Daily Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 01, 2023 | 12:10 AM

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 01) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 01 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಶುಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:22 ರಿಂದ 10:59 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:50 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:08 ರಿಂದ 07:45 ರ ವರೆಗೆ.

ಮೇಷ: ನಿಮ್ಮಿಂದ ಆಗಬೇಕಾದ ಕೆಲಸಗಳು ಬಹಳ ಇದ್ದರೂ ಯಾವುದೇ ಚಿಂತೆ ಇಲ್ಲದೇ ಇರುವಿರಿ. ಆಪ್ತರು ನಿಮ್ಮಿಂದ ದೂರವಾಗಬಹುದು. ಇದು ನಿಮ್ಮನ್ನು ವಿಚಲಿತ ಗೊಳಿಸಬಹುದು. ನಿಮ್ಮನ್ನು ಬಳಸಿಕೊಳ್ಳುವ ಜನರಿದ್ದಾರೆ. ಆದಷ್ಟು ಎಚ್ಚರಿಕೆಯಿಂದ ವ್ಯವಹರಿಸಿ. ನಿಮ್ಮ ಅಂತರಂಗವನ್ನು ನೀವು ತಿಳಿದುಕೊಳ್ಳುವ ಅವಶ್ಯಕತೆ ಇದೆ. ನೀವು ಯಾರನ್ನಾದರೂ ಬಹಳ ಇಷ್ಟಪಡುವಿರಿ. ಮನೆಯಿಂದ ದೂರವಿರಲು ನೀವು ಬಯಸುವಿರಿ. ಉದ್ಯೋಗದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರುವುದು. ಮನೆಯ ಚಿಂತೆಯೂ ನಿಮ್ಮನ್ನು ಕಾಡಬಹುದು. ಕೆಲಸದ ವಿಚಾರದಲ್ಲಿ ಉಭಯ ಸಂಕಟವಾಗಬಹುದು.

ವೃಷಭ: ನಿಮಗೆ ಯಾವದೋ ಪ್ರೇರಣೆಯಿಂದ ನಿಮ್ಮ ಜೀವನವನ್ನು ಬದಲಿಸಿಕೊಳ್ಳುವಿರಿ. ಪ್ರೀತಿಯನ್ನು ಒಡೆಯಲು ನೀವು ಬಹಳ ಹಾತೊರೆಯುವಿರಿ. ಸಣ್ಣ ವ್ಯಾಪರವು ಲಾಭದಾಯಕವಾಗಲಿದೆ. ಕೊಟ್ಟ ಜವಾಬ್ದಾರಿಯನ್ನು ಸ್ವ ಇಚ್ಛೆಯಿಂದ ಮಾಡುವಿರಿ. ನಿಮಗೆ ಭವಿಷ್ಯವನ್ನು ನಿರ್ಧರಿಸಲು ಕಷ್ಟವಾದೀತು. ಇಂದಿನ ನಿಮ್ಮ ಸಮಯವು ಸದುಪತೋಗವಾಗಲಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಹೊಸತನ್ನು ಮಾಡಲು ಯತ್ನಿಸುವಿರಿ. ಹೊಸ ಗೆಳೆಯರ ಸಹವಾಸ ನಿಮಗೆ ಆಗಲಿದೆ. ನಿಮ್ಮ ನಿಲುವನ್ನು ಸ್ವಲ್ಪ ಸಡಿಲ ಮಾಡಿಕೊಳ್ಳಬೇಕಾದೀತು. ಮನೆಯವರ ಜೊತೆ ದೇವಾಲಯಕ್ಕೆ ಹೋಗುವಿರಿ.

ಮಿಥುನ: ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ತಾಯಿಯಿಂದ ನಿಮಗೆ ಹಿತವಚನವು ಸಿಗಬಹುದು. ಪ್ರೀತಿಯನ್ನು ಉಳಿಸಿಕೊಳ್ಳಲು ನೀವು ಪ್ರಯತ್ನಶೀಲರಾಗುವಿರಿ. ಹಣಕಾಸಿಗೆ ಸಂಬಂಧಿಸಿದಂತೆ ನಿಮ್ಮ ಕ್ರಮವು ಬಹಳ ಚೆನ್ನಾಗಿರುವುದು. ಯಾರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಬೇಡ. ತಾಳ್ಮೆಯ ಪರೀಕ್ಷೆ ಇಂದು ಆಗಬಹುದು. ಮೇಲಧಿಕಾರಿಗಳ ಪ್ರಶಂಸೆ ನಿಮಗೆ ಉತ್ಸಾಹವನ್ನು ಹೆಚ್ಚು ಮಾಡುವುದು. ಅನವಶ್ಯಕ ಖರ್ಚನ್ನು ನೀವು ನಿಯಂತ್ರಿಸುವಿರಿ. ಎಲ್ಲ ವಿಚಾರವನ್ನೂ ನೀವು ಕೇಳಲು ಇಚ್ಛಿಸುವಿರಿ. ದೈವಭಕ್ತಿಯು ಕಡಿಮೆ ಆಗಲಿದೆ. ಶ್ರಮದ ಕೆಲಸಕ್ಕೆ ನೀವು ಹೋಗುವುದಿಲ್ಲ.

ಕಟಕ: ಅಧಿಕ ಒತ್ತಡದಿಂದ ಕೆಲಸವು ನಿಮಗೆ ಸೂಚಿಸದೇ ಹೋಗಬಹುದು. ಸಜ್ಜನರ ಸಹವಾಸದಿಂದ ನಿಮ್ಮಲ್ಲಿ ಸಣ್ಣ ಬದಲಾವಣೆ ಆಗಲಿದೆ. ಕಬ್ಬಿಣದ ವ್ಯಾಪರವು ನಿಮಗೆ ಲಾಭದಾಯಕವಾಗಬುಹುದು. ವೃತ್ತಿಯಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳು ಕೇಳಿಬರಬಹುದು. ಸಿಗಬೇಕಾದವರು ನಿಮ್ಮಿಂದ ದೂರವಾಗಬಹುದು. ಯಥೇಚ್ಛವಾಗಿ ಆಹಾರವನ್ನು ಸ್ವೀಕರಿಸುವಿರಿ. ಮನೆಗೆ ಬಂದವರಿಗೆ ಒಳ್ಳೆಯ ಆತಿಥ್ಯವನ್ನು ಕೊಡಿ. ವಿದ್ಯಾಭ್ಯಾಸದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ಅತಿಯಾದ ಮಾತು ಕಿರಿಕಿರಿಯನ್ನು ಕೊಟ್ಟೀತು. ಕೆಲವು ಸಂಭವನೀಯತೆಯನ್ನು ನೀವು ಊಹಿಸುವಿರಿ.