Horoscope: ಈ ರಾಶಿಯವರ ಕಾರ್ಯಗಳು ಇಂದು ಅಂದುಕೊಂಡಂತೆ ಪೂರ್ಣವಾಗುವುದು
ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 29 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:23ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:23 ರಿಂದ 04:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:23ರ ವರೆಗೆ.
ಮೇಷ ರಾಶಿ: ವ್ಯಾಪಾರಸ್ಥರು ಯಾವುದಾರೂ ಸಮಸ್ಯೆಯಲ್ಲಿ ಸಿಕ್ಕಿಕೊಳ್ಳಬಹುದು. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ದಾಂಪತ್ಯದಲ್ಲಿ ಪರಸ್ಪರ ಅಭಿಪ್ರಾಯ ಭೇದವು ಕಾಣಿಸಿಕೊಂಡೀತು. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಪ್ತರನ್ನು ನೀವು ದೂರ ಮಾಡಿಕೊಳ್ಳುವುದು ಕಷ್ಟವಾಗಬಹುದು. ಕುಟುಂಬದವರನ್ನು ನೀವು ಕಳೆದುಕೊಳ್ಳಬೇಕಾದೀತು. ಪರೀಕ್ಷೆಯ ಸಿದ್ಧತೆಯಲ್ಲಿ ನಿಮ್ಮ ಸಮಯವನ್ನು ಕಳೆಯುವಿರಿ. ಇಂದು ನೀವು ಅಗತ್ಯ ಸೌಲಭ್ಯಗಳನ್ನು ಪಡೆದುಕೊಳ್ಳುವಿರಿ. ಮನೆಯ ಬದಲಾವಣೆಯು ಅನಿವಾರ್ಯವಾದೀತು. ಇಂದಿನ ಎಲ್ಲ ಸಂದರ್ಭದಲ್ಲಿಯೂ ಸಕಾರಾತ್ಮಕ ಆಲೋಚನೆ ಇರಲಿ.
ವೃಷಭ ರಾಶಿ: ಬಂಧುಗಳ ಆಗಮನದಿಂದ ಹೆಚ್ಚು ಸಂತೋಷವು ಇರುವುದು. ನಿಮ್ಮ ಪ್ರೀತಿಪಾತ್ರರ ಜೊತೆ ಆಪ್ತವಾದ ಸಮಯವನ್ನು ಕಳೆಯುವಿರಿ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳ ಜೊತೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಿ. ನಿಮ್ಮ ಆರ್ಥಿಕ ಸ್ಥಿತಿ ಆರೋಗ್ಯದ ಕಡೆ ಸ್ವಲ್ಪ ಹೆಚ್ಚು ಗಮನವಿರಲಿ. ನಿಮ್ಮ ಕೆಲಸವು ಕೇವಲ ಸುತ್ತಾಟದಲ್ಲಿಯೇ ಮುಕ್ತಾಯವಾಗುವುದು. ಆಲಂಕಾರಿಕ ವಸ್ತುಗಳ ಬಗ್ಗೆ ಅಸದ ಅಸೆ ಇರುವುದು. ನಿಮ್ಮ ವರ್ತನೆಯು ಇಷ್ಟವಾಗುವುದು. ಬಂಧುಗಳು ನಿಮ್ಮ ಬಗ್ಗೆ ಹಗುರವಾದ ಭಾವವನ್ನು ಇಟ್ಟುಕೊಳ್ಳುವರು. ಸಂಗಾತಿಯ ಜೊತೆ ಪ್ರೀತಿಯನ್ನು ಹಂಚಿ. ಅಪರಿಚಿತರ ಸಹವಾಸವು ಇಂದು ಬೇಡ. ನಿಮ್ಮ ಸಂಪತ್ತು ನಷ್ಟವಾಗಬಹುದು.
ಮಿಥುನ ರಾಶಿ: ಇಂದಿನ ನಿಮ್ಮ ದಿನವು ಆತ್ಮವಿಶ್ವಾಸದಿಂದ ಇರಲಿದೆ. ನಿಮ್ಮ ಕಾರ್ಯಗಳು ಅಂದುಕೊಂಡಂತೆ ಪೂರ್ಣವಾಗುವುದು. ಹಳೆಯ ವಿಚಾರವನ್ನು ಇಂದು ವಿರೋಧಿಗಳು ಪುನಃ ಮೇಲಕ್ಕೆ ತಂದು ಕಲಹ ಮಾಡಬಹುದು. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿರಂತರ ಕ್ರಿಯಾಶೀಲತೆಯು ನಿಮ್ಮ ಮಾನಸಿಕ ಒತ್ತಡವನ್ನು ನಿವಾರಿಸುವುರು. ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಆತಂಕವಿರಲಿದೆ. ಸಹೋದ್ಯೋಗಿಗಳು ನಿಮ್ಮ ವರ್ತನೆಯನ್ನು ಗಮನಿಸುವರು. ಹೊಸ ಭೂಮಿಯ ಖರೀದಿಗೆ ಆಪ್ತರನ್ನು ಜೊತೆಗೆ ಇಟ್ಟುಕೊಳ್ಳಿ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ.
ಕಟಕ ರಾಶಿ: ಕಾನೂನಿನ ಮಾರ್ಗದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕೆಲವು ಪ್ರಯೋಜನವನ್ನು ಪಡೆಯುವಿರಿ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಇಂದು ನಿಮ್ಮ ಕೆಲಸಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿಯು ಇರಲಿದೆ. ಮನೆಯಿಂದ ದೂರ ಇರಬೇಕಾದೀತು. ಸಜ್ಜನರ ಸಹವಾಸವನ್ನು ಹೆಚ್ಚು ಇಷ್ಟಪಡುವಿರಿ. ಇತರರಿಗೆ ನೋವಾಗದಂತೆ ಮಾತುಗಳನ್ನಾಡಿ. ಭೋಗವಸ್ತುಗಳನ್ನು ಖರೀದಿಸುವಿರಿ. ನಿಮ್ಮ ಗೌರವಕ್ಕೆ ಸರಿಯಾದ ಕಾರ್ಯವನ್ನು ಮಾಡಿ. ಹಿರಿಯ ಹಿತವಚನವು ನಿಮಗೆ ಕಿರಿಕಿರಿಯಂತೆ ತೋರುವುದು. ಆಹಾರದಿಂದ ಇಂದು ಅನಾರೋಗ್ಯವು ಬರಬಹುದು. ಸಂಗಾತಿಯ ಮಾತನ್ನು ವಿರೋಧಿಸುವಿರಿ. ಸುಲಭವಾಗಿ ಸಿಕ್ಕಿದ್ದನ್ನು ಬಿಟ್ಟುಕೊಡುವಿರಿ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ