲಿದೆ. ಸ್ಥಿರಾಸ್ತಿಯ ಭಾಗವನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ರಾಜಕೀಯ ವ್ಯಕ್ತಿಗಳು ಜನಮನ್ನಣೆಯನ್ನು ಅಧಿಕ ಗಳಿಸುವರು. ಅಲ್ಪ ಪ್ರಯಾಣದಿಂದಲೂ ನಿಮಗೆ ಆಯಾಸವಾಗಬಹುದು. ದಿನದಿಂದ ದಿನಕ್ಕೆ ಕ್ಷೀಣಿಸುವ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ತಲೆದೋರಬಹುದು. ಹಿರಿಯರಿಂದ ಸಮಾಧಾನ ಸಿಗಲಿದೆ. ಹತ್ತಾರು ಯೋಚನೆಗಳು ಒಂದಾದಮೇಲೆ ಒಂದರಂತೆ ಬಂದು ನಿಮ್ಮನ್ನು ಗೊಂದಲಗೊಳಿಸಬಹುದು. ತಾಯಿಯ ಮಾತನ್ನು ನಿರ್ಲಕ್ಷಿಸುವುದು ಬೇಡ. ಸಾಹಸದ ಕೆಲಸಕ್ಕೆ ಹೋಗುವಿರಿ. ನಿಮಗೆ ಸಿಗಬೇಕಾದ ಹಣವು ವಿಳಂಬವಾಗಬಹುದು. ಯಾರ ಜೊತೆಗೋ ವಾಗ್ವಾದಕ್ಕೆ ಹೋಗಿ ಸುಮ್ಮನೇ ಸಿಕ್ಕಿಕೊಳ್ಳುವಿರಿ.