Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: FILE PHOTO
Follow us
Rakesh Nayak Manchi
|

Updated on: Apr 07, 2023 | 5:16 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 7 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶುಕ್ರ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಚಿತ್ರಾ, ಯೋಗ : ಹರ್ಷಣ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:02 ರಿಂದ ಮಧ್ಯಾಹ್ನ 12:35ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆಮ ಗುಳಿಕ ಕಾಲ ಬೆಳಗ್ಗೆ 07:58 ರಿಂದ 09:30ರ ವರೆಗೆ.

ಮೇಷ: ಆರೋಗ್ಯದ ವ್ಯತ್ಯಾಸದಿಂದ ಹಣವು ಬೇಕಾಗಲಿದ್ದು ಸ್ನೇಹಿತರನ್ನು ಕೇಳುವಿರಿ. ನಿಮ್ಮ‌ಅನಿವಾರ್ಯತೆಯನ್ನು ಅರಿತು ನಿಮ್ಮವರು ನಿಮಗೆ ಧನಸಹಾಯವನ್ನು ಮಾಡಲಿದ್ದಾರೆ. ಪ್ರೇಮಿಯ ಜೊತೆ ಸಂತೋಷದಿಂದ ಕಾಲವನ್ನು ಕಳೆಯುವಿರಿ. ಎಂದೋ ಮಾಡಿದ ಧನಸಹಾಯವು ಇಂದು ಧನವಾಗಿಯೇ ಹಿಂದುರುಗಿದೆ ಎಂಬುದು ನಿಮ್ಮ ನಂಬಿಕೆಯಾಗಿರಲಿದೆ. ಧಾರ್ಮಿಕ ವಿಚಾರಕ್ಕೆ ಹಣವನ್ನು ನೀಡಲಿದ್ದೀರಿ. ಸುಬ್ರಹ್ಮಣ್ಯನ ಆರಾಧನೆ ಮಾಡಿ ಸಂತೋಷದಿಂದ ಇರುವಿರಿ.

ವೃಷಭ: ಪ್ರೇಮಕ್ಕೆ ಸಂಬಂಧಿಸಿದ ಹೊಸ ದಾರಿಗಳು ತೆಗೆದುಕೊಳ್ಳುವ ಸಾಧ್ಯತೆ ಇದೆ. ಯಾರನ್ನೂ ನಂಬದ ಸ್ಥಿತಿಯಲ್ಲಿ ನೀವಿರುವಿರಿ. ಅನಿರೀಕ್ಷಿತವಾಗಿ ಬಂದ ಹಣವನ್ನು ರಕ್ಷಿಸಿಡಲು ದಾರಿಯನ್ನು ಹುಡುಕುವಿರಿ. ದೇಹಾಲಸ್ಯದಿಂದ ಹೊರಬಂದು ಸಾಧಿಸುವ ಛಲವಿರಬೇಕಾಗಿಬರಬಹುದು. ಉದ್ವೇಗಕ್ಕೆ ಒಳಗಾಗದೇ ತಾಳ್ಮೆಯಿಂದ ಎಲ್ಲವನ್ನೂ ಪಡೆಯಲು ಪ್ರಯತ್ನಿಸಿ. ಸಂಗೀತವನ್ನು ಕೇಳಬೇಕಾದ ಮನಸ್ಸು ಇರಲಿದ್ದು, ಒಂಟಿಯಾಗಿ ಇರುವಿರಿ. ಸಂಪತ್ತನ್ನು ಯಾರಿಗೂ ಕೊಡಲು ಹೋಗಬೇಡಿ.

ಮಿಥುನ: ವಿದೇಶಕ್ಕೆ ಹೋಗಲು ಹುನ್ನಾರ ಮಾಡಿಕೊಂಡಿದ್ದೀರಿ. ನಿಮಗೆ ಅಲ್ಲಿನ ವಾತಾವರಣವು ಸರಿಯಾಗುವುದೇ ಎಂಬ ಮಾಹಿತಿಯನ್ನು ಒಡೆದುಕೊಳ್ಳಿ. ಮನೆಯಲ್ಲಿ ಇರುವ ವಿದ್ಯುಪಕರಣದಿಂದ ನಷ್ಟವಾಗಬಹುದು. ತಮಾಷೆಗೆ ಶುರುವಾದ ಮಾತು ಬಂಧುಗಳ ನಡುವೆ ಕಲಹವನ್ನು ಎಬ್ಬಿಸಬಹುದು‌. ದೇವಾಲಯದ ಆವರಣದಲ್ಲಿ ಅಥವಾ ಪವಿತ್ರ ಸ್ಥಳಗಳಲ್ಲಿ ಹೆಚ್ಚು ಕಾಲವನ್ನು ಕಳೆಯುವಿರಿ. ಅಧಿಕಶ್ರಮವು ಇಂದು ವ್ಯರ್ಥವಾಗುವುದು. ಪರೀಕ್ಷೆಯ ಕಾಲಕ್ಕೆ ನೀವು ಸಿದ್ಧರಾಗಬೇಕಿದೆ.

ಕಟಕ: ಎಲ್ಲವನ್ನೂ ಕ್ರಮಬದ್ಧಗೊಳಿಸುವ ನಿಮ್ಮ ಆಲೋಚನೆ ಸರಿಯೇ. ಆದರೆ ಅದನ್ನು ಕ್ರಮಬದ್ಧಬಾಗಿ ಹೇಳುವುದೂ ನಿಮ್ಮ ಕೈಯಲ್ಲಿದೆ. ಎಲ್ಲರನ್ನೂ ವಿರೋಧ ಕಟ್ಟಿಕೊಳ್ಳುವ ಕೆಲಸಕ್ಕೆ ಹೋಗುವಿರಿ. ಇಂದು ಜಗತ್ತಿನ ವೈಶಾಲ್ಯ ಅರ್ಥವಾಗಬಹುದು. ಕಾರ್ಯಗಳು ಸಫಲವಾಯಿತೆಂಬ ಸಂತೋಷವಿಂದು ಇರಲಿದೆ. ಹಿರಿಯರನ್ನು ಅಲಕ್ಷ್ಯಿಸದೇ ಪ್ರೀತ್ಯಾದರಗಳಿಂದ ನೋಡಿಕೊಳ್ಳಿ. ನಿಮ್ಮ ಉದ್ದೇಶವನ್ನು ತಪ್ಪಿಸುವ ಸಲಹೆಗಳು ಬರಬಹುದು. ದೇವಿಯ ಸ್ತೋತ್ರವನ್ನು ಮಾಡಿ.

-ಲೋಹಿತಶರ್ಮಾ ಇಡುವಾಣಿ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?