Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ

ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ Image Credit source: jagran.com
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 23, 2023 | 5:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 23 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ದ್ವಿತೀಯ, ನಿತ್ಯನಕ್ಷತ್ರ : ರೇವತೀ, ಯೋಗ : ಐಂದ್ರ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 36 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02 :10 ರಿಂದ 03:41ರವರೆಗೆ, ಯಮಘಂಡ ಕಾಲ 06:36 ರಿಂದ 08:07ರ ವರೆಗೆ, ಗುಳಿಕ ಕಾಲ 09:38 ರಿಂದ ಮಧ್ಯಾಹ್ನ 11:09ರ ವರೆಗೆ.

ಮೇಷ: ಇಂದು ಹೆಚ್ಚು ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ತಂದೆ-ತಾಯಿಯರ ಪ್ರೀತಿ ಸಿಗಲಿದೆ. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ಗೊಂದಲಗಳು ಬರಬಹುದು. ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸುವಿರಿ. ಪರಾಕ್ರಮದಿಂದ ಭೂಮಿಯ ಲಾಭವು ಆಗಲಿದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುವಿರಿ. ಬುದ್ಧಿವಂತಿಕೆಯನ್ನು ಬಳಸಿಕೊಂಡು ಲಾಭ ಪಡೆಯುವಿರಿ. ಇಂದು ಬೇಗ ಮುಗಿದಂತೆ ಭಾಸವಾಗುವುದು.‌ ದಿನದ ಕೊನೆಯಲ್ಲಿ ಬಹಳ ಕೆಲಸವಿರುವಂತೆ ತೋರುವುದು. ಗುರುದರ್ಶನದಿಂದ ನಿಮಗೆ ಲಾಭವಿದೆ.

ವೃಷಭ: ಅನಾರೋಗ್ಯ ಅಥವಾ ಅನಾಹುತವಾಗುವ ಸಾಧ್ಯತೆ ಇದೆ. ಏಕಾಗ್ರತೆ ಕೊರತೆ ಅತಿಯಾಗಿ ಕಾಡಲಿದೆ. ನೀವು ಹೇಳದೇ ಇರುವ ರಹಸ್ಯವನ್ನು ಇಂದು ನಿಮ್ಮಿಂದ ತಿಳಿಯಲಿದೆ. ಕೊಟ್ಟ ಹಣವು ಮತ್ತೆ ಬರುವ ನಿರೀಕ್ಷೆಯಲ್ಲಿ ಇರುವಿರಿ. ವಿದ್ಯಾಭ್ಯಾಸವು ಕಷ್ಟದಿಂದ ಸಾಗಲಿದೆ. ಉನ್ನತವಾದ ಧ್ಯೇಯವೇ ನಿಮ್ಮ ಯಶಸ್ಸಿನ ಮೊದಲು ಮೆಟ್ಟಿಲು ಎನ್ನುವುದನ್ನು ತಿಳಿದಿದ್ದೀರಿ. ಕಲಹಕ್ಕೆ ದಾರಿಯನ್ನು ಮಾಡಿಕೊಡಬೇಡಿ. ಮನೆ ಬಳಕೆಯ ವಸ್ತುಗಳನ್ನು ಖರೀದಿಸಲಿದ್ದೀರಿ. ನಿಮ್ಮವರಿಗೆ ಸಮಯವನ್ನು ಕೊಡಲು ಮರೆತಿದ್ದು ಇಂದು ತಿಳಿಯುತ್ತದೆ. ನಾಗಾರಾಧನೆ ನಿಮ್ಮ‌ ಸಮಸ್ಯೆ ಪರಿಹಾರವಾಗಲಿದೆ.

ಮಿಥುನ: ವಿವಾಹಯೋಗವು ಕೂಡಿಬರಲಿದೆ. ಸ್ಥಾನಬದಲಾವಣೆ ಮಾಡುವ ಸಾಧ್ಯತೆ ಇದೆ. ಸಾವಧಾನತೆಯಿಂದ ಕೆಲಸವು ಸಾಧ್ಯವಾಗುವುದು. ಸಂಗಾತಿಯಿಂದ ಸಂಪತ್ತನ್ನು ಪಡೆದು ಖರೀದಿಗಳನ್ನು ಮಾಡಲಿದ್ದೀರಿ. ಸ್ನೇಹಿತರು ನಿಮ್ಮ ಸಹಾಯಕ್ಕೆ ಬರಲಿದ್ದಾರೆ. ನಿಮ್ಮ ಸಹಾಯಕರು ನಿಮ್ಮ ಬಗ್ಗೆ ಸಲ್ಲದ ಪ್ರಚಾರವನ್ನು ಮಾಡುವರು. ಧಾರ್ಮಿಕದತ್ತ ನಿಮ್ಮ ಮನಸ್ಸು ಒಲಿಯುವ ಸಾಧ್ಯತೆ ಇದ್ದು. ಹೆಚ್ಚು ಕಾಲ ದೇವತೋಪಾಸನೆಯಲ್ಲಿ ಕಾಲವನ್ನು ಕಳೆಯುವಿರಿ. ಆರೋಗ್ಯದ ಮೇಲೆ ಗಮನವಿರಲಿ. ಗಣಪತಿಗೆ ಪ್ರಿಯವಾದ ಮೋದಕವನ್ನು ಅರ್ಪಿಸಿ.

ಕಟಕ: ಇನ್ನೊಬ್ಬರನ್ನು ಮೊಸಗೊಳಿಸಲು ಹೋಗಿ ನೀವೇ ಸಮಸ್ಯೆಯಲ್ಲಿ ಸಿಕ್ಕಿಬೀಳುವಿರಿ. ನಿಮಗಾಗದವರು ರೂಪಿಸಿದ ಜಾಲಕ್ಕೆ ಬೀಳಲಿರುವಿರಿ. ಸ್ನೇಹಿತರ ಸಹಕಾರದಿಂದ ನೀವು ಸ್ವಲ್ಪ ಸಮಯದಲ್ಲಿಯೇ ಪಾರಾಗುವಿರಿ. ನೀವಿಂದು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿದರೆ ಉತ್ತಮವಾಗಲಿದೆ. ಇನ್ನೊಬ್ಬರ ಕೆಲಸದಲ್ಲಿ ಮೂಗು ತೂರಿಸಲು ಹೋಗಬೇಡಿ. ಆರೋಗ್ಯವನ್ನು ಹೆಚ್ಚಿಸುವ, ಚೆನ್ನಾಗಿಡುವ ಆಹಾರ, ಪಾನೀಯಗಳನ್ನು ಸೇವಿಸಿ. ನಿಧಾನಗತಿಯಲ್ಲಿ ಸಾಗುವ ಕೆಲಸದಿಂದ ಬೇಸರಗೊಳ್ಳುವಿರಿ. ಕುಲಗುರುವಿನ ಅನುಗ್ರಹವನ್ನು ಪಡೆಯಿರಿ.

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?