Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 30) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: May 30, 2023 | 12:10 AM

ಶುಭೋದಯ ಓದುಗರೇ… ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ಪಂಚಾಂಗ: ಶಾಲಿವಾಹನ ಶಕೆ 1947, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ : ರೋಹಿಣೀ, ಮಾಸ : ಜ್ಯೇಷ್ಠ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಹಸ್ತಾ, ಯೋಗ : ಸುಕರ್ಮ. ಕರಣ : ಗರಜ, ಸೂರ್ಯೋದಯ – 06-03 am, ಸೂರ್ಯಾಸ್ತ – 06-55 pm. ರಾಹು ಕಾಲ 03:43 – 05:19, ಯಮಘಂಡ ಕಾಲ 09:17 – 10:53, ಗುಳಿಕ ಕಾಲ 12:30 –02:06

ಮೇಷ: ಇಂದು ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳಬಹುದು. ಇದು ನಿಮಗೆ ಬಹಳ ದಿನಗಳ ಅನಂತರದ ಸಂತೋಷ ನೀಡುವ ಸಂಗತಿಯಾಗಲಿದೆ. ಕುಟುಂಬದೊಂದಿಗೆ ಪ್ರಯಾಣದ ಸವಿಯನ್ನು ಸವಿಯುವಿರಿ. ನೀವು ಇಂದು ನಿಮ್ಮದೇ ಹೊಸ ಉದ್ಯೋಗವನ್ನು ಪ್ರಾರಂಭಿಸುವ ಯೋಚನೆ ಹುಟ್ಟಿಕೊಳ್ಳುವುದು. ಹಿರಿಯರಿಂದ ನಿಮಗೆ ಬರಬೇಕಾದ ಆಸ್ತಿಯು ಬರಬಹುದು. ದುಡುಕುತನ, ಮುಂಗೋಪಗಳೆಲ್ಲ ಕಡಿಮೆಯಾಗಲಿದೆ. ನೀವು ಬಂಧುಗಳ ಜೊತೆ ಬೆರೆಯುವುದು ಆಶ್ಚರ್ಯಕರವಾದೀತು. ಸಹೋದರರು ನಿಮ್ಮ ಕಷ್ಟದಲ್ಲಿ ಭಾಗಿಯಾಗುವರು.

ವೃಷಭ: ಇಂದು ಹಣಕಾಸಿನ ವಿಚಾರದಲ್ಲಿ ಮಾಡಿದ ಪ್ರಯತ್ನಗಳು ಸಫಲವಾಗುವುವು. ನೀವು ನಿಮ್ಮ ಮಕ್ಕಳ ವಿಚಾರದಲ್ಲಿ ತೆಗೆದುಕೊಂಡ ಜವಾಬ್ದಾರಿಗಳು ಮುಗಿಯುವುವು. ಕಲೆಗೆ ಸಂಬಂಧಿಸಿದವರಾಗಿದ್ದರೆ ದೂರದ ಊರಿಗೆ ಪ್ರಯಾಣ ಮಾಡುವಿರಿ. ಧಾರ್ಮಿಕ ಚಟುವಟಿಕೆಗಳಲ್ಲಿ ಹೆಚ್ಚು ತೊಡಗುವಿರಿ. ಯಾರ ಸಹಾಯವೂ ಇಲ್ಲದೇ ಹಣದ ಲಾಭವನ್ನು ಪಡೆಯುವಿರಿ. ನಿಮ್ಮ ವಿರೋಧಿಗಳನ್ನು ಮೀರಿ ನೀವು ಬೆಳೆಯುವಿರಿ. ತೆಗೆದುಕೊಂಡ ನಿರ್ಧಾರವನ್ನು ಸಡಿಲಿಸುವುದು ಬೇಡ. ಚಾಡಿ ಮಾತುಗಳಿಗೆ ಕಿವಿ ಕೊಡಬೇಡಬುದು. ಕಿರಿಯರ ಜೊತೆ ಪ್ರೀತಿಯಿಂದ ವ್ಯವಹರಿಸಿ. ಅನವಶ್ಯಕ ವಸ್ತುಗಳನ್ನು ಖರೀದಿಸಿ ದಂಡ ಮಾಡುವಿರಿ.

ಮಿಥುನ: ಇಂದು ಕಲೆಗೆ ಸಂಬಂಧಿಸಿ ಮಾಡುತ್ತಿರುವ ಸುಖಾಂತ್ಯವಾಗುವುದು. ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿಗೆ ಅವಕಾಶಗಳಿವೆ. ಪಾಲುದಾರರ ಜೊತೆಗಿನ ಒಪ್ಪಂದವು ಅಂತ್ಯವಾಗಬಹುದು. ಹಣದ ವಹಿವಾಟಿನಲ್ಲಿ ಮುನ್ನೆಚ್ಚರಿಕೆ ಅಗತ್ಯ. ಗೃಹ ನಿರ್ಮಾಣದ ಕಾರ್ಯದಲ್ಲಿ ನಿಮಗೆ ಹಣಕಾಸಿನ ತೊಂದರೆ ಎದುರಾದೀತು. ಸಾಲವು ಸಿಗದೇ ಹೋಗುವ ಸಾಧ್ಯತೆ ಇದೆ. ಕಛೇರಿಯಲ್ಲಿ ಸಹೋದ್ಯೋಗಿಯು ಕೊಡುವ ಎಲ್ಲ ಸಹಕಾರವನ್ನೂ ತೆಗೆದುಕೊಳ್ಳಿ.

ಕಟಕ: ಇಂದು, ಧನು ರಾಶಿಯವರು ಶಿಕ್ಷಣ ಸ್ಪರ್ಧೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಯಶಸ್ವಿಯಾಗುವ ನಿರೀಕ್ಷೆಯಿದೆ. ಆದರೆ ಇಂದು ನೀವು ವ್ಯವಹಾರದಲ್ಲಿ ಜಾಗರೂಕರಾಗಿರಬೇಕು. ಹಣವನ್ನು ಹೂಡಿಕೆ ಮಾಡುವಾಗ ವಿಶೇಷ ಕಾಳಜಿ ವಹಿಸಿ. ಯಾವುದನ್ನು ಪರಿಶೀಲಿಸದೆ ಹೂಡಿಕೆ ಮಾಡಲು ಹೊರಟರೆ ದೊಡ್ಡ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿಕೊಳ್ಳುವಿರಿ. ಕ್ರೆಡಿಟ್ ವಹಿವಾಟಿನಿಂದ ದೂರವಿರಿ. ಖಾಸಗಿ ಕಂಪನಿ ನೌಕರರಿಗೆ ವೇತನ ಹೆಚ್ಚುವುದು. ಮನೆ ಸದಸ್ಯರ ಮಧ್ಯೆ ಮೂಡಿದ್ದ ಭಿನ್ನಾಭಿಪ್ರಾಯಗಳು ದೂರವಾಗಿ ಸೌಹಾರ್ದತೆ ಮೂಡಲಿದೆ. ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಹೋಗಿ. ಯಾವುದೇ ರೀತಿಯ ಹೊಗಳಿಕೆ ಅಥವಾ ತೆಗಳಿಕೆಗಳಿಗೆ ಕಿವಿ ಕೊಡದಿರಿ. ಮತ್ತೊಬ್ಬರ ಜೊತೆ ವಿನಾಕಾರಣ ವಾಗ್ವಾದ ಬೇಡ. ಕೆಲಸದಲ್ಲಿ ಗಮನವಿರಲಿ.

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ