AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಭೂಮಿ ವ್ಯವಹಾರದಲ್ಲಿ ನಿಮಗೆ ಜಯ ದೊರೆಯಲಿದೆ, ಅನವಶ್ಯಕ ಗೊಂದಲ ಬೇಡ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಭೂಮಿ ವ್ಯವಹಾರದಲ್ಲಿ ನಿಮಗೆ ಜಯ ದೊರೆಯಲಿದೆ, ಅನವಶ್ಯಕ ಗೊಂದಲ ಬೇಡ
ಸಾಂದರ್ಭಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 04, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 4 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:59 ರಿಂದ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:37ರ ವರೆಗೆ.

ಮೇಷ ರಾಶಿ: ಇಂದು ಹೆಚ್ಚುತ್ತಿರುವ ಆದಾಯದಿಂದ ನಿಮ್ಮ ಆರ್ಥಿಕ ಸಮಸ್ಯೆ ಸರಿಯಾಗುವುದು. ನಿಮಗೇ ಗೊತ್ತಿಲ್ಲದಂತೆ ಶತ್ರುಗಳ ಅನ್ಯಾಯಕ್ಕೆ ಸಾಕ್ಷಿಯು ಸಿಗುವುದು. ನಿಮ್ಮ ಮಾನಸಿಕ ಬಲವು ಅಧಿಕವಾಗುವುದು. ಅನುಭವಯುಕ್ತವಾದ ಸಲಹೆಗಳು ನಿಮಗೆ ಪ್ರಯೋಜನಕ್ಕೆ ಬರಲಿವೆ. ನಿಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡಲಿ ಸಂದರ್ಭವು ಬರಲಿದ್ದು ನೀವು ಮಾತನಾಡುವಾಗ ಉದ್ವೇಗಕ್ಕೆ ಒಳಗಾಗದೇ ಇರಿ. ಸಂಗಾತಿಯ ಕೋಪಕ್ಕೆ ಕಾರಣವನ್ನು ಸಮಾಧಾನ ಮಾಡಲು ಪ್ರಯತ್ನಿಸಿ.

ವೃಷಭ ರಾಶಿ: ಇಂದು ನಿಮ್ಮ ವೈಯಕ್ತಿಕ ಕೆಲಸಗಳಿಗೆ ಅಡೆತಡೆಗಳು ಬರುವುದು. ಸ್ವಲ್ಪ ಆಲೋಚಿಸಿದರೆ ಸಮಸ್ಯೆಗಳಿಗೆ ಉತ್ತರ ಸಿಗುವುದು. ಭೂಮಿಯ ವ್ಯವಹಾರದಲ್ಲಿ ನಿಮಗೆ ಜಯ ದೊರೆಯುವ ಸಾಧ್ಯತೆ ಇದೆ. ಈ ಬಗ್ಗೆ ಅನವಶ್ಯಕ ಗೊಂದಲಕ್ಕೆ ಒಳಗಾಗಬಹುದು. ಯಾರದೋ ಮಾತನ್ನು ಕೇಳಿ ಹೂಡಿಕೆ ಮಾಡುವುದು ಬೇಡ. ಬೇಕಿದ್ದರೆ ಭೂಮಿಯ ಮೇಲೆ ಹೂಡಿಕೆ ಮಾಡುವ ಬಗ್ಗೆ ಯೋಚಿಸಿ. ತಾಯಿಯೊಂದಿಗೆ ವಿವಾದವಾಗುವ ಸಾಧ್ಯತೆ ಇದೆ. ಆಸೆ ಆಮಿಷಗಳಿಗೆ ಬಲಿಯಾಗದೇ ನಿಮ್ಮ ಗುರಿಯತ್ತ ಗಮನ ನೀಡಿರಿ.

ಮಿಥುನ ರಾಶಿ: ನಿಮ್ಮಲ್ಲಿ ಎಷ್ಟೇ ಆತ್ಮವಿಶ್ವಾಸವಿದ್ದರೂ ಕೆಲಸಗಳ ಒತ್ತಡದಲ್ಲಿ ಗೊಂದಲ ಒಳಗಾಗುವಿರಿ. ಇದರಿಂದ ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಅಡ್ಡ ಪರಿಣಾಮವು ಆಗಬಹುದು. ಮನೆ ಸದಸ್ಯರ ಮೇಲೆ ವಿನಾಕಾರಣ ಸಿಟ್ಟಾಗುವಿರಿ. ಇದು ನಿಮ್ಮ ಅಸಹಾಯಕತೆಯನ್ನು ತೋ?ರಿಸುವುದು. ಮಕ್ಕಳ ವಿದ್ಯಾಭ್ಯಾಸದಿಂದ ನಿಮಗೆ ನೆಮ್ಮದಿ ದೊರೆಯುವುದು. ಪ್ರಯಾಣ ಕಾಲದಲ್ಲಿ ಆದಷ್ಟು ಎಚ್ಚರಿಕೆ ಇರಲಿ. ಈ ದಿನ ಸಣ್ಣ ಓಡಾಟಗಳನ್ನು ಮಾಡುವಿರಿ. ವಿದೇಶಕ್ಕೆ ಹೋಗುವ ಕನಸು ಕೂಡ ನಿಜವಾಗಬಹುದು. ಯಾವುದೇ ರೀತಿಯ ವಿವಾದ ನಿಮ್ಮನ್ನು ತಪ್ಪಿಸಿಕೊಳ್ಳಿ.

ಕಟಕ ರಾಶಿ: ಇಂದು ಸರ್ಕಾರಿ ನೌಕರರಿಗೆ ಹೆಚ್ಚಿನ ಲಾಭವಿದೆ. ಹಣಕಾಸಿನ ವ್ಯವಹಾರದಲ್ಲಿ ಲೆಕ್ಕಪತ್ರಗಳನ್ನು ಸರಿಯಾಗಿಡುವುದು ಉತ್ತಮ. ಅಧಿಕಾರಿಗಳಿಂದ ಪರಿಶೀಲನೆ ಆಗಬಹುದು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವೂ ಬೇಡ. ಧೈರ್ಯದಿಂದ ಹೊಸ ಯೋಜನೆಯೊಂಡನ್ನು ಆರಂಭಿಸುವಿರಿ. ನಿಮ್ಮ ತಿಳುವಳಿಕೆಗಳಿಂದ ಬರುವ ತೊಂದರೆಯನ್ನು ಪರಿಹರಿಸಿಕೊಳ್ಳುವಿರಿ. ದಿನದ ಕೊನೆಯಲ್ಲಿ ನಿಮ್ಮ ಆರೋಗ್ಯವು ಹದ ತಪ್ಪಬಹುದು. ಯಾವುದೇ ರೀತಿಯಲ್ಲೂಅಪಘಾತವು ಆಗಬಹುದು. ವಾಹನವನ್ನು ಬಹಳ ಎಚ್ಚರಿಕೆಯಿಂದ ಚಲಾಯಿಸಿ.

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ