Rashi Bhavishya: ಈ ರಾಶಿಯವರ ನಿತ್ಯದ ಜೀವನದಲ್ಲಿ ಏರುಪೇರಾಗಬಹುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 8) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಈ ರಾಶಿಯವರ ನಿತ್ಯದ ಜೀವನದಲ್ಲಿ ಏರುಪೇರಾಗಬಹುದು
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 08, 2023 | 12:10 AM

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 8) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ : ರೋಹಿಣೀ, ಮಾಸ : ಜ್ಯೇಷ್ಠ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಚತುರ್ಥೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ : ಬ್ರಹ್ಮ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:08 ರಿಂದ 03:45ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:04 ರಿಂದ 07:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:18 ರಿಂದ ಮಧ್ಯಾಹ್ನ 10:55ರ ವರೆಗೆ.

ಮೇಷ: ಕುಂಟು ನೆಪವನ್ನು ಹೇಳಿ ಇಂದಿನ ಸುತ್ತಾಟವನ್ನು ತಪ್ಪಿಸಿಕೊಳ್ಳುವಿರಿ. ತಿಳಿವಳಿಕೆ ಇಲ್ಲದವರ ನಿಮ್ಮ ವ್ಯವಹಾರಗಳನ್ನು ಹೇಳಬೇಡಿ. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದರಿಂದ ನಿಮಗೆ ನಷ್ಟವಾಗಬಹುದು. ಇಂದು ಸ್ವಲ್ಪ ದೇಹಕ್ಕೂ ಮನಸ್ಸಿಗೂ ವಿಶ್ರಾಂತಿಯನ್ನು ನೀಡಿದರೆ ಒಳ್ಳೆಯದು. ಆಗಬೇಕಾಗಿರುವ ಕೆಲಸದ ಬಗ್ಗೆ ಗಮನ ಹರಿಸಿ ಮುಗಿಸುವುದು ಒಳ್ಳೆಯದು. ಸಂಬಂಧಗಳನ್ನು ಸರಿಯಾಗಿ ಹಾಳು ಮಾಡಿಕೊಳ್ಳುವುದು ಬೇ. ನೀವು ನಿಮ್ಮ ತಾಯಿಯ ಜೊತೆ ಕ್ಷುಲಕ ಕಾರಣಕ್ಕೆ ಜಗಳವಾಡಬಹುದು. ಅತಿಯಾದ ಸಲುಗೆಯು ದುರ್ಬಳಕೆಯಾದೀತು. ನಿಮ್ಮನ್ನು ನೆಚ್ಚುವವರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ.

ವೃಷಭ: ಬಹಳ ದಿನಗಳಿಂದ ನಿಮ್ಮ ಆರೋಗ್ಯವು ಹಳಿ ತಪ್ಪಿದ್ದರೂ ನೀವು ನಿರ್ಲಕ್ಷ್ಯ ತೋರಿಸುತ್ತಿರುವುದು ಒಳ್ಳೆಯದಲ್ಲ. ಮನೋರಂಜನೆಗೆ ಅಧಿಕ ಸಮಯವನ್ನು ನೀವು ನೋಡುವಿರಿ. ನಿಮ್ಮ ಕಠಿಣ ಪರಿಶ್ರಮದಿಂದ ಚಿಂತಿತಕಾರ್ಯವು ಸಾಧ್ಯವಾಗಬಹುದು. ನಿಮ್ಮ ಯಶಸ್ಸನ್ನು ಸಹಿಸಲಾಗದೇ ನೊಂದುಕೊಳ್ಳುವರು. ಅದನ್ನು ಲೆಕ್ಕಿಸದೇ ಮುಂದುವರಿಯಿರಿ. ದಾಂಪತ್ಯದಲ್ಲಿ ವಿವಾದವಾಗಬಹುದು. ಬೆಳಗಿನ ಉತ್ಸಾಹವು ಸಂಜೆಯವರೆಗೂ ಇರಲಿದೆ. ಅರ್ಥವಿಲ್ಲದ ಚರ್ಚೆಗಳಲ್ಲಿ ಸಮಯವನ್ನು ನಷ್ಟ ಮಾಡಿಕೊಳ್ಳುವುದು ಬೇಡ. ನಿಮ್ಮ ಮನಸ್ಸನ್ನು ಯೋಗ್ಯರ ಜೊತೆ ಹಂಚಿಕೊಳ್ಳಿ. ಗುರುಚರಿತ್ರೆಯ ಭಾಗವನ್ನು ಪಠಿಸಿ.

ಮಿಥುನ: ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಇಬ್ಬರಿಗೂ ಸಂತೋಷವಾಗಲಿದೆ. ನೀವಂದುಕೊಂಡಿದ್ದೇ ಸತ್ಯ ಎನ್ನುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಂಡಿದ್ದರೆ ಅದರಿಂದ ಹೊರಬರುವುದು ಒಳ್ಳೆಯದು. ಇಲ್ಲವಾದರೆ ಎಲ್ಲ ಕಡೆಯೂ ಇದೇ ಸ್ಥಿತಿ ಎದುರಾಗಿ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗಬಹುದು. ಸಂಬಬಂಧಗಳು ಸಡಿಲವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯು ನಿಮ್ಮದಾಗಿರುತ್ತದೆ. ಆರ್ಥಿಕತೆಯ ದೃಷ್ಟಿಯಿಂದ ನೀವು ಕಳೆದುಕೊಂಡಿದ್ದು ಬಹಳ ಆಗಿರುತ್ತದೆ. ಬಹಳ ಪ್ರಯತ್ನಪೂರ್ವಕವಾಗಿ ಮಾಡಿದ ಕೆಲಸವು ವ್ಯರ್ಥವಾಗು ಸಂಭವವಿದೆ. ನಿಮ್ಮ ಮಕ್ಕಳು ಪ್ರಗತಿಯತ್ತ ಸಾಗುತ್ತಿರುವುದು ನಿಮಗೆ ಖುಷಿಯ ಸಂಗತಿಯಾಗಿದೆ. ಮಹೇಶ್ವರನ ಸ್ತೋತ್ರವನ್ನು ಪ್ರಾತಃಕಾಲದಲ್ಲಿ ಮಾಡಿ.

ಕರ್ಕ: ಬುದ್ಧಿವಂತಿಕೆಯಿಂದ ನೀವು ಹಣದ ವಂಚನೆಯಿಂದ ತಪ್ಪಿಸಿಕೊಳ್ಳುವಿರಿ. ದಿನ ನಿತ್ಯದ ಜೀವನವು ಏರುಪೇರಾಗಬಹುದು. ಇದು ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ವೃತ್ತಿಯ ಬಗ್ಗೆ ಗೌರವ ಇರಲಿ. ನಿಮ್ಮ ವಾದವು ಸರಿ ಇದ್ದರೂ ವ್ಯಕ್ತಪಡಿಸುವ ರೀತಿಯಿಂದ ಅದು ಭಿನ್ನವೆನಿಸಬಹುದು. ಕಣ್ಣಿನ ಸಮಸ್ಯೆಗಳು ಉಂಟಾಗಬಹುದು ವೈದ್ಯರ ಸಲಹೆ ಪಡೆದು ಚಿಕಿತ್ಸೆಯನ್ನು ಮಾಡಿಕೊಳ್ಳುವಿರಿ. ಅವಿವಾಹಿತರು ವಿವಾಹಕ್ಕೆ ಸಂಬಂಧಿಸಿದ ಸುದ್ದಿಯು ಬರಬಹುದು. ಸುಮ್ಮನಿರುವ ಶತ್ರುಗಳನ್ನು ಏನನ್ನಾದರೂ ಹೇಳಿ ಎಬ್ಬಿಸಬೇಡಿ. ನಿಮ್ಮ ಕೆಲಸವನ್ನು ಪೂರ್ತಿ ಮಾಡಿಕೊಳ್ಳಲು ಆದ್ಯತೆ ನೀಡಿ. ತಂದೆಯಿಂದ ನಿಮಗೆ ಸಹಕಾರ ಸಿಗಲಿದೆ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ