Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರು ತಮ್ಮ ಸಂಗಾತಿಯನ್ನು ಸಂತೋಷಗೊಳಿಸಲು ಬಹಳ ಕಷ್ಟಪಡಬೇಕಾದೀತು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರು ತಮ್ಮ ಸಂಗಾತಿಯನ್ನು ಸಂತೋಷಗೊಳಿಸಲು ಬಹಳ ಕಷ್ಟಪಡಬೇಕಾದೀತು
ಇಂದಿನ ರಾಶಿಭವಿಷ್ಯ
Follow us
Rakesh Nayak Manchi
|

Updated on: May 20, 2023 | 5:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 20 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶೋಭನ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ 10:53ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:05 ರಿಂದ 05:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05 ರಿಂದ 07:41ರ ವರೆಗೆ.

ಮೇಷ: ನಿಮ್ಮ ದುರಭ್ಯಾಸಗಳಿಂದ ನಿಮ್ಮವರಿಗೆ ಅಪಮಾವಾದೀತು. ಆಯಾಸವಾಗಿದ್ದರೆ ವಿಶ್ರಾಂತಿಯನ್ನು ಸ್ವಲ್ಪ ಪಡೆಯಿರಿ. ಪ್ರಾಪಂಚಿಕ ವಿಷಯದಲ್ಲಿ ಆಸಕ್ತಿ ಕಡಿಮೆ ಇರಲಿದೆ. ಯೋಗ್ಯ ಜನರನ್ನು ಭೇಟಿಯಾಗಿ ನಿಮ್ಮ ಬಗ್ಗೆ ತಿಳಿಸಿ. ಒತ್ತಾಯಕ್ಕೆ ಮಣಿದು ಏನನ್ನಾದರೂ ಮಾಡಲು ಹೋಗಬೇಕಾದೀತು. ಸಂದರ್ಭೋಚಿತ ಮಾತುಗಳಿಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿರದು. ಮಕ್ಕಳನ್ನು ಬಹಳ ಪ್ರೀತಿಸುವಿರಿ. ಬಂದಿದ್ದನ್ನು ಸ್ವೀಕರಿಸುವ ಮನಃಸ್ಥಿತಿ ಇಂದು ಇರಲಿದೆ.

ವೃಷಭ: ಆಹಾರವನ್ನು ಕಡಿಮೆ ಮಾಡಲು ವೈದ್ಯರ ಸಲಹೆಯನ್ನು ಪಡೆಯುವಿರಿ. ಕುಟುಂಬದ ಒತ್ತಡವನ್ನು ಕಛೇರಿಗೆ ಒಯ್ಯವುದು ಬೇಡ. ಬಹು ಮುಖ್ಯ ಕೆಲಸಕ್ಕಾಗಿ ಕಾದು ಸಮಯವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಇಂದು ಮಾಡಬೇಕಾದುದನ್ನು ಮಾಡಿ ಮುಗಿಸಿ.‌ ಇನ್ನೊಂದು ದಿನಕ್ಕೆಂದು ಕಾಯುವುದು ಬೇಡ. ಸಮಯವನ್ನು ಪಡೆದು ಒಂದು ಸರಿಯಾದ ನಿರ್ಧಾರವನ್ನು ಮಾಡಿಕೊಳ್ಳುವುದು ಉತ್ತಮ. ಅಸಡ್ಡೆಯಿಂದ ಸಿಗುವ ಅವಕಾಶಗಳನ್ನು ಕಳೆದುಕೊಳ್ಳಲಿದ್ದೀರಿ. ಹೊಸ ವಿಷಯವನ್ನು ತಿಳಿದುಕೊಳ್ಳಲು ನಿರ್ಧಾರವನ್ನು ಮಾಡುವಿರಿ. ಕುಟುಂಬದ ಪ್ರೀತಿಯನ್ನು ಇಂದು ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಿಥುನ: ನಿಮ್ಮ ಆಹಾರದ ಕ್ರಮವನ್ನು ಬದಲಿಸಿಕೊಳ್ಳಲು ವೈದ್ಯರ ಸಲಹೆಯನ್ನು ಪಡೆಯಬೇಕಾಗಬಹುದು. ಹಣಕಾಸಿನ ತೊಂದರೆ ಬಂದರೂ ಅದನ್ನು ನಿಭಾಯಿಸುವ ಚಾಣಕ್ಷತನ ನಿಮಗೆ ಗೊತ್ತಿದೆ. ತಂದೆಯ ಮಾತನ್ನು ಶ್ರದ್ಧೆಯಿಂದ ಪಾಲಿಸುವಿರಿ. ನಿರುದ್ಯೋಗ ಎಂಬ ಕೊರಗು ನಿಮ್ಮನ್ನು ಕಾಡಬಹುದು. ಕಫಕ್ಕೆ ಸಂಬಂಧಿಸಿದ ಖಾಯಿಲೆಯು ಆರಂಭವಾಗಬಹುದು. ಸಿಕ್ಕ ಉದ್ಯೋಗವನ್ನು ಬಹಳ ಪ್ರೀತಿಸುವಿರಿ. ಸಂಸಾರದ ಬಿಕ್ಕಟ್ಟನ್ನು ಬಿಡಿಸುವ ಪ್ರಯತ್ನ ಮಾಡುವರಿದ್ದೀರಿ. ಸಾಮರಸ್ಯವನ್ನು ಕಾಪಾಡಿಕೊಳ್ಳಲು ನೀವು ಬಯಸಬಹುದು.

ಕಟಕ: ಆಪ್ತರ ಆಲೋಚನೆಗಳನ್ನು ಸ್ವೀಕರಿಸುವಿರಿ. ನಿಮ್ಮ ವ್ಯಕ್ತಿತ್ವವನ್ನು ಬದಲಿಸಿಕೊಳ್ಳಲು ಬಯಸುವಿರಿ. ಸಂಗಾತಿಯ ಜೊತೆ ಅಪರೂಪಕ್ಕೆ ದೂರಪ್ರಯಾಣವನ್ನು ಮಾಡಲು ಇಚ್ಛಿಸುವಿರಿ. ವೃತ್ತಿಯ ಸ್ಥಳದಲ್ಲಿ ಬೇರೆ ಜವಾಬ್ದಾರಿಗಳು ಬರುವಂತಿದ್ದರೂ ಅದನ್ನು ನಿರಾಕರಿಸುವಿರಿ. ಕಛೇರಿಯಲ್ಲಿ ನಿಮ್ಮ ಕೆಲಸಗಳನ್ನು ನೋದಿ ಆಡಿಕೊಳ್ಳಬಹುದು.‌ ಇನ್ನೊಬ್ಬರನ್ನು ಅನುಕರಿಸಲಿದ್ದೀರಿ. ಸಂಗಾತಿಯನ್ನು ಸಂತೋಷಗೊಳಿಸಲು ಬಹಳ ಕಷ್ಟಪಡಬೇಕಾದೀತು. ಅತಿಯಾದ ಉತ್ಸಾಹದಲ್ಲಿ ಏನನ್ನಾದರೂ ಹೇಳುವ ಸಾಧ್ಯತೆ ಇದೆ.

-ಲೋಹಿತಶರ್ಮಾ ಇಡುವಾಣಿ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ