Horoscope: ದಿನಭವಿಷ್ಯ, ಈ ರಾಶಿಯವರ ಹಠಾತ್ ಬದಲಾವಣೆಯನ್ನು ಕುಟುಂಬ ನಿರೀಕ್ಷಿಸದು

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರ ಹಠಾತ್ ಬದಲಾವಣೆಯನ್ನು ಕುಟುಂಬ ನಿರೀಕ್ಷಿಸದು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 28, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 28 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ರೇವತೀ, ಯೋಗ: ವಜ್ರ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:49 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 15:11 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:28 ರಿಂದ 07:55ರ ವರೆಗೆ.

ಮೇಷ ರಾಶಿ: ಹಠಾತ್ ಬದಲಾವಣೆಯನ್ನು ಕುಟುಂಬ ನಿಮ್ಮಿಂದ ನಿರೀಕ್ಷಿಸದು. ಗುರು ಹಿರಿಯರಿಂದ ಸಿಕ್ಕ ಉಪದೇಶವು ಪ್ರಯೋಜನಕಾರಿಯಾಗುವುದು.‌ ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ಸ್ನೇಹಿತರಿಂದ ಅಸಹಕಾರದಿಂದ ಅವರ ಮೇಲೆ ಪ್ರೀತಿ ಕಡಿಮೆ ಆಗಬಹುದು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ.‌ ಕಾರ್ಯಕ್ಷೇತ್ರದಿಂದ ಹೆಚ್ಚುವರಿ ಆದಾಯ ಬರುವುದು. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂಪತ್ತಿನ ಮೂಲವು ಹೆಚ್ಚಾಗುತ್ತವೆ. ಸಾಮಾಜಿಕ ಚಟುವಟಿಕೆಗಳಿಗೆ ಸಮಯವನ್ನು ಕೊಡಲಾಗದೇ ಜನರು ನಿಮ್ಮಿಂದ ದೂರವಿರಬಹುದು. ಒಬ್ಬರು ಉತ್ತಮ ಆಹಾರವನ್ನು ಸೇವಿಸಿ ಮನೆಯವರ ಸಂತೋಷದ ಸಮಯ ಕಳೆಯುವಿರಿ.

ವೃಷಭ ರಾಶಿ: ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ಆರೋಗ್ಯವು ಸಾಮಾನ್ಯವಾಗಿ ಇರಲಿದೆ. ಇಂದು, ನಿಮ್ಮ ಕಠಿಣ ಪರಿಶ್ರಮದ ಹೊರತಾಗಿಯೂ ಹಣ ಗಳಿಸುವ ಬಯಕೆ ಅಪೂರ್ಣವಾಗಬಹುದು. ವ್ಯವಹಾರದ ಬಗ್ಗೆ ಹೆಚ್ಚಿನ ಗಮನ ಹರಿಸಿದ ಅನಂತರವೂ ಕೆಲಸ ತಡವಾಗಿ ಪೂರ್ಣಗೊಳ್ಳುತ್ತದೆ. ಅನೇಕ ಲಾಭದ ಅವಕಾಶಗಳು ಸಿಗುತ್ತವೆ. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಹೊಸ ಸಂಬಂಧದ ಮೂಲಕ ಅದೃಷ್ಟ ಬರಬಹುದು. ಸಾಮಾಜಿಕ ಗೌರವವನ್ನು ಪಡೆಯುತ್ತೀರಿ. ಬಿಡುವು ಮಾಡಿಕೊಂಡರೆ ಸಾಮಾಜಿಕ ಸಂಬಂಧಗಳು ಪ್ರಯೋಜನಕಾರಿಯಾಗುವುದು.

ಮಿಥುನ ರಾಶಿ: ಮಾನಸಿಕ ಅಸಮತೋಲನದಿಂದ ಎಲ್ಲ ಕಾರ್ಯವೂ ಅಸ್ತವ್ಯಸ್ತ ಆಗಬಹುದು. ಸ್ನೇಹಿತರಿಂದ ಸಹಾಯದ ನಿರೀಕ್ಷೆ ಇದ್ದು, ಹುಸಿಯಾಗುವುದು. ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಪ್ರಮುಖ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳುವುದು ಬೇಡ. ಅಧ್ಯಾತ್ಮದ ಬಗ್ಗೆ ಆಸಕ್ತಿ ಇರುತ್ತದೆ. ಸಹೋದರಿಯರು ಮತ್ತು ಸಂಗಾತಿಯ ಬೆಂಬಲ ಪಡೆಯುವಿರಿ. ಆರೋಗ್ಯವು ಅನುಕೂಲಕರವಾಗಿದ್ದರೂ ಆಹಾರದಲ್ಲಿ ಮಿತಿ ಇರಲಿ.

ಕಟಕ ರಾಶಿ: ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಮರೆವಿನಿಂದ ನಿಮ್ಮ ವಸ್ತುಗಳು ಕಷ್ಟವಾಗಬಹುದು. ಅಪರಿಚಿತರ ವ್ಯವಹಾರವನ್ನು ಕಡಿಮೆ ಮಾಡಿ. ಅಧಿಕಾರಿ ವರ್ಗದವರು ನಿಮ್ಮ ಮೇಲೆ ಕೋಪಗೊಳ್ಳಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ದೈನಂದಿನ ವ್ಯಾಪಾರಿಗಳು ಹೆಚ್ಚು ಶ್ರಮಿಸಬೇಕು. ಲೇಖನ ಸಾಮಗ್ರಿಗಳು ಅಥವಾ ಮುದ್ರಣ ಕೆಲಸಕ್ಕೆ ಸಂಬಂಧಿಸಿದ ಜನರು ಹೊಸ ಉದ್ಯೋಗಗಳನ್ನು ಪಡೆಯುವರು. ನೀವು ಕುಟುಂಬಕ್ಕಾಗಿ ಹೊಸದನ್ನು ಮಾಡುತ್ತೀರಿ. ಅಗತ್ಯಕ್ಕೆ ಅನುಗುಣವಾಗಿ ಹಣವನ್ನು ಹೊಂದಿಸುವಿರಿ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ