AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ, ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು ಇಷ್ಟಪಡುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ, ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು ಇಷ್ಟಪಡುವಿರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 29, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 29 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಸೌಭಾಗ್ಯ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:27 ರಿಂದ 11:00ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:33 ರಿಂದ 02:06ರ ವರೆಗೆ.

ಮೇಷ ರಾಶಿ: ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ದೂರ ಕಳಿಸುವಿರಿ. ಸ್ಥಾನಮಾನವನ್ನು ಪಡೆಯಲು ಯಾವುದಾದರೂ ಮಾರ್ಗವನ್ನು ಪಡೆಯುವಿರಿ. ಬೇರೆ ಬೇರೆ ಆಲೋಚನೆಯನ್ನು ಮಾಡುವಿರಿ. ಸ್ನೇಹ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುವಿರಿ. ಅನಗತ್ಯ ಕಾರ್ಯಗಳತ್ತ ಮನಸ್ಸು ಹೋಗುವುದು. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ನೆನಪಿಸಿ ಜಗಳವಾಡುವರು. ಜಲಭೀತಿಯು ನಿಮಗೆ ಆಗಲಿದೆ. ಯಾರನ್ನೋ ಮೆಚ್ಚಿಸಲು ಕೆಲಸ ಮಾಡಬೇಕಾಗಬಹುದು. ನಿಮ್ಮ‌ ಮಾತಿಗೆ ವಿರೋಧವು ಬರಬಹುದು. ನೀವು ನಿಶ್ಚಿಂತರಾಗಿರಿ.

ವೃಷಭ ರಾಶಿ: ಮನೆಯ ಕೆಲಸದಿಂದ ನಿಮಗೆ ಆಯಾಸವಾಗುವುದು. ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಅನಿರೀಕ್ಷಿತ ವಾರ್ತಯಿಂದ ಬೇಸರವಾಗಲಿದೆ. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟಪಡುವಿರಿ. ಯಾರಾದರೂ ನಿಮಗೆ ಬೇಸರ ಮಾಡಿಸುವರು. ಆದರೆ ನಿಮಗೆ ಮೌನವೇ ಇಷ್ಟವಾದೀತು. ಇಬ್ಬಗೆಯ ಮನಃಸ್ಥಿತಿಯನ್ನು ಇಟ್ಟಕೊಂಡರೆ ಕಷ್ಟವಾಗುವುದು. ಕುಟುಂಬದ ಹತ್ತಿರದವರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ವೈದ್ಯ ವೃತ್ತಿಯಲ್ಲಿ ಅಪವಾದವು ಬರಬಹುದು. ಮಾನಸಿಕ ಕಿರಿಕಿರಿಯಿಂದ ನೆಮ್ಮದಿ ಸಿಗಲಿದೆ.

ಮಿಥುನ ರಾಶಿ: ಯಾವಾಗಲೂ ಸಿಟ್ಟು ಮಾಡುತ್ತಿದ್ದರೆ ನಿಮ್ಮ‌ ಸಿಟ್ಟಿಗೆ ಯಾವ ಬೆಲೆಯೂ ಇರದು. ಪ್ರಾಪಂಚಿಕ ಸುಖದಲ್ಲಿ ಆಸಕ್ತಿಯು ಕಡಿಮೆ ಇರುವುದು. ಅಧ್ಯಾತ್ಮದ ವಿಚಾರಕ್ಕೆ ಹೆಚ್ಚು ಒತ್ತು ಕೊಡುವಿರಿ. ಇನ್ನೊಬ್ಬರ ದುಃಖಕ್ಕೆ ನೀವು ಸ್ಪಂದಿಸುವಿರಿ. ಎಲ್ಲರ ಜೊತೆ ಸಂತೋಷದಿಂದ ಇರಲು ಇಷ್ಟಪಡುವಿರಿ. ನಿಮ್ಮ ಭಾವನೆಗಳಿಗೆ ಬೆಲೆ ಕೊಡುವವರು ನಿಮಗೆ ಇಷ್ಟವಾಗುವರು. ಇಂದು ನೀವು ಸ್ವಾರ್ಥವನ್ನು ಬಿಟ್ಟು ಕೆಲಸ ಮಾಡಲು ಬಯಸುವಿರಿ. ಹಣಕಾಸಿನ ವಿಚಾರದಲ್ಲಿ ನಿಮಗೆ ಬಹಳ ಗೊಂದಲವಾಗಲಿದೆ. ಸಾಮಾಜಿಕ ಕಾರ್ಯವನ್ನು ಮಾಡಲು ಇಷ್ಟವಾಗುವುದು. ಎಲ್ಲ ಕೆಲಸವನ್ನೂ ನೀವೇ ಮಾಡಬೇಕೆಂಬ ಆಸೆ ಇರುವುದು.

ಕಟಕ ರಾಶಿ: ಹೊಂದಾಣಿಕೆಯ ಮನೋಭಾವವು ನಿಮಗೆ ಆಗದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತೆಯಿಂದ ಇರದು. ಆಸ್ತಿಯ ವಿಚಾರದಲ್ಲಿ ಆಂತರಿಕ ಕಲಹವು ದೊಡ್ಡದಾಗಬಹುದು. ದಾಂಪತ್ಯದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕಾಗುವುದು. ನಿಮ್ಮದೇ ಆದ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ವೃತ್ತಿಯಲ್ಲಿ ನಿಮಗೆ ಸಹಕಾರವು ಸಿಗದು. ನಾಲ್ಕಾರು ಕಾರ್ಯಗಳನ್ನು ಒಟ್ಟಿಗೇ ವಹಿಸಿಕೊಳ್ಳುವಿರಿ. ಪ್ರಯಾಣದಲ್ಲಿ ನೀವು ಎಚ್ಚರಿಕೆಯಿಂದ ಇರಬೇಕಾಗುವುದು. ಕೇಳಿದ್ದಕ್ಕಷ್ಟೇ ಉತ್ತರವನ್ನು ಕೊಟ್ಟು ಸುಮ್ಮನಾಗುವಿರಿ. ಸತ್ಯವನ್ನು ನೀವು ಮರೆಮಾಡಲು ಪ್ರಯತ್ನಿಸುವಿರಿ.

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ