Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

2023 ಏಪ್ರಿಲ್​ 2 ಭಾನುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: thequint.com
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 02, 2023 | 5:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 2 ಭಾನುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ 05:12 ರಿಂದ 06:43ರ ವರೆಗೆ, ಯಮಘಂಡ ಕಾಲ 12:36 ರಿಂದ 02:08ರ ವರೆಗೆ, ಗುಳಿಕ ಕಾಲ 03:40ರಿಂದ 05:12ರ ವರೆಗೆ.

ಮೇಷ: ನೀವು ಕಾರಣವಿಲ್ಲದೆ ಅತೃಪ್ತರಾಗುವಿರಿ. ಇದು ಶೀಘ್ರದಲ್ಲೇ ಕೊನೆಗೊಳ್ಳುವುದು. ಇಂದು ನಿಮಗೆ ಅಸುರಕ್ಷಿತ ಭಾವವಿರುವುದು. ಶಾಂತವಾಗಿ ನಿಮ್ಮ ಕೆಲಸವನ್ನು ಮಾಡಿ. ನಿಮ್ಮ ಈ ಉದ್ದೇಶವನ್ನು ನೀವು ಪೂರೈಸಿಕೊಂಡು ಮನಶ್ಶಾಂತಿಯನ್ನು ಪಡೆಯುವಿರಿ. ಈ ದಿನ‌ ದಿನಚರಿಯಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವಿರಿ. ಅನಗತ್ಯ ಸಂಭಾಷಣೆಯನ್ನು ಮಾಡಬೇಡಿ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ನಿರ್ಬಿಡೆಯಿಂದ ಮಾಡುವಿರಿ.

ವೃಷಭ: ನಿಮ್ಮ ಸಮಸ್ಯೆಗೆ ಪರಿಹಾರ ತಾಳ್ಮೆಯಿಂದ ಕಂಡುಕೊಳ್ಳುವುದು ಒಳ್ಳೆಯದು. ಕೆಟ್ಟ ಸಮಯವು ಸಣ್ಣ ಅಪಘಾತ ಮಾಡಿ ಹೋಗುವುದು. ನಿಮ್ಮ ಭದ್ರತೆಯ ಬಗ್ಗೆ ಸ್ವಲ್ಪ ಜಾಗರೂಕರಾಗಿರಬೇಕಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನ‌ ಮಾಡುವ ಅವಶ್ಯಕತೆಯಿದೆ. ಪ್ರೇಮ ವ್ಯವಹಾರದ ವಿಷಯದಲ್ಲಿ ಉತ್ತಮವಾಗಿರುವುದು. ನೀವು ಹೊಸ ಸಂಬಂಧವನ್ನು ಪ್ರಾರಂಭಿಸಲು ಹೋದರೆ ಅದರಲ್ಲಿ ನೀವು ಯಶಸ್ಸನ್ನು ಪಡೆಯುವಿರಿ.

ಮಿಥುನ: ನಿಮ್ಮ ಸ್ನೇಹಿತರಿಗೆ ನೀವು ಸಲಹೆಯನ್ನು ಕೊಡಲಿದ್ದೀರಿ. ಅವರಿಗೆ ಸಹಾಯವನ್ನೂ ಮಾಡುವಿರಿ. ಸಲಹೆಯನ್ನು ನೀಡುವ ಮೊದಲು ಎಚ್ಚರಿಕೆ ಇರಲಿ. ಮನೋರಂಜನೆಗೆ ಸಂಬಂಧಿಸಿದ ವಿಷಯಗಳನ್ನು ಆಲೋಚಿಸುವಿರಿ. ನೀವು ನಿಮ್ಮ ಕುಟುಂಬ ಅಥವಾ ಸ್ನೇಹಿತರೊಂದಿಗೆ ಹಂಚಿಕೊಳ್ಳಬಯಸುವಿರಿ. ಇಂದು ಕೆಲಸದ ಜೊತೆ ಸ್ವಲ್ಪ ವಿಶ್ರಾಂತಿಯನ್ನೂ ತೆಗೆದುಕೊಳ್ಳಿ. ವಿದ್ಯಾರ್ಥಿಗಳಲ್ಲಿ ಇಂದು ಪ್ರಗತಿ ಕಾಣಬಹುದು. ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಹತಾಶೆಯಾಗಲಿದೆ.

ಕಟಕ: ನಿಮಗೆ ನಿರರ್ಥಕ ಭಾವವಂಟಾಗಲಿದೆ. ಉಂಟುಮಾಡುತ್ತದೆ. ಯಶಸ್ಸಿನ ಹಿಂದೆ ಹೋಗಿ ವಿದ್ಯಾರ್ಥಿಗಳು ಜೀವನವನ್ನು ನಷ್ಟ ಮಾಡಿಕೊಳ್ಳುವರು. ಸತ್ಯವನ್ನು ಹೇಳಲು ನೀವು ಹಿಂಜರಿಯುವಿರಿ. ದಾಂಪತ್ಯದಲ್ಲಿ ಸಣ್ಣ ಕಲಹವುಂಟಾಗಲಿದೆ. ಪ್ರಾಣಿಗಳಿಂದ ಕಚ್ಚಿಸಿಕೊಳ್ಳುವ ಸಾಧ್ಯತೆ ಇದೆ.‌ ಉದ್ಯೋಗದಲ್ಲಿ ಗೊಂದಲಗಳು ಇರಲಿವೆ. ಮಕ್ಕಳ ಅಶಿಸ್ತಿನ ನಡೆತೆಯು ಪಾಲಕರಿಗೆ ಮುಜುಗರವಾಗಬಹುದು. ಒಬ್ಬೊಂಟಿಯಾಗಿರುವುದು ಸುಖವೆನಿಸಬಹುದು.

ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ