AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 05) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: freepik
ಗಂಗಾಧರ​ ಬ. ಸಾಬೋಜಿ
|

Updated on: May 05, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ​ 5) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಸಿದ್ಧಿ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ 10:54 ರಿಂದ 12:29ರ ವರೆಗೆ, ಯಮಘಂಡ ಕಾಲ 03:39 ರಿಂದ 05:14ರ ವರೆಗೆ, ಗುಳಿಕ ಕಾಲ 07:44 ರಿಂದ 09:19ರ ವರೆಗೆ.

ಮೇಷ: ಆತ್ಮವಿಶ್ವಾಸವನ್ನು ಬೆಳಸಿಕೊಂಡ ನಿಮಗೆ ಸದಾ ಸಂತೋಷವು ಇರಲಿದೆ. ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಮಕ್ಕಳ‌ ಮೇಲೆ ಸಿಟ್ಟಾದಂತೆ ನಟಿಸಿ ಅವರನ್ನು ನಿಯಂತ್ರಿಸುವಿರಿ. ನಿಮ್ಮ ಇಷ್ಟ ಮಿತ್ರರ ಜೊತೆ ಮಾತಕತೆ ನಡೆಸುವಿರಿ. ಸ್ನೇಹಿತರ ಸಮಸ್ಯೆಗಳಿಗೆ ಪರಿಹಾರವನ್ನು ಕೊಡಲು ಬಯಸುವಿರಿ. ಉತ್ತಮ ಭೋಜನವನ್ನು ನೀವು ಸ್ವೀಕರಿಸಲಿದ್ದೀರಿ. ನಿಮ್ಮ‌ ಮಾತುಗಳ ಸಂತೋಷದಿಂದ ಇದ್ದರೂ ಬೇಸರವಾಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಅಷ್ಟಾಗಿ ತೊಡಗಿಕೊಳ್ಳುವ ಮನಸ್ಸಿರದು. ಬಂಧುಗಳ ಭೇಟಿಯು ಖುಷಿ ಕೊಡಬಹುದು.

ವೃಷಭ: ಯಾರ ಮಾತನ್ನೂ ಕೇಳದೇ ಹಣ ಹೂಡಿಕೆ‌ ಮಾಡಿ ಕಳೆದುಕಳ್ಳುವಿರಿ. ಸಂಬಂಧಗಳು ಹದ ತಪ್ಪಬಹುದು. ಅನಿರೀಕ್ಷಿತ ಸುದ್ದಿಗಳು ನಿಮಗೆ ಸಂತೋಷವನ್ನು ತರುವುದು. ಅಸತ್ಯವನ್ನು ಸತ್ಯವೆಂದು ನಂಬಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಬಹಳ ತೊಂದರೆಗೆ ಸಿಕ್ಕಿಕೊಳ್ಳಬಹುದು. ಮಾನಸಿಕವಾಗಿ ಹಿಂಜರಿಕೆ ಇರಲಿದೆ. ಆಪ್ತರ ಮಾತು ನಿಮ್ಮನ್ನು ಚೇತರಿಸಿಕೊಳ್ಳಲು ಸಹಾಯ ಮಾಡಬಹುದು. ಚಟಗಳಿಂದ ಒಂದಿಷ್ಟು ಸಮಯ ಹಾಗೂ ಹಣವನ್ನು ವ್ಯರ್ಥ ಮಾಡಿಕೊಳ್ಳಲಿದ್ದೀರಿ. ಭವಿಷ್ಯದ‌ ಕುರಿತು ಆಲೋಚಿಸುವುದು ಉತ್ತಮ. ಸಕಾರಾತ್ಮಕ ವಿಚಾರದ‌ ಕಡೆ ನಿಮ್ಮ ಗಮನವಿರಲಿ.

ಮಿಥುನ: ಮನೆಯಿಂದ ದೂರ ಉದ್ಯೋಗದ ನಿಮಿತ್ತ ಇರಬೇಕಾಗಿ ಬರಬಹುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಪ್ರಯತ್ನಿಸುವರು. ತಂದೆಯಿಂದ ಸಂಪತ್ತು ಸಿಗುವ ಸಾಧ್ಯತೆ ಇದೆ. ನಿರೀಕ್ಷೆಗೆ ತಕ್ಕ ಸಂಪತ್ತನ್ನು ಗಳಿಸುವಿರಿ. ಮೇಲಧಿಕಾರಿಗಳ ವಿಶ್ವಾಸವನ್ನು ಗಳಿಸುವ ಪ್ರಯತ್ನ ಮಾಡುವಿರಿ. ಹಿರಶತ್ರುಗಳು ನಿಮ್ಮನ್ನು ಗಮನಿಸುತ್ತಿರುವರು. ನಿಮ್ಮ ಏಳ್ಗೆಗೆ ದೈವಾನುಕೂಲವು ಸಹಾಯ ಮಾಡಲಿದೆ. ಪ್ರತಿಕೂಲ‌ ಸಂದರ್ಭವನ್ನು ಸರಿಯಾಗಿ ನಿಭಾಯಿಸುವಿರಿ. ತೊಂದರೆಗಳು ಬರುವುದು ನಿಲ್ಲುವುದು. ಇರುವುದನ್ನು ಸರಿ ಮಾಡಿಕೊಳ್ಳುವ ಜವಾಬ್ದಾರಿಯು ನಿಮ್ಮ ಮೇಲಿದೆ.

ಕಟಕ: ತೊಂದರೆಗಳಿಂದ ಮನಸ್ಸು ಕುಗ್ಗಬಹುದು. ಗೌಪ್ಯತೆಯನ್ನು ನೀವು ಕಾಪಾಡಿಕೊಳ್ಳಲಿದ್ದೀರಿ. ನೆರೆಹೊರೆಯವರು ನಿಮ್ಮ ಮನೆಗೆ ಬರಬಹುದು. ಸರ್ಕಾರಿ‌ ಕೆಲಸ ಕೊನೆಯ ಹಂತದಲ್ಲಿ ನಿಂತಿದ್ದು ಮುಂದುವರಿಸುವ ಪ್ರಯತ್ನ ಮಾಡುವಿರಿ. ಮಾತಿನ‌ ಮೇಲೆ ಯಾರನ್ನೂ ಅಳೆಯಬೇಡಿ. ಜೀವನ ನಿರ್ವಹಣೆಗೆ ಮತ್ತೊಂದು ವೃತ್ತಿಯನ್ನು ಆಶ್ರಯಿಸಬಹುದು. ಅತಿಯಾದ ಆಲಸ್ಯದಿಂದ ಮನೆಯ ಕೆಲಸಗಳು ಹಾಗೆಯೇ ಉಳಿದುಕೊಳ್ಳಬಹುದು. ದೂರದ ಪ್ರಯಾಣವನ್ನು ಅಪೇಕ್ಷಿಸುವಿರಿ. ಧಾರ್ಮಿಕವಾದ ಚಿಂತನೆಯನ್ನು ನಡೆಸಬಹುದು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ