Nithya bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: Aajtak.In
Follow us
Rakesh Nayak Manchi
|

Updated on: Apr 12, 2023 | 5:30 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮೂಲ, ಯೋಗ : ಪರಿಘ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06-22 ಕ್ಕೆ, ಸೂರ್ಯಾಸ್ತ ಸಂಜೆ 06-44 ಕ್ಕೆ, ರಾಹು ಕಾಲ ಮಧ್ಯಾಹ್ನ 12:33 – 02:06ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:55 – 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:00 – ಮಧ್ಯಾಹ್ನ 12:33ರ ವರೆಗೆ.

ಮೇಷ: ಯಾವುದೂ ಸರಿಯಿಲ್ಲ ಎಂದು ಹೇಳುವ ಬದಲು ಏನು ಸರಿಯಿದೆ? ಹೇಗೆ ಸರಿ ಮಾಡಬಹುದು ಎನ್ನುವ ಬಗ್ಗೆ ಗಮನ ಕೊಡಿ. ಸಂಸ್ಥೆಯು ನಿಮ್ಮ ನೇತೃತ್ವದಲ್ಲಿ ಚೆನ್ನಾಗಿ ನಡೆಯಬಹದು. ಅವುಗಳ ಕುರಿತು ಅತಿಯಾಗಿ ಆಲೋಚಿಸಿದಷ್ಟೂ ಸಮಸ್ಯೆಗಳು ಹಾಗೇ ಇರುತ್ತವೆ. ಹೊಸ ಉದ್ಯೋಗದ ಸೃಷ್ಟಿಗೆ ಹೆಚ್ಚು ಮನಸ್ಸು ಮಾಡುವಿರಿ. ವಾಹನದಿಂದ ಅಪಘಾತವಾಗುವ ಸಾಧ್ಯತೆ. ವೃತ್ತಿಯ ಸ್ಥಳದಲ್ಲಿ ನೀವು ಸಂತೋಷವಾಗಿ ಕೆಲಸಮಾಡುವಿರಿ. ಆಲಸ್ಯವು ದೂರವಾದ ಕಾರಣ ಅನೇಕ ಕೆಲಸಗಳನ್ನು ಅನಾಯಸವಾಗಿ, ಶೀಘ್ರವಾಗಿ ಮಾಡಿ ಮುಗಿಸುವಿರಿ.

ವೃಷಭ: ಮನೆಯವರ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಚ್ಛಿಸುವಿರಿ. ಒತ್ತಡವನ್ನು ತಂದುಕೊಳ್ಳದೇ ಕೆಲಸವನ್ನು ಮಾಡಿ. ಇಲ್ಲವಾದರೆ ಆರೋಗ್ಯದ ಮೇಲೆ ಹೆಚ್ಚು ಪ್ರಭಾವವನ್ನು ಬೀರಬಹುದು. ಕೇಳದೇ ಯಾರಿಗೂ ಏನನ್ನೂ ಹೇಳಬೇಡಿ. ವಸ್ತುಗಳ ಖರೀದಿಯಿಂದ ಉಂಟಾದ ಧನದ ವ್ಯಯವು ನಿಮ್ಮಲ್ಲಿ ಆತಂಕವನ್ನು ಉಂಟುಮಾಡಲಿದೆ. ಕಥೆಯನ್ನು ಹೇಳವ ಆಸಕ್ತಿ ಹೆಚ್ಚಾಗಬಹುದು. ಬರವಣಿಗೆಯ ವಿಚಾರದಲ್ಲಿ ಹೆಚ್ಚು ಮನಸ್ಸನ್ನು ಕೊಡಿ. ಬೇಸರಿಸದೇ ಬಂದುದನ್ನು ಬಂದಂತೆ ಎದುರಿಸವುದು ನಿಮಗೆ ಸ್ವಭಾವಸಿದ್ಧ.

ಮಿಥುನ: ಅಧಿಕಾರದ ಆಸೆಯಿಂದ ಮತ್ಯಾರನ್ನೋ ಕೆಟ್ಟವರನ್ನಾಗಿ ಮಾಡುವುದು ಸರಿಯಲ್ಲ. ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಿ, ಬೇಕಾದ ಶ್ರಮವಹಿಸಿ. ಅನಾರೋಗ್ಯವು ನಿಮ್ಮ ಮಾನಸಿಕ ನೆಮ್ಮದಿಯನ್ನು ಹಾಳುಮಾಡಬಹುದು. ಪ್ರಾಣಿಗಳ ಜೊತೆ ಸಮಯವನ್ನು ಕಳೆಯುವಿರಿ. ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕ ಸನ್ಮಾರ್ಗದಲ್ಲಿ ಹೋಗುತ್ತಿದೆಯೇ ಗಮನಿಸಿಕೊಳ್ಳಿ. ಮಾತನ್ನು ಯೋಗ್ಯವಾಗಿ, ಯೋಗ್ಯಸ್ಥಾನದಲ್ಲಿ ಆಡಿರಿ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹೋರಾಡುವಿರಿ. ಯಾರನ್ನೂ ಒತ್ತಾಯಿಸದೇ ಕೆಲಸವನ್ನು ಮಾಡಿಸಿಕೊಳ್ಳಿ.

ಕಟಕ: ಸಮಾಜಕ್ಕೆಂದು ನಿಮ್ಮನ್ನು ನೀವು ಸಮರ್ಪಣೆ ಮಾಡಿಕೊಳ್ಳುವ ಮನಸ್ಸು ಮಾಡುವಿರಿ. ಅದು ನಿಮಗೆ ಮುಳುವಾದೀತು. ಉದ್ವೇಗದ ಮಾತುಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ಆರ್ಥಿಕವಾದ ದುರ್ಬಲತೆ ನಿಮ್ಮನ್ನು ಕಾಡಬಹುದು. ಪ್ರಪಂಚದ ಬೇರೆ ಬೇರೆ ಸ್ಥಳಗಳಿಗೆ ಹೋಗುವ ಆಸೆಯುಳ್ಳವರಾಗಿರುವಿರಿ. ಧಾರ್ಮಿಕ ಕಾರ್ಯಗಳನ್ನು ಮಾಡಲು ಒಲವು ಬರಲಿದೆ. ಕುಟುಂಬದವರು ನಿಮ್ಮನ್ನು ಬಹಳ ಪ್ರೀತಿಸುವರು. ಅವರಿಗೆ ಸ್ವಲ್ಪ ಸಮಯ ಕೊಡಿ. ಹಣವನ್ನು ಉಳಿಸಲು ಪ್ರಯತ್ನಶೀಲರಾಗುವಿರಿ.

-ಲೋಹಿತಶರ್ಮಾ ಇಡುವಾಣಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ