Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ

2023 ಮಾರ್ಚ್ 24 ಶುಕ್ರವಾರದ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
Image Credit source: hindirush.com

Updated on: Mar 24, 2023 | 5:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 24 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ವೈಧೃತಿ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ 11 :08 ರಿಂದ 12:39ರವರೆಗೆ, ಯಮಘಂಡ ಕಾಲ 03:41 ರಿಂದ 05:12ರ ವರೆಗೆ, ಗುಳಿಕ ಕಾಲ 08:06 ರಿಂದ 09: 37 ರ ವರೆಗೆ.
ಮೇಷ: ಇಂದು ನೀವು ಪ್ರಮುಖವ್ಯಕ್ತಿಗಳೊಂದಿಗೆ ಸಂಬಂಧಗಳು ಬಲಗೊಳ್ಳುವುದು. ಅದೇ ಸಮಯದಲ್ಲಿ, ಯೋಗವು ಇದ್ದಕ್ಕಿದ್ದಂತೆ ಸಂಪತ್ತಿನ ಮೂಲವಾಗುತ್ತಿದೆ. ಸೃಜನಶೀಲತೆ ಅರಳಲಿದೆ. ನಿಮ್ಮ ಪ್ರತಿಭೆಯಿಂದ ನೀವು ಅದ್ಭುತಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಿರಿಯರ ಅನುಭವದಿಂದ ಪ್ರಯೋಜನ ಪಡೆಯುವಿರಿ. ಅನಗತ್ಯ ವಾದಗಳನ್ನು ಮಾಡಿ, ಕುಟುಂಬದ ಸದಸ್ಯರನ್ನು ನೋಯಿಸುವಿರಿ. ಸೋಮಾರಿತನದಿಂದ ಸಮಯವು ವ್ಯರ್ಥವಾಗಲಿದೆ. ಚಂಚಲವಾದ ಮನಸ್ಸನ್ನು ನಿಗ್ರಹಿಸಲು ಪ್ರಯತ್ನಿಸಿ. ಅರ್ಧನಾರೀಶ್ವರಸ್ತೋತ್ರವನ್ನು ಮಾಡಿ.

ವೃಷಭ: ಇಂದು ನೀವು ನಿಮ್ಮ ಆಸೆಗಳನ್ನು ಈಡೇರಿಸಲು ದಾರಿ ಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಹೊಸ ಸಾಧ್ಯತೆಗಳು ಕಾಣಿಸಿಕೊಳ್ಳುಲಿದೆ. ಮನೆಯಲ್ಲಿ ಸಂತೋಷದ ವಾತಾವರಣವು ಇರುತ್ತದೆ. ಸಹೋದರನ ನಡವಳಿಕೆಯಿಂದ ಮನಸ್ಸಿಗೆ ಬೇಸರವಾಗಬಹುದು. ಆರ್ಥಿಕ ಯೋಗವಿದೆ. ತರಾತುರಿಯಲ್ಲಿ ಮಾಡಿದ ಕೆಲಸವು ಹಾನಿಯನ್ನುಂಟು ಮಾಡುತ್ತದೆ. ಮಗುವಿನ ನಡವಳಿಕೆಯು ನೋವನ್ನು ಉಂಟುಮಾಡುತ್ತದೆ. ಮಕ್ಕಳಿಗೆ ವಿದ್ಯಾಭ್ಯಾಸವನ್ನು ಮಾಡಲು ಆಸಕ್ತಿ ಉಂಟಾಗಬಹುದು.

ಮಿಥುನ: ಇಂದು ಅಧಿಕ ಖರ್ಚುಗಳು ಉಂಟಾಗಲಿದೆ. ಆದರೆ ಒಳ್ಳೆಯ ಕಾರ್ಯಕ್ಕೆ ಆಗುತ್ತಿದೆ ಎಂಬ ಸಂತೋಷವಿರಲಿದೆ. ಚಿಂತನಾ ಹೆಚ್ಚಾಗುತ್ತದೆ. ಹೊಸ ಭರವಸೆಗಳು ಸಂತೋಷವನ್ನು ತರುತ್ತವೆ. ಭೂಮಿಯ ವ್ಯವಹಾರವನ್ನು ಮಾಡಲಿದ್ದೀರಿ. ಸೇವೆ ಮತ್ತು ದಾನದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಹೊಸ ಸಂಪರ್ಕಗಳು ಪ್ರಯೋಜನಕಾರಿಯಾಗಲಿವೆ. ಸಂಗಾತಿಯ ಬೆಂಬಲ ಇರುತ್ತದೆ. ಆಲೋಚನೆಗಳು ನಿಧಾನಗತಿಯಲ್ಲಿ ಇರಲಿವೆ. ಉತ್ತಮ ಆರೋಗ್ಯ ಇರುತ್ತದೆ.

ಕಟಕ: ಭೋಗದ ವಸ್ತುಗಳ ಮೂಲಕ ಖುಷಿ ಪಡೆಯುವಿರಿ. ನಿಮ್ಮ ಇಂದಿನ ಲೆಕ್ಕಾಚಾರ ಸರಿಯಾಗಲಿದೆ. ಸಹನೆಯ ನಿಮ್ಮ ಗುಣದಿಂದ ಸಾಕಷ್ಟು ಅನುಕೂಲವನ್ನು‌ಮಾಡಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಹೊಸತನ್ನು ಕಲಿಯಬೇಕು ಎನದನುವ ತುಡಿತ ಇರಲಿದೆ. ಬಹುದಿನಗಳಿಂದ ಯೋಚಿಸುತ್ತಿದ್ದ ಮಹತ್ವದ ಕಾರ್ಯವೊಂದಕ್ಕೆ ಚಾಲನೆ ನೀಡುವಿರಿ. ಹಿರಿಯರ ಸಲಹೆಯಿಂದ ಪ್ರಯೋಜನವಾಗಲಿದೆ. ಅತಿಯಾದ ಭವಿಷ್ಯದ ಚಿಂತನೆಯಿಂದ ಇಂದು ಉಪಯೋಗವಾಗಲಾರದು.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us