AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರ ಗ್ರಹಗತಿಗಳಲ್ಲಿ ಕೆಲ ಬದಲಾವಣೆ, ಲಕ್ಷ್ಮೀನಾರಾಯಣರ ಪ್ರಾರ್ಥನೆ ಮಾಡಿ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರ ಗ್ರಹಗತಿಗಳಲ್ಲಿ ಕೆಲ ಬದಲಾವಣೆ, ಲಕ್ಷ್ಮೀನಾರಾಯಣರ ಪ್ರಾರ್ಥನೆ ಮಾಡಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 09, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ​ 9) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಮೂಲಾ, ಯೋಗ : ಸಿದ್ಧಿ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಬೆಳಗ್ಗೆ 49 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 03:49 ರಿಂದ 05:15ರ ವರೆಗೆ, ಯಮಘಂಡ ಕಾಲ 09:18 ರಿಂದ 10:54ರ ವರೆಗೆ, ಗುಳಿಕ ಕಾಲ 12:29 ರಿಂದ 02:04ರ ವರೆಗೆ.

ಮೇಷ: ನೀವು ಸಾಗುವ ಮಾರ್ಗವನ್ನು ನೋಡಿಕೊಳ್ಳಿ. ನಿಮಗೆ ತೃಪ್ತಿ ಎನಿಸದರೆ ಅಲ್ಲಿಯೇ ಮುಂದುವರಿಯಿರಿ. ಇಲ್ಲವಾದರೆ ಈಗಲೇ ಬದಲಿಸುವುದು ಒಳ್ಳೆಯದು. ಅನಂತರ ಪಶ್ಚಾತ್ತಾಪ ಪಡಬೇಕಾದೀತು. ಕೆಲವು ಸಂದರ್ಭಗಳು ನಿಮ್ಮನ್ನು ಪರೀಕ್ಷಿಸಲು ಬರಬಹುದು.‌ ಅದನ್ನು ಸುಂದರವಾಗಿ ನಿಭಾಯಿಸಲು ಕಲಿಯಿರಿ. ನಿಮ್ಮ ಹಿತವಾದ ಮಾನಸಿಕ‌ಸ್ಥಿತಿಯನ್ನು ಹಲವರು ಇಷ್ಟಪಡಬಹುದು. ಮನೆ ಕೆಲಸದಲ್ಲಿ ನೀವಿಂದು ಬಹುಪಾಲು‌ ಮಗ್ನರಾಗುವಿರಿ. ಕಫಕ್ಕೆ ಸಂಬಂಧಿಸಿದ ಖಾಯಿಲೆಯು ಅಧಿಕವಾದೀತು. ಮನೆಯಲ್ಲಿ ಔಷಧೋಪಚಾರವನ್ನು ಮಾಡಿಕೊಳ್ಳಿ.

ವೃಷಭ: ಉತ್ತಮವಾದ ಆಯ್ಕೆ ಮಾಡಿಕೊಳ್ಳಬೇಕೆಂದು ಹೋಗಿ ಕೆಟ್ಟದ್ದನ್ನು ಆಯ್ಕೆ ಮಾಡಿಕೊಂಡು ಬರುವಿರಿ. ಅದು ನಿಮ್ಮ ಮನಸ್ಸಿನ ಸಹಜತೆಯಲ್ಲ, ಗ್ರಹಗತಿಗಳು ಆ ಸಮಯದಲ್ಲಿ ಅಂತಹ ಯೋಚನೆಯನ್ನು ಮಾಡಲು ಪ್ರೇರಿಸಬಹುದು. ಸರಳತೆಯು ನಿಮ್ಮ ಸುತ್ತಲಿನ‌ ಜನಕ್ಕೆ ಇಷ್ಟವಾದೀತು. ಹಣವಿಲ್ಲದಿದ್ದರೂ ಗುಣದಿಂದ ಖ್ಯಾತಿಯನ್ನು ಪಡೆಯಬಲ್ಲಿರಿ. ಮಕ್ಕಳನ್ನು ಅತಿಯಾಗಿ ಇಷ್ಟಪಡುವಿರಿ. ಆರೋಗದಲ್ಲಿ ವ್ಯತ್ಯಾಸವಾದೀತು. ನಿಮ್ಮ ಪಾಲಿಗೆ ಬಂದಿದ್ದನ್ನು ಖುಷಿಯಿಂದ ಸ್ವೀಕರಿಸಬೇಕಾಗಬಹುದು. ಸೂರ್ಯನ ಸ್ತೋತ್ರವನ್ನು ಮಾಡಿ.

ಮಿಥುನ: ಖುಷಿಯಲ್ಲಿನಿದ್ದೇನೆಂದು ಏನನ್ನಾದರು ಮಾಡಲು ಹೋಗಿ ದುಃಖವನ್ನು ತಂದುಕೊಳ್ಳಬಹುದು. ನಿಷ್ಠುರ ನಿಮ್ಮ ಮಾತನ್ನು ಕೇಳಿ ನಿಮ್ಮ ಬಗ್ಗೆ ಇರುವ ಮೃದುತ್ವವು ಹೋಗಬಹುದು. ಧನನಷ್ಟವು ನಿಮಗೆ ಅತಿಯಾದ ದುಃಖದ ಸಂಗರಿಯಾಗಲಿದೆ. ವಿದ್ಯಾಭ್ಯಾಸದಿಂದ ಏನು ಪ್ರಯೋಜನ ಎನಿಸಿ ಓದನ್ನು ನಿಲ್ಲಿಸಬಹುದು. ಸರಿಯಾದ ಮಾರ್ಗದರ್ಶನದ ಅವಶ್ಯಕತೆ ಇರುತ್ತದೆ. ಕುಂದು ಕೊರತೆಯನ್ನು ನೋಡುತ್ತ ಹೆಚ್ಚಿನ‌ ಕಾಲ ಕಳೆಯುವಿರಿ. ಉದ್ವೇಗವನ್ನು ಆದಷ್ಟು ಕಡಿಮೆ ಮಾಡಲು ಪ್ರಯತ್ನಿಸುವಿರಿ. ವ್ಯಾಧಿಯ ಕಾರಣದಿಂದ ಸಂಪತ್ತು ನಷ್ಟವಾದೀತು. ಮೃತ್ಯುಂಜಯನನ್ನು ಮನಾಸಾ ಧ್ಯಾನಿಸಿ.

ಕಟಕ: ಇಷ್ಟು ದಿನ ದ್ವೇಷಿಸುತ್ತಿದ್ದ ವ್ಯಕ್ತಿಯು ಇಂದು ನಿಮ್ಮ ಮಿತ್ರನಾಗಲು ಬಂದಾನು. ನಿಮಗೆ ಅದು ಆಪತ್ತಿಗೆ ಸೂಚನೆಯಂತೆ ಕಂಡೀತು. ಕಾರ್ಯದ ಸ್ಥಳದಲ್ಲಿ ನಿಮ್ಮ ಸಹಾಯವನ್ನು ಅನೇಕರು ಬಯಸಿಯಾರು. ಪ್ರೀತಿಯಿಂದ ಮಾಡಿಕೊಡಿ. ವಿವಾದಗಳು ಆಗುವ ಸಂದರ್ಭವಿದ್ದರೆ ಅಲ್ಲಿಂದ ಪಲಾಯನ‌ ಮಾಡಿ ನಿಮ್ಮ ಕೆಲಸದಲ್ಲಿ ತೊಡಗಿಕೊಳ್ಳಿ. ಸಹೋದರನ ಅಪರೂಪದ ಭೇಟಿ ನಿಮಗೆ ಖುಷಿ ಕೊಡಲಿದೆ. ದೇಹದ ನೋವನ್ನು ನುಂಗಲು ಮಾತ್ರೆಯನ್ನು ಆಶ್ರಯಿಸುವಿರಿ. ಲಕ್ಷ್ಮೀನಾರಾಯಣರ ಪ್ರಾರ್ಥನೆಯನ್ನು ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!