AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

2023 ಏಪ್ರಿಲ್​ 8 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: astroyogi.com
ಗಂಗಾಧರ​ ಬ. ಸಾಬೋಜಿ
|

Updated on: Apr 08, 2023 | 5:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 8 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ವಜ್ರ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:29 ರಿಂದ ಮಧ್ಯಾಹ್ನ 11:02ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:07 ರಿಂದ 03:39ರ ವರೆಗೆಮ ಗುಳಿಕ ಕಾಲ ಬೆಳಗ್ಗೆ 06:29 ರಿಂದ 07:57ರ ವರೆಗೆ.

ಮೇಷ: ವಿದ್ಯಾರ್ಥಿಯಾಗಿದ್ದರೆ ಶಿಕ್ಷಣದಲ್ಲಿನ ಅಡೆತಡೆಗಳು ಸರಿಯಾಗಬಹುದು. ದಾಂಪತ್ಯಜೀವನದಲ್ಲಿ ನೀವು ಪ್ರೀತಿಯನ್ನು ಅನುಭವಿಸುವಿರಿ. ಕೆಲವು ದಿನಗಳ ಕಾಲ ಮನೆಯಿಂದ ಹೊರಗೆ ಸುತ್ತಾಡಲು ಯೋಜಿಸಬಹುದು. ಉದ್ಯೋಗಿಗಳಿಗೆ ಇಂದು ಶುಭ ಸೂಚನೆಗಳು ಸಿಗಬಹುದು. ಮಕ್ಕಳಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಅದು ನಿಮಗೆ ತುಂಬಾ ಹೆಮ್ಮೆ ತರುತ್ತದೆ. ಕಷ್ಟಪಟ್ಟು ಕೆಲಸ ಮಾಡುತ್ತೀರಿ ಮತ್ತು ನಿಮ್ಮ ವಿರೋಧಿಗಳಿಗೆ ಕಠಿಣ ಸ್ಪರ್ಧೆಯನ್ನು ನೀಡುತ್ತೀರಿ. ನಿಮ್ಮ ವೆಚ್ಚಗಳು ಕಡಿಮೆ ಇರುತ್ತದೆ ಮತ್ತು ನೀವು ಉಳಿಸಲು ಸಾಧ್ಯವಾಗುತ್ತದೆ.

ವೃಷಭ: ಅತಿಥಿಗಳು ಅನಿರೀಕ್ಷಿತವಾಗಿ ಮನೆಗೆ ಬರಲಿದ್ದಾರೆ. ಅವರ ಸಂತೋಷಕ್ಕೆ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗಿಬರಬಹುದು. ಅದು ನಿಮ್ಮ ಆತಂಕವನ್ನು ಹೆಚ್ಚಿಸುತ್ತದೆ. ಎಲ್ಲವನ್ನೂ ನಿರ್ವಹಿಸುವ ಸಾಮರ್ಥ್ಯ ನಿಮ್ಮಲ್ಲಿ ಇದೆ. ಆದರೆ ಅದನ್ನು ನಿಮಗೆ ಪರಿಚಯಿಸುವ ಕೆಲಸವಾಗಬೇಕು. ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲವಾಗಿರುವುದು. ಕಷ್ಟಪಟ್ಟು ಬಹಳ ಪ್ರೀತಿಯಿಂದ ಕೆಲಸವನ್ನು ಮಾಡುತ್ತೀರಿ ಮತ್ತು ನಿಮ್ಮ ಉತ್ಸಾಹವನ್ನು ಪರಿಗಣಿಸಿ ಹಿರಿಯರು ನಿಮ್ಮನ್ನು ಪ್ರೋತ್ಸಾಹಿಸಬಹುದು.

ಮಿಥುನ: ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯವನ್ನು ಸಾಧಿಸವಹುದು. ಅದಕ್ಕೆ ಅವಕಾಶವನ್ನು ಕೊಡಬೇಡಿ. ನಿಮ್ಮ ತಿಳುವಳಿಕೆಯುಂದ ಅವುಗಳನ್ನು ಸರಿಯಾಗಿಸಿ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳವರೆಗೆ ಮನೆಯಿಂದ ದೂರವಿರಬೇಕಾಗಬಹುದು. ಕಚೇರಿಯಲ್ಲಿ ನಿಮ್ಮ ಸಾಧನೆಗೆ ಮೆಚ್ಚುಗೆ ಸಿಗಲಿದೆ. ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕವಾಗಿ ಪೂರ್ಣಗೊಳಿಸುವಿರಿ. ಈ ಸಮಯದಲ್ಲಿ ಖರ್ಚುಗಳು ಅಧಿಕವಾಗಬಹುದು.

ಕರ್ಕ: ಅತಿಯಾದ ಸಂತೋಷದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಇಲ್ಲವಾದರೆ ನೀವು ನಷ್ಟವನ್ನು ಅನುಭವಿಸುವಿರಿ. ಮನೆಯ ವಾತಾವರಣವು ಪ್ರಿಯವಾಗುವುದು. ಕುಟುಂಬಗಳ ನಡುವಿನ ಪರಸ್ಪರ ಹೊಂದಾಣಿಕೆಯು ಮೊದಲಿಗಿಂತ ಉತ್ತಮವಾಗಿರುತ್ತದೆ. ಹೆತ್ತವರೊಂದಿಗೆ ನೀವು ಸಂತೋಷದಿಂದ ಸಮಯವನ್ನು ಕಳೆಯುವಿರಿ. ಮನಸ್ಸಿನಲ್ಲಿ ಸ್ವಲ್ಪ ಗೊಂದಲಗಳು ಉಂಟಾಗಬಹುದು. ಅದು ನಿಮ್ಮನ್ನು ತುಂಬಾ ಉದ್ವೇಗಕ್ಕೆ ಒಳಗೊಳಿಸುವುದು. ಆರೋಗ್ಯದ ವಿಷಯದಲ್ಲಿ ಸ್ವಲ್ಪ ನೀವು ಕಾಳಜಿವಹಿಸಬೇಕಾಗಬಹುದು.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು