ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ವರಿಯಾನ್, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:01ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:34 ರಿಂದ 02:06ರ ವರೆಗೆ.
ಮೇಷ: ಇಂದು ನಿಮಗೆ ಹೊಸತನ್ನೇನಾದರೂ ಮಾಡುವ ಮನಸ್ಸಿದ್ದರೂ ಬೇಕಾದ ವ್ಯವಸ್ಥೆ, ಪರಿಸ್ಥಿತಿಗಳು ಇಲ್ಲದೇ ನಿಲ್ಲಿಸಬೇಕಾದೀತು. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಗೊಂದಲಗಳು ಎದುರಾಗುವುದು. ಉದ್ಯೋಗದಲ್ಲಿ ಸ್ವಲ್ಪ ಹಿನ್ನಡೆಯಾಗುವ ಸಾಧ್ಯತೆ ಇದೆ. ಗೊಂದಲಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ತೀರ್ಮಾನಕ್ಕೆ ಬರದೇ ಅನುಭವಿಸಬೇಕಾಗಬಹುದು. ಅನುಭವಿಗಳ ಮಾರ್ಗದರ್ಶನ ಪಡೆಯಿರಿ. ಹಣವನ್ನು ಉಳಿಸಲು ಯತ್ನಿಸುವಿರಿ. ಅದು ಬಂದರೂ ಗೊತ್ತಾಗದಂತೆ ಖಾಲಿಯಾಗುವುದು. ಮಾತನ್ನು ಹಿತವೂ ಮಿತವೂ ಆಗುವಂತೆ ಮಾಡಿ.
ವೃಷಭ: ಇಂದು ನ್ಯಾಯಾಲಯದಲ್ಲಿ ತೀರ್ಪು ಬರಲಿದೆ. ಎಂತಹದೇ ತೀರ್ಮಾನಬಂದರೂ ಸ್ವೀಕರಿಸಿ. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ. ಅನಿವಾರ್ಯವಾಗಿ ಸಾಲವನ್ನು ಮಾಡಬೇಕಾಗಿಬರಬಹುದು. ಮನೆಯಿಂದ ದೂರವಿರುವ ನೀವು ಬೇಸರಗೊಳ್ಳುವಿರಿ. ನಿಮ್ಮ ಸ್ನೇಹಿತರು ನಿಮ್ಮ ಗುಟ್ಟನ್ನು ಹೊರಹಾಕಿಯಾರು. ಧಾರ್ಮಿಕವಾಗಿ ಆಸಕ್ತಿಯನ್ನು ಇಟ್ಟುಕೊಳ್ಳುವಿರಿ. ಕಾಲು ನೋವು ಕಾಣಿಸಿಕೊಂಡೀತು. ಹಿರಿಯರಿಂದ ಆಶೀರ್ವಾದವು ಸಿಗಲಿದೆ. ಭೂಮಿಯ ವ್ಯವಹಾರದಲ್ಲಿ ನೀವು ಲಾಭಗಳಿಸಬಹುದಾಗಿದೆ. ಭೂವರಾಹಸ್ತೋತ್ರವನ್ನು ಪಠಿಸಿ.
ಮಿಥುನ: ಹಣಕಾಸಿನ ವಿಚಾರವಾಗಿ ದಾಂಪತ್ಯದಲ್ಲಿ ಸಣ್ಣ ಕಲಹವಾಗಬಹುದು. ಯಾರದೋ ಮಾತಿನ ಆಧಾರದ ಮೇಲೆ ನೀವು ನಿಮ್ಮವರನ್ನು ದ್ವೇಷಿಸಬಹುದು. ಉದ್ಯೋಗದಲ್ಲಿ ಒತ್ತಡವಿದ್ದು ಅದನ್ನು ನಿಭಾಯಿಸುವ ಕ್ರಮವನ್ನು ಕಲಿತುಕೊಳ್ಳಿ. ನಿಮ್ಮ ಕೆಲಸಕ್ಕೆ ಅಕಸ್ಮಾತ್ ತೊಂದರೆಗಳು ಬರಬಹುದು. ಎಲ್ಲವನ್ನೂ ಸಮಾನಮನಸ್ಸಿನಿಂದ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳುವಿರಿ. ಆಪ್ತರ ಜೊತೆ ಒಂದಿಷ್ಟು ಸಮಯವನ್ನು ಕಳೆಯಬಹುದು. ಕುಟುಂಬದಲ್ಲಿ ಭಿನ್ನಮತ ಇರಲಿದೆ.
ಕಟಕ: ನಿಮ್ಮ ಮತ್ತು ಮೇಲಧಿಕಾರಿಗಳ ನಡುವೆ ಮನಸ್ತಾಪವುಂಟಾಗಬಹುದು. ಇದನ್ನು ಮಾತುಕತೆಯ ಮೂಲಕ ಸರಿ ಮಾಡಿಕೊಳ್ಳುವುದು ಉಚಿತ. ನಿಮ್ಮ ಕಾರ್ಯಕ್ಕೆ ಮೆಚ್ಚುಗೆ ಸಿಗಲಿದೆ. ಇಂದು ಬೇಸರಗೊಳ್ಳುವ ವಿಚಾರಗಳು ಬರಬಹುದು. ಸುಖ ಹಾಗೂ ದುಃಖವನ್ನು ಸಮವಾಗಿ ತೆಗರಲೆದುಕೊಳ್ಳಬೇಕಾದೀತು. ಅತಿಯಾದ ಸೌಖ್ಯವನ್ನು ಪಡೆತಲು ಹೋಗಿ ಅನಾಹುತವನ್ನು ಮಾಡಿಕೊಳ್ಳಬಹುದು. ಸಣ್ಣ ಸಮಸ್ಯೆಯನ್ನು ದೊಡ್ಡದುಮಾಡಿಕೊಳ್ಳಲಿದ್ದೀರಿ. ಬಂಧುಗಳು ನಿಮ್ಮ ಸಹಾಯಕ್ಕೆ ಬರಬಹುದು.
-ಲೋಹಿತಶರ್ಮಾ ಇಡುವಾಣಿ