Daily Horoscope: ಹಣಕಾಸಿನ ವ್ಯವಹಾರದ ಬಗ್ಗೆ ಗಂಭೀರ ನಿರ್ಧಾರ ಅಗತ್ಯ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಹಣಕಾಸಿನ ವ್ಯವಹಾರದ ಬಗ್ಗೆ ಗಂಭೀರ ನಿರ್ಧಾರ ಅಗತ್ಯ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: May 19, 2023 | 5:30 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಭರಣೀ, ಯೋಗ: ಸೌಭಾಗ್ಯ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:29ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:41 ರಿಂದ 05:17ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:17ರ ವರೆಗೆ.

ಮೇಷ: ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಉತ್ಸಾಹವು ನಿಮ್ಮಲ್ಲಿ ಇರುವುದು. ಅಪ್ರಯೋಜಕ ಕೆಲಸಗಳನ್ನು ಮಾಡಲು ನೀವು ಹಿಂದೇಟು ಹಾಕಬಹುದು. ಸ್ನೇಹಿತರ ಸಜವಾಸದಿಂದ‌ನಿಮಗೆ ಅಪವಾದ ಬರಬಹುದು. ಪ್ರಯಾಣ ಮಾಡಬೇಕಾಗಿದ್ದರೂ ಭಯವು ನಿಮ್ಮನ್ನು ಕಾಡಬಹುದು. ನಿಮ್ಮ ಸಂಗಾತಿಯನ್ನು ಬೆಂಬಲಿಸಿ, ದುರ್ಬಲಗೊಂಡ ಬಂಧವನ್ನು ಮತ್ತೆ ಬಲಗೊಳಿಸಿಕೊಳ್ಳಿ. ಇಂದು ಶುಭದ ನಿರೀಕ್ಷೆಯಲ್ಲಿ ಇರುವಿರಿ. ಕೊಟ್ಟ ಸಾಲವು ಮರಳಿ ಬರುವ ಸಾಧ್ಯತೆ ಇದೆ. ಇದು ನಿಮ್ಮನ್ನು ಸಂತೋಷವಾಗಿ ಇಡಬಲ್ಲದು. ಕೆಲಸದ ಸ್ಥಳವನ್ನು ಶಿಸ್ತಿನಿಂದ ಇಟ್ಟುಕೊಳ್ಳುವಿರಿ.

ವೃಷಭ: ಹೊಸತನವನ್ನು ತಂದುಕೊಳ್ಳುವಲ್ಲಿ ನೀವು ಸದಾ ಪ್ರಯತ್ನಶೀಲರು. ಆದರೆ ಆಲಸ್ಯವನ್ನು ಬಿಡಬೇಕಾದೀತು. ಪ್ರೀತಿಗೋಸ್ಕರ ಹಣವನ್ನು ಖರ್ಚುಮಾಡುವಿರಿ. ಒಲ್ಲದ ಮನಸ್ಸಿಂದ ಕೆಲಸವನ್ನು ಮಾಡುವಿರಿ. ಇನ್ನೊಬ್ಬರು ಕೇಳಿದ ಸಹಾಯವನ್ನು ಪ್ರೀತಿಯಿಂದ ಮಾಡಿಕೊಡುವಿರಿ‌. ಅಪರಿಪೂರ್ಣ ಕೆಲಸದ ಯಾದಿಯನ್ನು ತಯಾರಿಸಿ ಮುಂದುವರಿಯಿರಿ. ಅಧ್ಯಾತ್ಮದಲ್ಲಿ ಆಸಕ್ತಿ ಇದ್ದರೂ ಸಮಯದ ಅಭಾವದಿಂದ ಅದು ಅಸಾಧ್ಯವಾದೀತು. ಗುರುಜನರ ಭೇಟಿಯಿಂದ ಮನಸ್ಸು ನೆಮ್ಮದಿಯಿಂದ ಇರಬಹುದು.

ಮಿಥುನ: ಉದ್ಯಮಿಗಳಿಗೆ ಕಳೆದ ಆರಂಭದ ದಿನಗಳನ್ನು ನೆನೆದು ಸಂತೋಷವಾಗಲಿದೆ. ಬಹಳಷ್ಟು ಖರ್ಚಿದ್ದು ಹಣದ ಹೊಂದಾಣಿಕೆ ಕಷ್ಟವಾದೀತು. ನಿಮ್ಮ ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನೀವು ಬಯಸುವಿರಿ. ನಿಮ್ಮ ಕೋಪವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಹಣಕಾಸಿನ ವ್ಯವಹಾರದ ಬಗ್ಗೆ ಗಂಭೀರ ನಿರ್ಧಾರ ತೆಗೆದುಕೊಳ್ಳಿ. ಕಛೇರಿಯ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವಿರಿ. ಪ್ರೀತಿಯನ್ನು ಇಷ್ಟಪಡುವುದಿಲ್ಲ. ಸ್ವಂತ್ರವಾಗಿರಲು ಇಚ್ಛಿಸುವಿರಿ. ಕುಟುಂಬದ ಜೊತೆ ಇದ್ದರೂ ಅಲ್ಲಿಂದ ದೂರವಿರಲು ಪ್ರಯತ್ನಿಸುವಿರಿ.

ಕಟಕ: ಆರಂಭದ ಉತ್ಸಾಹವು ಅಂತ್ಯದ ವರೆಗೆ ಇರಲಾರದು. ಆಹಾರವು ನಿಮ್ಮನ್ನು ಉತ್ಸಾಹದಿಂದ ಇಡುವುದು. ಇತರರಿಗೆ ಧನಸಹಾಯ ಮಾಡಿ ಕಳೆದುಕೊಳ್ಳುವಿರಿ. ಒಂದೇ ರೀತಿಯ ದಿನಚರಿಯಿಂದ ಬೇಸರಗೊಂಡು ಪ್ರಯಾಣದ ಹುರುಪು ನಿಮ್ಮಲ್ಲಿ ಕಾಣಲಿದೆ. ನಿಮ್ಮ ಮಾತುಗಳು ಇತರರಿಗೆ ಸ್ಫೂರ್ತಿಯಾದೀತು. ನಿಮ್ಮ‌ ನಿರೀಕ್ಷೆಯಲ್ಲಿ ಇದ್ದವರಿಗೆ ಬೇಸರ ಮಾಡಿಸಬೇಡಿ. ಮಕ್ಕಳಿಗೆ ಔದಾರ್ಯ ತೋರಿ, ಅವರ ದೃಷ್ಟಿಯಲ್ಲಿ ದೊಡ್ಡವರಾಗುವಿರಿ. ಶಾರೀರಿಕ ಆಯಾಸವನ್ನು ವಿಶ್ರಾಂತಿಯಿಂದ ಪರಿಹರಿಸಿಕೊಳ್ಳಿ. ಒತ್ತಡಗಳು ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದೆ.

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ