Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: bhaskar.com
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 31, 2023 | 5:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 31 ಶುಕ್ರವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ದಶಮೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಸುಕರ್ಮ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ 11:05 ರಿಂದ 12:37ರ ವರೆಗೆ, ಯಮಘಂಡ ಕಾಲ 03:40 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:02ರಿಂದ 09 :33ರ ವರೆಗೆ.

ಮೇಷ: ಇಂದು ಸಂಕೋಚ ಸ್ವಭಾವದಿಂದ ಹೇಳಿಕೊಳ್ಳದೇ ಹಾಗೇ ಇರುವಿರಿ. ಹೊಸ ಉದ್ಯೋಗ ಸೃಷ್ಟಿಗೆ ಹೆಚ್ಚು ಪ್ರಯತ್ನ ಮಾಡುವಿರಿ. ಸಾಲ ಪಡೆದವರು ಮರಳಿ ನೀಡಲಿದ್ದಾರೆ. ಈ ಅನಿರೀಕ್ಷಿತ ಧನಾಗಮನದ ನಿರೀಕ್ಷೀತ ಧನಾಗಮನ ನೆಮ್ಮದಿ ಕೊಡಲಿದೆ. ವಿದ್ಯಾರ್ಥಿಗಳು ಉನ್ನತಿಯನ್ನು ಸಾಧಿಸಲು ಯೋಜನೆಯನ್ನು ಹಾಕಿಕೊಳ್ಳುವುದು ಒಳ್ಳೆಯದು. ತಾಳ್ಮೆಯನ್ನು ಕಳೆದುಕೊಳ್ಳದೇ ವ್ಯವಹರಿಸಿ. ವಿವೇಚನೆಯಿಂದ ಕೆಲಸಗಳನ್ನು ಮಾಡಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ವೈದ್ಯರನ್ನು ಭೇಟಿಯಾಗಿ.

ವೃಷಭ: ನಿಮ್ಮನ್ನು ಕಾಳಜಿ ಮಾಡುವವರ ಜೊತೆ ಸಮಯವನ್ನು ಕಳೆಯುವುದು ಉತ್ತಮ. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಯಾರ ಮೇಲೂ ದ್ವೇಷವನ್ನು ಸಾಧಿಸಿ ಪ್ರಯೋಜನವಿಲ್ಲ‌‌. ಸಂಗಾತಿಯ ಜೊತೆ ಹಣಕಾಸಿನ ವಿಚಾರದಲ್ಲಿ ಕಲಹವಾಗಬಹುದು. ಅದಕ್ಕೆ ತುಪ್ಪವನ್ನು ಸುರಿಯದೇ ಇದ್ದರೆ ಸ್ವಲ್ಪ ಸಮಯಕ್ಕೆ ಶಾಂತವಾಗಲಿದೆ. ಕಾರಣವಿಲ್ಲದೆ ಸಂತೋಷವಾಗಿರುವುದನ್ನು ಅಭ್ಯಾಸ ಮಾಡಿ. ಆಕಸ್ಮಿಕವಾಗಿ ಆಗಿವ ಘಟನೆಗಳನ್ನು ಮನಸಾರೆ ಸ್ವೀಕರಿಸಿ.

ಮಿಥುನ: ಇಂದು ನೀವು ಸ್ವಾತಂತ್ರ್ಯವನ್ನು ಪಡೆಯಲು ಇಚ್ಛಿಸುವಿರಿ‌. ಆದರೆ ಕಾರ್ಯದ ಒತ್ತಡ ನಿಮ್ಮನ್ನು ಬಂಧಿಸಿಡಲಿದೆ. ಹೊಸ ವಸ್ತ್ರದ ಖರೀದದಿಯಾಗಲಿದೆ‌. ಅನಿರೀಕ್ಷಿತ ಬಂಧುಗಳ ಆಗಮನವು ಮನೆಯಲ್ಲಿ ಹಬ್ಬದಂತಾಗುವುದು. ಇನ್ನೊಬ್ಬರನ್ನು ನೋಡಿ ಅಸೂಯೆ ಪಡುವುದನ್ನು ಬಿಟ್ಟರೆ ಒಳ್ಳೆಯದು. ನಿಮ್ಮ ಯಶಸ್ಸಿನ ದಾರಿಯನ್ನು ನೀವೇ ಕಂಡುಕೊಳ್ಳಬೇಕು. ವೃತ್ತಿಪರರು ನಿರಾಳರತೆಯಲ್ಲಿ ಇರುವಿರಿ. ನಿಮ್ಮವರು ನಿಮ್ಮಿಂದ ಕುಟುಂಬವು ಸಹಾಯವನ್ನು ನಿರೀಕ್ಷಿಸಬಹುದು. ಕಲಾಸಕ್ತಿಯು ನಿಮ್ಮನ್ನು ಕಲಿಕೆಗೆ ಜೋಡಿಸಬಹುದು.

ಕಟಕ: ಇಂದು ನಿಮಗೆ ಅಲ್ಪರ ಸಂಗ ಅಭಿಮಾನ ಭಂಗ ಎನ್ನುವಂತೆ ತಿಳಿದೂ ಅಲದಪರ ಸಹವಾಸ ಮಾಡಿ ಅಪಮಾನಕ್ಕೆ ಒಳಗಾಗುವಿರಿ. ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬಯಸಿದರೆ ನಕಾರಾತ್ಮಕ ಉತ್ತರವನ್ನು ಕೊಡಬೇಡಿ. ಒಪ್ಪಿಕೊಂಡು ಸ್ವಲ್ಪ ದಿನದವರೆಗೆ ಕಾಯಿರಿ. ಸಾಧ್ಯವಾದಷ್ಟು ತಾಳ್ಮೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಮನೆಯ ಕಡೆಯಿಂದ ಅನಿರೀಕ್ಷಿತ ಅಶುಭವಾರ್ತೆಯು ಬರಬಹುದು. ಉತ್ತಮ ಬಾಂಧವ್ಯವು ಕ್ಷುಲ್ಲಕ ಕಾರಣಕ್ಕೆ ಕೆಟ್ಟುಹೋಗಬಹುದು. ಉದ್ಯೋಗದ ನಿಮಿತ್ತ ಬೇರೆ ಕಡೆಗೆ ಹೋಗಬಹುದು.

ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ