Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯ
Follow us
Rakesh Nayak Manchi
|

Updated on: Mar 29, 2023 | 5:20 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 29 ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುದೆ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಶೋಭನ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 12:37 ರಿಂದ 02:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:03 ರಿಂದ 09:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:06 ರಿಂದ ಮಧ್ಯಾಹ್ನ 12:37ರ ವರೆಗೆ.

ಮೇಷ: ಮನೆಯವರಿಗೆ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ನೀವೇ ಉದ್ಯೋಗದ ಜೊತೆ ಉನ್ನತ ವಿದ್ಯಾಭ್ಯಾಸವನ್ನೂ ಮಾಡುವಿರಿ. ತಪ್ಪುಗಳು ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಶ್ಚಿಂತೆಯಿಂದ ಮುನ್ನಡೆಯಿರಿ. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ಕಲಹವೇರ್ಪಡಬಹುದು. ಆಪ್ತರ ಜೊತೆ ಹಣಕಾಸಿನ ವಿಚಾರವಾಗಿ ಸಮಾಲೋಚನೆ. ಅವರಿಂದ ಸಹಕಾರವೂ ನಿಮಗೆ ಸಿಗಬಹುದು. ಮಹಾವಿಷ್ಣುವಿನ ಅನುಗ್ರಹಕ್ಕೆ ಸ್ತೋತ್ರ ಮಾಡಿ.

ವೃಷಭ: ಒಳ್ಳೆಯದೆಂದು ಅಂದುಕೊಂಡ ವಸ್ತುವಿನಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆಲಸ್ಯವು ಒಳ್ಳೆಯದಲ್ಲ‌. ನಿಮ್ಮ ಗುರಿಯ ಸಾಧನೆಗೆ ಅಡ್ಡಿಯಾಗಬಹುದು. ನಿಮ್ಮನ್ನು ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ನಿಮ್ಮಲ್ಲಿ ಕಲಾವೃಕ್ಷವಿದ್ದು ಅದಕ್ಕೆ ಸರಿಯಾಗಿ ನೀರೆರಿಯಿರಿ. ಒಳ್ಳೆಯ ವೃಕ್ಷವಾಗುವ ಲಕ್ಷಣವಿದೆ. ಇತರ ಕುಹಕ‌ ಮಾತುಗಳಿಗೆ ಸಮಯವನ್ನೂ ಬೆಲೆಯನ್ನೂ ಕೊಡಬೇಡಿ. ಇದೇ ನಿಮ್ಮನ್ನು ಎತ್ತರಕ್ಕೆ ಒಯ್ಯಲಿದೆ. ಹಳೆಯ ಖಾಯಿಲೆಯು ಮತ್ತೆ ಮರುಕಳಿಸಬಹುದು. ಅನಾರೋಗ್ಯವನ್ನು ನಿರ್ಲಕ್ಷಿಸಬೇಡಿ. ಬೇಕಾದ ಉಪಚಾರವನ್ನು ಮಾಡಿ ಮುಂದೆ ಸಾಗಿ. ಕಾರ್ಯದಲ್ಲಿ ಸಾವಧಾನತೆ ಇರಲಿದೆ. ದುರ್ಗೆಯನ್ನು ಸ್ಮರಿಸಿ.

ಮಿಥುನ: ಅತಿಯಾದ ಕೋಪದಿಂದ ಶಾಂತರಾಗಲಿದ್ದೀರಿ. ನಿಮ್ಮ ಸ್ವಭಾವವು ಎಂದಿಗಿಂತ ಭಿನ್ನವಾಗಿದೆ ಎಂದು ಮನೆಯಲ್ಲಿ ಅನ್ನಿಸಬಹುದು. ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಇಂದಿನ ಶಕ್ತಿಗೆ ಅನುಗುಣವಾಗಿ ಉದ್ಯೋಗವನ್ನು ಮಾಡುವುದು ಉತ್ತಮ. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಯಾರಾದರೂ ಚುಚ್ಚಿ ಮಾತನಾಡಬಹುದು. ಅದನ್ನು ಮನಸ್ಸಿ ತೆಗದುಕೊಳ್ಳುವಿರಿ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಮನತೆ ಆಪ್ತರಿಂದ ಸಲಹೆಯನ್ನು ಪಡೆದುಕೊಂಡು ಸ್ವಂತ ನಿರ್ಧಾರಕ್ಕೆ ಬನ್ನಿ. ಸುಬ್ರಹ್ಮಣ್ಯನು ನಿಮ್ಮ ಪ್ರಾರ್ಥನೆಗೆ ಕೃಪೆದೋರುವನು.

ಕಟಕ: ವಿವಾಹದ ವಾತಾವರಣದಲ್ಲಿ ನೀವಿರುವಿರಿ. ಆಲಂಕಾರಿಕ ವಸ್ತುಗಳನ್ನು ಖರೀದಿಸುವ ಆಸಕ್ತಿಯನ್ನು ಹೊಂದಿದ್ದು ಅಗತ್ಯಕ್ಕೂ ಮೀರಿದ ವ್ಯವಹಾರವನ್ನು ಮಾಡುವಿರಿ. ಮಕ್ಕಳಿಂದ ನಿಮಗೆ ವಿದ್ಯಾಭಾಸದ ಕಾರಣಕ್ಕೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ಕೆಲಸಗಳನ್ನು ಸಕಾಲದಲ್ಲಿ ಮುಗಿಸಿದ ಸಂತೋಷವು ನಿಮ್ಮಲ್ಲಿರಲಿದೆ. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಆಲಸ್ಯವನ್ನು ಬಿಟ್ಟು ಮುನ್ನಡೆಯುವ ತೀರ್ಮಾನವನ್ನು ಮಾಡಲಿದ್ದೀರಿ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ಅವರನ್ನು ಗೌರವಿಸಿ, ಪ್ರೀತಿಸಿ. ದೇಹ ಹಾಗೂ ಮನಸ್ಸು ಸುಸ್ಥಿರವಾಗಿರಲು ಯೋಗಾಭ್ಯಾಸವನ್ನು ಮಾಡಿ.

-ಲೋಹಿತಶರ್ಮಾ, ಇಡುವಾಣಿ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?