AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ನಿಮ್ಮ ಸೌಂದರ್ಯದ ಬಗ್ಗೆ ನಿಮಗೇ ಅಸೂಯೆ ಬರಬಹುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ನಿಮ್ಮ ಸೌಂದರ್ಯದ ಬಗ್ಗೆ ನಿಮಗೇ ಅಸೂಯೆ ಬರಬಹುದು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 20, 2023 | 12:10 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮಿಥುನ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಸುಕರ್ಮ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:48 ರಿಂದ 05:25ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:20 ರಿಂದ 10:57ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:34 ರಿಂದ 02:11ರ ವರೆಗೆ.

ಮೇಷ: ನಿಮ್ಮವರನ್ನು ನೀವು ಬಿಟ್ಟಕೊಡುವಿರಿ. ಅವರು ಸ್ವತಂತ್ರವಾದಷ್ಟೂ ನೀವು ನೆಮ್ಮದಿಯ ಪಡೆಯುವಿರಿ. ವ್ಯಾಪರವು ಸ್ವಲ್ಪಮಟ್ಟಿಗೆ ಸುಧಾರಿಸುವುದು. ಭೂಮಿಯ ವ್ಯವಹಾರವೂ ನಿಮಗೆ ನಷ್ಟವನ್ನು ಕೊಡಬಹುದು. ಜಾಗರೂಕತೆಯಿಂದ ವ್ಯವಹರಿಸಿ. ಯಾರನ್ನೂ ಅತಿಯಾಗಿ ಹಚ್ಚಿಕೊಳ್ಳುವುದು ಒಳ್ಳೆಯದಲ್ಲ. ನಿಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ ಅನಂತರ ಇನ್ನೊಬ್ಬರ ಕೆಲಸದತ್ತ ಗಮನಕೊಡಿ. ಮಾಧ್ಯಮ ಕ್ಷೇತ್ರವು ನಿನಗೆ ಸದ್ಯ ಲಾಭದಾಯಕ ಆಗಲಿದೆ‌. ಯಶಸ್ಸನ್ನೂ ಅದು ತಂದುಕೊಡಬಹುದು. ದಾಂಪತ್ಯವನ್ನು ಸುಖವಾಗಿಡಲು ಉಡುಗೊರೆಯನ್ನು ಕೊಡಬೇಕಾಗಬಹದು.

ವೃಷಭ: ನಿಮಗೆ ಎದುರಾದ ಸಂಕಟವನ್ನು ನೀವು ಜೀರ್ಣಿಸಿಕೊಳ್ಳಲು ನೀವು ಶಕ್ತರಾಗಿದ್ದೀರಿ. ಅನೇಕ ದಿನಗಳಿಂದ ಮಾಡುತ್ತಿದ್ದ ಕೆಲಸವನ್ನು ಇಂದು ಬಹಳ ವೇಗವಾಗಿ ಮುಗಿಸಿ ನಿರಾಳವಾಗುವಿರಿ. ಮಕ್ಕಳು ನಿಮ್ಮನ್ನು ಬಿಡಲು ಬಹಳ ಕಷ್ಟಪಡುವರು. ಸಂಗಾತಿಯನ್ನು ನೀವು ಬಹಳ ದಿನಗಳ ಅನಂತರ ಪ್ರಶ್ನಿಸುವಿರಿ. ನಿಮ್ಮ ಬಗ್ಗೆ ಭಯವೂ ಹುಟ್ಟಬಹುದು. ನಿರ್ಭಾವುಕರಾಗಿ ವರ್ತಿಸುವುದು ನಿಮ್ಮವರಿಗೆ ಇಷ್ಟವಾಗದೇ ಹೋಗಬಹುದು. ನೀವು ಕೆಲಸವನ್ನು ಒಲ್ಲದ ಮನಸ್ಸಿನಿಂದ ಮಾಡುವಿರಿ. ಬೈಸಿಕೊಳ್ಳಲೂ ಬಹುದು.

ಮಿಥುನ: ನೆರೆಯವರ ಎದುರುಹಾಕಿಕೊಳ್ಳಬೇಕಾದೀತು. ವೈವಾಹಿಕ ಜೀವನವು ನಿಮಗೆ ಸಾಕಾಗಬಹುದು. ನಿಮಗೆ ಸಿಗುವುದಿಲ್ಲ ಎಂದುಕೊಂಡ ಸ್ಥಾನವು ನಿಮಗೆ ಸಿಗಬಹುದು. ಅದೃಷ್ಟ ನಿಮ್ಮ‌ ಕಡೆಗಿದ್ದು ಅದನ್ನು ಸರಿಯಾಗಿ ಬಳಸಿಕೊಳ್ಳಿ. ದೇವರ ಜೊತೆ ಸಮಯವನ್ನು ಕಳೆಯುವುದನ್ನು ಮರೆಯಬೇಡಿ. ನಿಮ್ಮ ಬಗ್ಗೆ ಸುಳ್ಳು ಪ್ರಚಾರವನ್ನೂ ಮಾಡಬಹುದು. ಸರಿಯಾದ ಉತ್ತರವನ್ನು ನೀವು ಕೊಡಬೇಕಾದೀತು. ದಿನದ ಆರಂಭದಲ್ಲಿ ಇದ್ದ ಒತ್ತಡವು ಸಂಜೆಯ ಸಮಯಕ್ಕೆ ಮುಕ್ತಾಯವಾಗಬಹುದು. ನಿಮ್ಮ ಸೌಂದರ್ಯದ ಬಗ್ಗೆ ನಿಮಗೇ ಅಸೂಯೆ ಬರಬಹುದು.

ಕರ್ಕ: ಇಂದಿನ‌ ನಿಮ್ಮ ಕೆಲಸವು ನೆಮ್ಮದಿಯನ್ನು ತಂದುಕೊಡುವುದು. ನಿಮ್ಮ ಉದ್ಯಮ ಕ್ಷೇತ್ರವನ್ನು ವಿಸ್ತರಿಸಲು ಇಷ್ಟಪಡುವಿರಿ. ಸಂಗಾತಿಗೆ ಬೇಕಾದ ವಸ್ತುಗಳನ್ನು ತಂದುಕೊಡುವಿರಿ. ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳಿ. ಕಳೆಯುವ ಸಾಧ್ಯತೆ ಇದೆ. ವಿದೇಶದ ವ್ಯವಹಾರಕ್ಕೆ ಇಡ್ಡಕೊಂಡ ವ್ಯಕ್ತಿಯಿಂದ ನೀವು ಮೋಸ ಹೋಗಬಹುದು. ನಿಮಗೆ ಸಿಗುವ ಗೌರವವನ್ನು ಯಾರಾದರೂ ತಪ್ಪಿಕೊಳ್ಳಬಹುದು. ಉದ್ಯೋಗಕ್ಕೆ ನೀವು ಕೊಟ್ಟ ಸಮಯವು ಸಫಲವಾಗಲಿದೆ. ನಿಮ್ಮ ಉತ್ಸಾಹವು ಇನ್ನೊಬ್ಬರ ಹೊಗಳಿಕೆಯಿಂದ ಬರಲಿದೆ. ದೇವಾಲಯದಲ್ಲಿ ಹೆಚ್ಚಿನ ಸಮಯವನ್ನು ನೀವು ಕಳೆಯುವಿರಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ