Horoscope: ಈ ರಾಶಿಯವರಿಗೆ ಹಣವು ವ್ಯಯವಾಗಬಹುದು, ಕಳ್ಳರ ಭೀತಿಯು ಇರಲಿದೆ

| Updated By: Rakesh Nayak Manchi

Updated on: Sep 06, 2023 | 12:15 AM

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 6) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆ ಹಣವು ವ್ಯಯವಾಗಬಹುದು, ಕಳ್ಳರ ಭೀತಿಯು ಇರಲಿದೆ
ಇಂದಿನ ರಾಶಿಭವಿಷ್ಯ
Image Credit source: iStock Photo
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 6 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ರಿಂದ 22ರ ವರೆಗೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:31 ರಿಂದ 02:03ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:59 ರಿಂದ ಮಧ್ಯಾಹ್ನ 12:31ರ ವರೆಗೆ.

ಮೇಷ ರಾಶಿ: ಯಾವುದೋ ಆಲೋಚನೆಯಲ್ಲಿ ನಿಮ್ಮ ಮನಸ್ಸು ಇರುವುದು. ಹೆಚ್ಚಿನ ಸೌಕರ್ಯದಿಂದ ನೀವು ಸೋಮಾರಿಯಾಗುವಿರಿ. ಕೇಳಿದವರಿಗೆ ನಿಮ್ಮ‌ ಸಹಾಯವು ಸಿಗಲಿದೆ.‌ ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು‌ ನೆನಪಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕೇಂದ್ರವಾಗಿ ಇರಿಸಿಕೊಂಡು ಮಾತನಾಡುವರು. ನೌಕರರ ಮೇಲೆ ನಿಮ್ಮದೊಂದು ಲಕ್ಷ್ಯ ಇರಬೇಕಾಗುವುದು. ಇಂದಿನ ಕೆಲವು ಸಂದರ್ಭದಲ್ಲಿ ಮೌನವಾಗಿ ಇರುವಿರಿ. ವಿದೇಶದ ಸಂಪರ್ಕವು ಇಂದು ಸಿಗಬಹುದು.

ವೃಷಭ ರಾಶಿ: ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳುವುದು ಉತ್ತಮ. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಿಗಬೇಕಾದ ಲಾಭದಿಂದ ವಂಚಿತರಾಗಲಿದ್ದೀರಿ. ಉಸಿರಾಟ ತೊಂದರೆಯು ಸ್ವಲ್ಪ ಕಾಣಿಸಿಕೊಳ್ಳಬಹುದು. ನೆರೆಹೊರೆಯ ವಿಚಾರದಲ್ಲಿ ಅಸಮಾಧಾನ ಇರಲಿದೆ. ಸಾಮಾಜಿಕ ಕಾರ್ಯಕ್ಕೆ ಇಂದು ಸಮಯವು ಸಿಗದು. ಗುರುವಿನ ಸಮಾಧಿಗೆ ನಮಸ್ಕರಿಸಿ.

ಮಿಥುನ ರಾಶಿ: ಹಣವು ವ್ಯಯವಾಗಬಹುದು. ಕಳ್ಳರ ಭೀತಿಯು ಇರಲಿದೆ. ಒತ್ತಡದಿಂದ ನಿಮ್ಮ ಕಾರ್ಯವು ಮಂದಗತಿಯಲ್ಲಿ ಸಾಗುವುದು. ಸ್ವಲ್ಪ ಮಾನಸಿಕ‌ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ. ಪರಿಹಾರವನ್ನು ಕಂಡುಕೊಳ್ಳಬಹುದು. ನಿಮ್ಮ ಜಾಣ್ಮೆಯಿಂದ ನಿಮ್ಮ‌ ಸಂಸ್ಥೆಯು ಹೆಚ್ಚಿನ ಯಶಸ್ಸನ್ನು ಗಳಿಸಬಹುದು. ನಿಮ್ಮ ಆಲೋಚನೆಗಳೇ ನಿಮ್ಮನ್ನು ನಿರೂಪಿಸುತ್ತವೆ. ಇಂದು ಸಂಗಾತಿಯ ನಡುವೆ ಭಿನ್ನಾಭಿಪ್ರಾಯಗಳು ಬರಬಹುದು. ಒಬ್ಬರಾದರೂ ತಟಸ್ಥರಾಗಿರುವುದು ವಿವಾದವು ಆಗದಂತೆ ನೋಡಿಕಳ್ಳಬಹುದು. ತಾಯಿಯ ಕಡೆಯಿಂದ ಸಹಾಯವು ಸಿಗಬಹುದು.

ಕಟಕ ರಾಶಿ: ಶುಭ ಕಾರ್ಯದಲ್ಲಿ ನೀವು ಭಾಗವಹಿಸುವಿರಿ. ಕಳೆದುಕೊಂಡ ಸಂಪತ್ತು ಮತ್ತಾವುದೋ ರೀತಿಯಲ್ಲಿ ಬರಬಹುದು. ಸಣ್ಣ ಮಕ್ಕಳಿಂದ ನೆಮ್ಮದಿಯು ಸಿಗಲಿದೆ. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು. ಆದಾಯದ ಮೂಲವು ಸರಿಯಾಗಿ ಇರಲಿದೆ. ನಿಮ್ಮ ಸಹೋದರನ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಬಹುದು. ಹೂಡಯಲ್ಲಿ ನಿಮಗೆ ಆಸಕ್ತಿಯು ಇಂದು ಕಡಿಮೆ ಇರಲಿದೆ. ಹೊಸ ವಸ್ತುಗಳನ್ನು ಖರೀದಿಸಬೇಕು ಎಂಬ ತುಡಿತ ಇರುವುದು. ಸುಮ್ಮನೇ ಆಡಿದ ಮಾತು ಸತ್ಯವಾಗಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ