AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ

2023 ಮಾರ್ಚ್ 18 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ Image Credit source: akhindi.in
ಗಂಗಾಧರ​ ಬ. ಸಾಬೋಜಿ
|

Updated on: Mar 18, 2023 | 5:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 18 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ :ಶನಿ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಪರಿಘ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ 09:40 – 11:11ರ ವರೆಗೆ, ಯಮಘಂಡ ಕಾಲ 02:11 – 03:42ರವರೆಗೆ, ಗುಳಿಕ ಕಾಲ ಬೆಳಗ್ಗೆ06:40 – 08:10ರ ವರೆಗೆ.

ಮೇಷ: ನಿಮ್ಮ ಕನಸುಗಳು ನನಸಾಗಿಸುವ ಸಮಯವಿಂದು. ಇತರರ ಸಲಹೆಗಳನ್ನು ಕೇಳಿ, ನಿಮಗೆ ಸರಿ ಅನಿಸಿದಂತೆ ಮಾಡುವಿರಿ. ನಿಮಗೆ ಉತ್ತಮ ಅವಕಾಶಗಳು ಸಿಗಲಿವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ವ್ಯವಹಾರದಲ್ಲಿ ಹೊರಗಿನವರು ಬಾರದಂತೆ ನೋಡಿಕೊಳ್ಳಿ. ಉದ್ಯೋಗಿಗಳೊಂದಿಗೆ ಸಂಬಂಧವನ್ನು ಹಾಳು ಮಾಡಿಕೊಳ್ಳಬೇಡಿ. ಮುಂಬರುವ ದಿನಗಳಲ್ಲಿ ಸಹಕಾರ ನಿಮಗೆ ಅತ್ಯಗತ್ಯವಾಗಬಹು. ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶ ಸಿಗದ ಕಾರಣ ಬೇಸರವುಂಟಾಗಬಹುದು. ಪ್ರೇಮ ವ್ಯವಹಾರದಿಂದ ದೂರವಿರುವುದು ಉತ್ತಮ. ಮನೆಯ ಸಮೀಪದ ಕುಮಾರಸ್ವಾಮಿ ದೇಗುಲಕ್ಕೆ ಹೋಗಿ ಧ್ಯಾನ ಮಾಡಿಬನ್ನಿ.

ವೃಷಭ: ಕಾರ್ಯವನ್ನು ಆರಂಭಿಸವ ಮೊದಲು ಸಂಪೂರ್ಣ ಯೋಜನೆಯನ್ನು ತಯಾರಿಸಿಕೊಳ್ಳುವುದು ಉತ್ತಮ. ಮನೆಗೆ ಸಂಬಂಧಿಸಿದಂತೆ ಸರಿಯಾದ ಖರ್ಚುಗಳ ಮಾಹಿತಿ ಇಲ್ಲದೇ ಅಧಿಕ ಖರ್ಚನ್ನು ಮಾಡಬೇಕಾಗಿಬರಬಹುದು. ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಂತೆ ನೋಡಿಕೊಳ್ಳಿ. ಇಂದು ಹೊರಾಂಗಣ ಚಟುವಟಿಕೆಗಳಲ್ಲಿ ಸಮಯ ವ್ಯರ್ಥವಾಗಲಿದೆ. ಓಡಾಟದಿಂದ ಸರಿಯಾದ ಫಲಿತಾಂಶವು ಸಿಗದು. ಮನಸ್ಸು ಉದ್ವೇಗಕ್ಕೆ ಒಳಗಾದೀತು. ಅಹಂಕಾರವು ಒಳ್ಳೆಯದಲ್ಲ. ಇಂದು ವೈವಾಹಿಕ ಸಂಬಂಧದಲ್ಲಿ ಸಮಸ್ಯೆಗಳನ್ನು ಉಂಟು ಮಾಡಬಹುದು. ದುರ್ಗಾಪರಮೇಶ್ವರಿಯನ್ನು ಆರಾಧಿಸಿ.

ಮಿಥುನ: ನೀವು ಸಂಪತ್ತನ್ನು ದಾನ‌ ಮಾಡಲಿದ್ದೀರಿ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮನಸ್ಸು ನಿಮ್ಮಲ್ಲಿರಲಿದೆ. ಅಪರಿಚಿತರು ಭೇಟಿಯಾಗಿ ನಿಮ್ಮ ಕಿವಿಚುಚ್ಚಲಿದ್ದೀರಿ. ನೀವು ಮಾಡಲಿರುವ ಕೆಲಸದ‌ ಮೇಲೆ ನಿಮ್ಮ ಗಮನವಿರಲಿ. ಭೂಮಿಗೆ ಸಂಬಂಧಿಸಿದಂತೆ ಕೆಲವು ಯೋಜನೆ ಜಾರಿಗೊಳಿಸುವ ಅನಿವಾರ್ಯತೆ ಬರಲಿದೆ. ಅನಗತ್ಯ ಖರ್ಚುಗಳನ್ನು ಮಾಡಬೇಕಾಗಿಬರಬಹುದು. ವ್ಯಾಪಾರ ಇಂದು ನಿಧಾನಗತಿಯಲ್ಲಿ ಸಾಗಲಿದೆ. ಪತಿ-ಪತ್ನಿಯರ ನಡುವೆ ಕಲಹ ದೂರವಾಗಿ ಹೊಂದಾಣಿಕೆ ಇರಲಿದೆ. ಮನೆಯ ಹಿರಿಯ ಆರೋಗ್ಯದಲ್ಲಿ ವ್ಯತ್ಯಾಸವು ಆಗಲಿದೆ. ಮೃತ್ಯುಂಜಯ ಜಪ ಮಾಡಿ.

ಕರ್ಕಾಟಕ: ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ಆಸಕ್ತಿಯನ್ನು ಇಟ್ಟುಕೊಂಡಿರುವಿರಿ. ಮನೆಯಿಂದ ಬರುವ ದೂರವಾಣಿ ಕರೆಗಳನ್ನು ನಿರ್ಲಕ್ಷಿಸಲಿದ್ದೀರಿ. ಇಂದು ನೀವು ಪ್ರಮುಖ ನಿರ್ಧಾರಗಳನ್ನು ಸ್ವೀಕರಿಸುವ ಸಾಧ್ಯತೆ ಇದೆ. ಭವಿಷ್ಯದ ನಿರ್ಧಾರಗಳನ್ನು ಬದಲಿಸಿಕೊಳ್ಳಲಿದ್ದೀರಿ. ಉದ್ಯೋಗದಲ್ಲಿ ಇರುವವರ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸುವಿರಿ. ನಿಮ್ಮ ಸಂಗಾತಿಯು ನಿಮ್ಮ ಕೆಲಸಗಳಿಗೆ ಸಲಹೆಯನ್ನು ನೀಡಲಿದ್ದಾರೆ. ಇದರಿಂದ ನಿಮಗೆ ಪ್ರಯೋಜನವಾಗಲಿದೆ. ಕುಲಗುರವಿನ ಆಶೀರ್ವಾದವನ್ನು ಪಡೆಯಿರಿ. ಆಪತ್ತುಗಳು ದೂರವಾಗಲಿವೆ.

ಲೋಹಿತಶರ್ಮಾ ಇಡುವಾಣಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು