Daily Horoscope: ಶುಭಕಾರ್ಯದಲ್ಲಿ ಭಾಗಿ, ಅನಾರೋಗ್ಯಕ್ಕಿಡಾಗಬಹುದು ಎಚ್ಚರ!

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಶುಭಕಾರ್ಯದಲ್ಲಿ ಭಾಗಿ, ಅನಾರೋಗ್ಯಕ್ಕಿಡಾಗಬಹುದು ಎಚ್ಚರ!
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 29, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 29 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ಬ್ರಹ್ಮ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:27 ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:50ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:16 ರಿಂದ 07:52ರ ವರೆಗೆ.

ಮೇಷ: ಸಮಾರಂಭಗಳಿಗೆ ಭೇಟಿ ಕೊಡುವಿರಿ. ಪ್ರೀತಿಪಾತ್ರರು ನಿಮಗೆ ಸಹಕಾರವನ್ನು ಮಾಡುವರು. ಆಪ್ತರನ್ನು ನೀವು ದೂರ ಮಾಡಿಕೊಳ್ಳುವುದು ಕಷ್ಟವಾಗಬಹುದು. ಮನೆಯ ಕೆಲಸದಲ್ಲಿ ನೀವು ತೊಡಗಿಕೊಳ್ಳುವಿರಿ. ದೂರ ಬಂಧುಗಳ ಭೇಟಿಯಾಗಬಹುದು. ಪರೀಕ್ಷೆಯ ತಯಾರಿಯಲ್ಲಿ ನೀವು ಸಮಯವನ್ನು ಕಳೆಯುವಿರಿ. ಸೌಲಭ್ಯಗಳನ್ನು ನೀವು ಪಡೆದುಕೊಳ್ಳಲಿದ್ದೀರಿ. ಗೌರವಗಳು ನಿಮಗೆ ಸಿಗಬಹುದು. ಕೆಲವು ವಿಚಾರವು ನಿಮಗೆ ಗೊತ್ತಾಗದೇ ಇರುವುದು ಬೇಸರ ತರಿಸಬಹುದು. ಮನೆಯರ ಮೇಲೆ ನೀವು ಸಿಟ್ಟಾಗುವಿರಿ. ಯಾರ ಮಾತನ್ನೂ ಕೇಳುವ ಮಾನಸಿಕತೆ ಇರುವುದಿಲ್ಲ.

ವೃಷಭ: ನಿಮ್ಮ‌ ಕೆಲಸವು ಕೇವಲ ತಿರುಗಾಟದಲ್ಲಿ ಮುಕ್ತಾಯವಾಗಲಿದೆ. ಸೌಂದರ್ಯಕ್ಕೆ ಹೆಚ್ಚು ಒತ್ತುಕೊಡುವಿರಿ. ಆಲಂಕಾರಿಕ ವಸ್ತುಗಳ ಬಗ್ಗೆ ಹೆಚ್ಚು ಮೋಹವಿರುವುದು. ನಿಮ್ಮ ವರ್ತನೆಯು ಹಲವರಿಗೆ ಇಷ್ಟವಾಗಲಿದೆ. ಬಂಧುಗಳು ನಿಮ್ಮ ಬಗ್ಗೆ ಹಗುರವಾದ ಮನಃಸ್ಥಿತಿಯನ್ನು ಇಟ್ಟುಕೊಳ್ಳುವರು. ಸಂಗಾತಿಯ ಜೊತೆ ಪ್ರೀತಿಯನ್ನು ಹಂಚಿಕೊಳ್ಳುವಿರಿ. ಕೃಷಿಕರು ಅಧಿಕ ಲಾಭವನ್ನು ಪಡೆಯುವರು. ಅಪರಿಚಿತರ ಸಹವಾಸವನ್ನು ಕಡಿಮೆ ಮಾಡಿಕೊಳ್ಳಿ. ಧನನಷ್ಟವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು.

ಮಿಥುನ: ಅವಕಾಶಗಳನ್ನು ನೀವು ಬಿಟ್ಟುಕೊಟ್ಟು ದೊಡ್ಡವರಾಗಲು ಬಯಸುವಿರಿ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ಆಡಲಿದ್ದೀರಿ. ನಿರಂತರ ಕ್ರಿಯಾಶೀಲತೆಯು ನಿಮ್ಮ ಮಾನಸಿಕ ಒತ್ತಡವನ್ನು ನಿವಾರಿಸಿ ಉತ್ಸಾಹವನ್ನು ತಂದುಕೊಡುವುದು. ಸರ್ಕಾರಿ ಕೆಲಸದಲ್ಲಿ ಇರುವರಿಗೆ ತೊಂದರೆಗಳು ಬರಬಹುದು. ಸಹೋದ್ಯೋಗಿಗಳು ನಿಮ್ಮ ವರ್ತನೆಯ ಮೇಲೆ ಕಣ್ಣಿಟ್ಟಿರುವರು. ಭೂಮಿಯ ವ್ಯವಹಾರವನ್ನು ಮಾಡುವ ಆಪ್ತರನ್ನು ಜೊತೆಗೆ ಇಟ್ಟುಕೊಳ್ಳುವುದು ಉತ್ತಮ. ಕಳೆದುಕೊಂಡ ವಸ್ತುವು ನಿಮಗೆ ಸಿಕ್ಕಿ ಸಂತೋಷವಾಗಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ.

ಕಟಕ: ಶುಭಕಾರ್ಯದಲ್ಲಿ ಭಾಗವಹಿಸುವಿರಿ. ಮನೆಯಿಂದ ದೂರ ಇರುವಿರಿ. ಸಜ್ಜನರ ಸಹವಾಸವನ್ನು ಇಷ್ಟಪಡುವಿರಿ. ಮಾತುಗಳನ್ನು ನೋವಾಗುವಂತೆ ಆಡುವಿರಿ. ಭೋಗವಸ್ತುಗಳ ಖರೀದಿಯನ್ನು ಮಾಡುವಿರಿ. ನಿಮ್ಮ ಗೌರವಕ್ಕೆ ತೊಂದರೆಯಾಗುವ ಕೆಲಸವನ್ನು ಮಾಡುವುದು ಬೇಡ. ಹಿರಿಯ ಹಿತವಚನವು ನಿಮಗೆ ಅಸಹ್ಯವಾಗುವುದು. ಆಹಾರದಿಂದ ನಿಮಗೆ ಅನಾರೋಗ್ಯವು ಆಗುವುದು. ಸಂಗಾತಿಯ ಮಾತುಗಳನ್ನು ವಿರೋಧಿಸುವಿರಿ. ಇನ್ನೊಬ್ಬರಿಗೆ ಚುಚ್ಚಿ ಮಾತನಾಡಲಿದ್ದೀರಿ. ಸುಲಭವಾಗಿ ಸಿಗುವುದನ್ನು ಬಿಟ್ಟುಕೊಡುವಿರಿ.

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್