AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: maharashtratimes.com
ಗಂಗಾಧರ​ ಬ. ಸಾಬೋಜಿ
|

Updated on: Apr 13, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಶಿವ, ಕರಣ : ಬಾಲ, ಸೂರ್ಯೋದಯ ಬೆಳಗ್ಗೆ 06-21 ಕ್ಕೆ, ಸೂರ್ಯಾಸ್ತ ಸಂಜೆ 06-44 ಕ್ಕೆ, ರಾಹು ಕಾಲ ಮಧ್ಯಾಹ್ನ 02:06 – 03:39ರ ವರೆಗೆ, ಯಮಘಂಡ ಕಾಲ 06:21 – 07:54ರ ವರೆಗೆ, ಗುಳಿಕ ಕಾಲ 09:27 – ಮಧ್ಯಾಹ್ನ 11:00ರ ವರೆಗೆ.

ಮೇಷ: ಇಂದು ಬರುವ ಕೋಪವನ್ನು ಕಡಿಮೆ ಮಾಡಿಕೊಳ್ಳಿ. ಮನಸ್ಸು ಶಾಂತವಾದ ಬಳಿಕ ನಿಮ್ಮ ಕಾರ್ಯಗಳನ್ನು ಆರಂಭಿಸಿ.‌ ಅನವಶ್ಯಕ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅಪಮಾನವಾಗ ಅದಕ್ಕೆ ಉತ್ತರಿಸಲು ಹೋಗಿ ಇನ್ನೊಂದಿಷ್ಟು ಕೆಸರಿನ್ನು ಮೈಗೆ ಹಚ್ಚಿಕೊಳ್ಳುವ ಕೆಲಸವಾದೀತು. ಆರ್ಥಿಕ ಸಂಕಷ್ಟಕ್ಕೆ ಇಂದೇ ಯೋಜನೆಯನ್ನು ರೂಪಿಸಿ. ಆಸ್ತಿ ವ್ಯವಹಾರದಲ್ಲಿ ದಾಯಾದಿ ಕಲಹವಾಗಿ ಬಗೆ ಹರಿಯುವುದು. ಅನಿರೀಕ್ಷಿತ ಸುದ್ದಿಗೆ ಆತಂಕಪಡುವುದು ಬೇಡ.

ವೃಷಭ: ಇಂದು ಯಾರ ಜೊತೆಯಾದರೂ ವಾದವನ್ನು ಮಾಡಬೇಕು ಎಂದುಕೊಂಡಿರುತ್ತೀರಿ. ಉದ್ಯೋಗವನ್ನು ಬದಲಾಯಿಸುವ ಯೋಚನೆ ಇರಲಿದೆ. ಸ್ನೇಹಿತರ ಜೊತೆ ಸ್ನೇಹಕೂಟವನ್ನು ನಿಮ್ಮ ಮನೆಯಲ್ಲಿ ಏರ್ಪಡಿಸುವಿರಿ. ನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆದರೂ ಸುಮ್ಮನಿರುವಿರಿ. ಮನೆಯಲ್ಲಿ ಇದ್ದು ಎಲ್ಲರಿಗೂ ಸಹಾಯ ಮಾಡುವಿರಿ. ಕಷ್ಟವಾದರೂ ಇಂದು ಪ್ರಯಾಣವನ್ನು ಮಾಡಲೇ ಬೇಕಾಗಬಹುದು. ಎಲ್ಲರನ್ನೂ ಸಮಾಧಾನ ಮಾಡಲಾಗದು. ನಿಮ್ಮ ಕರ್ತವ್ಯವನ್ನು ಮಾಡಿ ಮುಗಿಸಿ. ರಾಜಕೀಯ ವ್ಯಕ್ತಿಗಳಿಗೆ ಬೆಂಬಲವಿರುವುದನ್ನು ಕಾಣಬಹುದು.

ಮಿಥುನ: ಸ್ವಾಭಿಮಾನಿಯಾಗಿ ನೀವು ಅನೇಕ ಕಷ್ಟವನ್ನೂ ಹಸಿವನ್ನೂ ಅನುಭವಿಸುವಿರಿ. ಅನಾರೋಗ್ಯದಿಂದ ವೈದ್ಯರ ಭೇಟಿಯಾಗಲಿದ್ದೀರಿ. ಶತ್ರುಗಳ ಎದುರೇ ನೀವು ಮೇಲೆದ್ದು ಬರುವುದು ನಿಮಗೆ ಹೆಮ್ಮ ಎನಿಸಬಹುದು. ಯಂತ್ರಜ್ಙರಾದ ನಿಮಗೆ ಕೆಲಸವು ಹೆಚ್ಚಾಗಬಹುದು. ಹೆಂಡತಿಯ ಕಡೆಯಿಂದ ಏನಾದರೂಉ ಕಿರಿಕಿರಿ ಉಂಟಾಗಬಹುದು‌. ಕಛೇರಿಯಲ್ಲಿ ಸಮಾಧಾನ ತರುವ ವಿಚಾರಗಳು ಇರಬಹುದು. ಸಂಗಾತಿಯ ಜೊತೆ ಹರಟೆ ಹೊಡೆಯುತ್ತ ಕಾಲ ಕಳೆಯುವಿರಿ. ನಿಮ್ಮ ರಾಶಿಯಲ್ಲಿಯೇ ಕುಜನಿದ್ದಾನೆ. ಜ್ವರಾದಿಗಳು ಬರಬಹುದು. ಧನ್ವಂತರಿಯ ಸ್ತೋತ್ರ ಮಾಡಿ.

ಕರ್ಕ: ಇಷ್ಟು ದಿನ ಸ್ತಬ್ಧವಾಗಿದ್ದ ಕುಟುಂಬವು ಆಸ್ತಿಯ ವಿಚಾರದಿಂದ ಪ್ರಕ್ಷುಬ್ಧವಾಗಲಿದೆ. ಹೆಸರು ಗಳಿಸುವ ಮಹದಾಸೆ ನಿಮಗಿರಲಿದೆ. ಯಂತ್ರದಿಂದ ಅಥವಾ ವಾಹನದಿಂದ ನಷ್ಟವಾಗಬಹುದು. ಶತ್ರುಗಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದೇ ಸರಿಮಾಡಿಕೊಳ್ಳುವುದು ಉತ್ತಮ. ಮಕ್ಕಳಿಂದ‌ ಸಂತೋಷವಾರ್ತೆ ಬರಲಿದೆ. ಮೇಲಧಿಕಾರಿಗಳ ಪ್ರಶಂಸೆಯಿಂದ ಕೆಲಸದಲ್ಲಿ ಆಸಕ್ತಿ ಬರಲಿದೆ. ಹಳೆಯ ರೋಗವು ಇಂದು ಮತ್ತೆ ಕಾಣಿಸಿಕೊಳ್ಳಬಹುದು. ಸರಿಯಾದ ಚಿಕಿತ್ಸೆಯ ಅಗತ್ಯವಿದೆ. ಮನಸ್ಸನ್ನು ಏಕಾಗ್ರಗೊಳಿಸುವತ್ತ ಗಮನಹರಿಸಿ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು