Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 11) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jun 11, 2023 | 12:10 AM

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪೂರ್ವಾಭದ್ರ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಸಂಜೆ 05:23 ರಿಂದ 06:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:32 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:46 ಗಂಟೆ 05:23ರ ವರೆಗೆ.

ಮೇಷ: ಇಂದು ಅನುಭವಿ ಜನರಿಂದ ಬೆಂಬಲವನ್ನು ಪಡೆಯುತ್ತೀ ಒಡೆರಿ. ವೃತ್ತಿಜೀವನದಲ್ಲಿ ಪರಿಣಾಮ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಮಧ್ಯಮವಾಗಿ ಉತ್ತಮವಾಗಿರುತ್ತದೆ. ಆತ್ಮವಿಶ್ವಾಸ ಹೆಚ್ಚುತ್ತಿದೆ. ವೃತ್ತಿಕ್ಷೇತ್ರದಲ್ಲಿ ಅತಿಯಾದ ಉತ್ಸಾಹ ಬೇಡ. ಅನೇಕ ಸಂದರ್ಭಗಳಲ್ಲಿ, ನಿಮ್ಮ ನಿರೀಕ್ಷೆಗೆ ವಿರುದ್ಧವಾದುದು ನಡೆಯಬಹುದು. ಹೆಚ್ಚು ಕುತೂಹಲ ಬೇಡ. ಪ್ರಯಾಣದಲ್ಲಿ ಜಾಗರೂಕರಾಗಿರಿ, ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಯಾವುದೇ ರೀತಿಯ ಆರ್ಥಿಕ ಅಪಾಯವನ್ನು ತೆಗೆದುಕೊಳ್ಳಬೇಡಿ. ಮೃದು ಮಾತು ಕ್ಷೇತ್ರದಲ್ಲಿ ಪ್ರಯೋಜನವನ್ನು ನೀಡುತ್ತದೆ ಕಠಿಣ ಮಾತುಗಳು ಕ್ಷಣಿಕವಾಗಬಹುದು.

ವೃಷಭ: ವೃತ್ತಿಜೀವನದಲ್ಲಿ ನೀವು ಮಾಡುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಆದರೆ ನೀವು ಕೆಲಸ ಮಾಡುವ ವಿಧಾನದಲ್ಲಿ ಸಮಸ್ಯೆ ಇರಬಹುದು. ವೃತ್ತಿಜೀವನದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ಕುಟುಂಬ ಜೀವನವು ಆಹ್ಲಾದಕರವಾಗಿರುತ್ತದೆ. ನೀವು ಸಣ್ಣ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ, ನೀವು ಕುಟುಂಬದಲ್ಲಿ ಸಂತೋಷವನ್ನು ಪಡೆಯುತ್ತೀರಿ. ಕೆಲವು ಉತ್ತಮ ಪ್ರಯೋಜನಗಳ ಯೋಗವಿದೆ. ನಿಮ್ಮ ಕಠಿಣ ಪರಿಶ್ರಮವು ಫಲವನ್ನು ನೀಡುತ್ತದೆ. ಯಾವುದೇ ಸೂಕ್ತ ನಿರ್ಧಾರವು ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ. ಮಕ್ಕಳ ಅಜಾಗರೂಕತೆಯಿಂದ ಒತ್ತಡ ಹೆಚ್ಚಾಗುತ್ತದೆ.

ಮಿಥುನ: ರಾಜಕೀಯದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ನಿಮ್ಮ ಅನುಭವವು ಕೆಲಸ ಮಾಡುವುದು. ಇಂದು ನೀವು ದೊಡ್ಡ ಲಾಭವು ಪಡೆದುಕೊಳ್ಲಿ ಯತ್ನಿಸುವಿರಿ. ಹೊಸ ಮನೆಯ ನಿರ್ಮಾಣದ ಸಾಧ್ಯತೆಗಳು ಬಹಳ ಇರಲಿವೆ. ಬಹುನಿರೀಕ್ಷಿತ ಕೆಲಸದಿಂದ ಯಶಸ್ಸಿದೆ. ಲಾಭ ಪಡೆಯಲು ಮಾಡಿದ ಪ್ರಯತ್ನಗಳು ಯಶಸ್ವಿಯಾಗುವುದು. ಮಿತ್ರರ ಸಂಪೂರ್ಣ ಬೆಂಬಲವನ್ನು ಪಡೆಯುವಿರಿ. ಮಾತಿನಲ್ಲಿ ಕಠೋರತೆ ಬೇಡ. ವಿವೇಚನೆಯನ್ನು ಬಳಸಿ.

ಕಟಕ: ನೀವು ಗಮನ ಕೊಡದಿದ್ದರೆ, ಅನೇಕ ಉತ್ತಮ ಅವಕಾಶಗಳು ಕಳೆದುಹೋಗುತ್ತವೆ. ಆರೋಗ್ಯವು ಒತ್ತಡಕ್ಕೆ ಕಾರಣವಾಗಬಹುದು. ಕುಟುಂಬ ಮತ್ತು ಸಹೋದ್ಯೋಗಿಗಳ ಮಹತ್ವವನ್ನು ಅರ್ಥಮಾಡಿಕೊಳ್ಳಿ ಮತ್ತು ಅವರೊಂದಿಗೆ ನಿಮ್ಮ ವ್ಯವಹಾರದಲ್ಲಿ ಜಾಗರೂಕರಾಗಿರಿ. ಪೋಷಕರ ಆರೋಗ್ಯವು ಚಿಂತೆಯುಂಟುಮಾಡಬಹುದು. ಅಲ್ಪಾವಧಿಯ ಹೂಡಿಕೆ ಲಾಭದಾಯಕವಾಗುತ್ತದೆ. ಕೆಲಸದ ಹೊರೆಯೊಂದಿಗೆ ಒತ್ತಡ ಕಾಣುತ್ತಿದೆ. ತಪ್ಪು ಲೆಕ್ಕಾಚಾರದಿಂದ ನಷ್ಟವಾಗುವ ಸಾಧ್ಯತೆಯಿದೆ. ನಿಮ್ಮವರ ಎದುರು ಅಹಂಕಾರವನ್ನು ತೋರಿಸಬೇಡಿ. ಮಕ್ಕಳೊಂದಿಗೆ ವಿವಾದಗಳು ಉಂಟಾಗಬಹುದು..

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್