Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ

2023 ಮಾರ್ಚ್ 17 ಶುಕ್ರವಾರದ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: aajtak.in
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 17, 2023 | 6:00 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 17 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ :ಶುಕ್ರ, ತಿಥಿ : ದಶಮೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ವರಿಯಾನ್, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ 11:11 – 12:41ರ ವರೆಗೆ, ಯಮಘಂಡ ಕಾಲ 03:42 – 05:12ರವರೆಗೆ, ಗುಳಿಕ ಕಾಲ ಬೆಳಗ್ಗೆ08:11 – 09:41ರ ವರೆಗೆ.

ಮೇಷ: ವಿದ್ಯಾರ್ಥಿಗಳಾಗಿದ್ದಾರೆ ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿಯನ್ನು ಕಾಣುವಿರಿ. ನಿಮ್ಮ ಪ್ರಯತ್ನಕ್ಕೆ ದೃಷ್ಟವು ಜೊತೆಗಿತಲಿದೆ. ನೀವಿಂದು ಅಲ್ಪ ಪ್ರಯತ್ನದಿಂದ ಕೆಲಸವನ್ನು ಸಾಧಿಸಿಕೊಳ್ಳಬಹುದು. ಇಂದು ಬಂದಿರುವ ಕೆಲಸಗಳನ್ನು ಒಂದೊಂದಾಗಿಯೇ ಮುಗಿಸುತ್ತ ಬನ್ನಿ. ಒತ್ತಡದ ಕೆಲಸಗಳನ್ನು ನಿರ್ವಹಿಸಬೇಕಾಗಬಹುದು. ಮೆಚ್ಚುಗೆಯು ನಿಮ್ಮ ಕೆಲಸಕ್ಕೆ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರೋತ್ಸಾಹ ಮತ್ತು ಪ್ರಶಂಸೆಯು ಸಿಗಲಿದೆ. ಉದ್ವಿಗ್ನತೆಗೆ ಒಳಗಾಗದೇ ಎಚ್ಚರಿಕೆಯಿಂದ ಕೆಲಸವನ್ನು ಮಾಡಿ ಮುಗಿಸಿ. ದಾಂಪತ್ಯದಲ್ಲಿ ಸುಖವಿರಲಿದೆ. ಗುರುರಾಘವೇಂದ್ರ ಸ್ಮರಣೆ ಮಾಡಿ. ಇಂದಿನ ಕಾರ್ಯವು ಶೀಘ್ರವಾಗಿ ಮುಕ್ತಾಯಗೊಳ್ಳುವುದು.

ವೃಷಭ: ಇಂದು ನಿಮಗೆ ಕೆಲವು ಗೊಂದಲಗಳು ಇರಲಿವೆ. ಮನಸ್ಸು ಬಹಳ ಚಂಚಲವಾಗಿರಲಿದೆ. ಅನಗತ್ಯ ಖರ್ಚುಗಳು ಆಗಬಹುದಾಗಿದೆ. ಸಿಕ್ಕ ಸೌಕರ್ಯಗಳಿಂದ ಕೆಲವು ತೊಂದರೆಗಳನ್ನು ಅನುಭವಿಸಬೇಕಾಗಬಹುದು. ನಿಮ್ಮ ರಹಸ್ಯವು ಇಂದು ಬಯಲಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ಕಲಹವಿದ್ದರೂ ದಿನಾಂತ್ಯದಲ್ಲಿ ಎಲ್ಲವೂ ಮರೆಯಾಗಿ ಸುಂದರವಾಗಿರಲಿದೆ. ಸಂಗಾತಿಗಳು ಪರಸ್ಪರ ಅನ್ಯೋನ್ಯವಾಗಿ ಇರಲಿದ್ದೀರಿ. ಹೊಂದಾಣಿಕೆಯ ಬದುಕು ನಿಮ್ಮದಾಗಲಿದೆ. ಸಹೋದರರ ಜೊತೆ ವಿವಾದಗಳು ಆಗಬಹುದು. ತಾಳ್ಮೆಯಿಂದ ವಾದವನ್ನು ತಣ್ಣಗಾಗಿಸಿಕೊಳ್ಳಿ. ದೂರದ ಪ್ರಯಾಣವು ಸುಖದಾಯಕವಲ್ಲ. ಮಹಾಮೃತ್ಯುಂಜ‌ಮಂತ್ರವನ್ನು ಪಠಿಸಿ.

ಮಿಥುನ: ನಿಮ್ಮ ಆಸ್ತಿಯನ್ನು ಮಾರಾಟ ಮಾಡುವ ಮನಸ್ಸು ಮಾಡುವಿರಿ. ಮಾನಸಿಕ ಒತ್ತಡದಿಂದ ಹೊರಬರಲು ಪ್ರಯತ್ನಿಸಿ. ನಿಮ್ಮ ಉದ್ಯೋಗದ ಕಡೆಗೆ ಹೆಚ್ಚು ಗಮನವಿರಲಿ, ಲಾಭವಾದೀತು. ನಿಮ್ಮ ವರದತೆಯಿಂದ ನಿಮ್ಮ ಸ್ನೇಹಿತರು ಬೇಸರಗೊಂಡಾರು. ಶರೀರಕ್ಕೆ ಅತಿಯಾಗಿ ಆಯಾಸವಾಗುವ ಕೆಲಸಗಳನ್ನು ಮಾಡಬೇಡಿ, ಅಶಕ್ತತೆಯು ಉಂಟಾಗಬಹುದು. ಕಛೇರಿಯಲ್ಲಿ ಕೆಲಸವು ನಿಧಾನವಾಗಿ ಸಾಗಬಹುದು. ಆಲಸ್ಯವನ್ನು ಬಿಟ್ಟು ಕೆಲಸ ಮಾಡಿ‌. ಖರ್ಚನ್ನು ಕಡಿಮೆ‌ ಮಾಡಲು ಹೊರಟರೂ ಅನಿವಾರ್ಯವಾಗಿ ಖರತಚಾಗುವುದು. ಹೊಸ ಪ್ರೇಮವು ಅಂಕುರಿಸು ಸಾಧ್ಯತೆ. ಪ್ರೇಮಿಸುವ ವ್ಯಕ್ತಿಗಳ ಬಗ್ಗೆ ಮಾಹಿತಿ ಇರಲಿ. ಪ್ರಸನ್ನಾಂಜನೇಯನನನ್ನು ಭಜಿಸಿ. ಧೈರ್ಯದಿಂದ ಇಂದಿನ ದಿನವನ್ನು ಎದುರಿಸಿ.

ಕಟಕ: ನೀವಿಂದು ಭಯದ ವಾತಾವರಣದಲ್ಲಿ ಇರುವಿರಿ. ನಿಮ್ಮ ಕೆಲಸವನ್ನು ಬದಿಗಿರಿಸಿ ನಿಮಗೆ ಸಿಕ್ಕ ಕೀರ್ತಿಯನ್ನು ಅನುಭವಿಸಿ. ಹಣದ ವಿಷಯದಲ್ಲಿ ಏರಿಳಿತಗಳು ಆಗಬಹುದು. ನಿಮ್ಮ ಮತ್ತು ಪ್ರೇಮಿಯ ನಡುವೆ ಇಗೋ ಉಂಟಾಗಿ ಘರ್ಷಣೆಯಾಗಲಿದೆ. ನಿಮ್ಮ ಹೆತ್ತವರ ಆಲೋಚನೆಗಳು ನಿಮ್ಮ ಪ್ರೀತಿಯ ಜೀವನದಲ್ಲಿ ಪ್ರಾಬಲ್ಯ ಸಾಧಿಸುತ್ತವೆ. ನಿಮಗೆ ಯಾವುದೇ ಸಮಸ್ಯೆಗಳಿದ್ದರೆ ಪ್ರಪಂಚದಿಂದ ಮರೆ ಮಾಡುವ ಅಗತ್ಯವಿಲ್ಲ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ನಿಮ್ಮ ಅಧ್ಯಯನದಲ್ಲಿ ನಿಮಗೆ ಯಾವುದೇ ಸಮಸ್ಯೆ ಇದ್ದರೆ ನಿಮ್ಮ ಶಿಕ್ಷಕರೊಂದಿಗೆ ಮಾತನಾಡಿ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ