Daily Horoscope: ಇಂದಿನ ರಾಶಿಭವಿಷ್ಯ, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ರಾಶಿಯವರ ವಿರುದ್ಧ ಸಲ್ಲದ ಅಪವಾದ ಬಂದೀತು

| Updated By: Rakesh Nayak Manchi

Updated on: Jul 05, 2023 | 12:15 AM

ನೀವು ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 05) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದಿನ ರಾಶಿಭವಿಷ್ಯ, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ರಾಶಿಯವರ ವಿರುದ್ಧ ಸಲ್ಲದ ಅಪವಾದ ಬಂದೀತು
ಇಂದಿನ ರಾಶಿಭವಿಷ್ಯ
Image Credit source: Getty Images
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 05 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವೈಧೃತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:46 ರಿಂದ 09:23ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:00 ರಿಂದ ಮಧ್ಯಾಹ್ನ 12:37ರ ವರೆಗೆ.

ಮೇಷ: ಆರೋಗ್ಯದಿಂದ ನಿಮ್ಮ ಉತ್ಸಾಹವು ಇಮ್ಮಡಿಸಬಹುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದೆ ಸಾಗಿರಿ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯಬಯಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಅಸ್ವಂತ್ರರು. ನಿಮ್ಮ ಮಾತು ಇತರರಿಗೆ ಇಷ್ಟವಾಗದೇ ಇದ್ದೀತು. ಒಳ್ಳೆಯದರ ನಿರೀಕ್ಷೆಯಲ್ಲಿ ನೀವು ಇದ್ದು, ದಿನಾಂತ್ಯದಲ್ಲಿ ಸಿಗುವ ಸಾಧ್ಯತೆ ಇದೆ. ಧಾರ್ಮಿಕ ಆಚರಣೆಗಳನ್ನು ಮಾಡಲು ಇಷ್ಟಪಡಬಹುದು. ನಿಮ್ಮ ದೃಷ್ಟಿಕೋನವನ್ನು ಬದಲಿಸಿಕೊಳ್ಳಲು ಪ್ರಯತ್ನಿಸಿ. ಉದ್ಯೋಗಾವಕಾಶಗಳನ್ನು ಹುಡುಕುವಿರಿ.

ವೃಷಭ: ಕಾರ್ಯದಲ್ಲಿ ವಿಳಂಬಗತಿಯಾಗಲಿದೆ. ನಂಬಿಕೆಯನ್ನು ಉಳಿಸಿಕೊಳ್ಳಲು ಬೇಕಾದ ಪ್ರಯತ್ನ ಮಾಡುವಿರಿ. ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಬೇಡಿ. ಸಂಬಂಧಗಳಲ್ಲಿ ಹದವು ತಪ್ಪಬಹುದು. ಅನಿರೀಕ್ಷಿತ ಸುದ್ದಿಗಳು ನಿಮ್ಮ ಬೇಸರಕ್ಕೆ ಕಾರಣವಾಗುವುದು. ಹಣಕಾಸಿನ ವಿಚಾರದಲ್ಲಿ ಬಹಳ ತೊಂದರೆಪಡುವಿರಿ. ಆಪ್ತರ ಮಾತು ನಿಮ್ಮನ್ನು ಚೇತರಿಸಿಕೊಳ್ಳಲು ಸಹಾಯ ಮಾಡಬಹುದು. ಸಂಗಾತಿಯ ಸ್ವಭಾವವನ್ನು ಅರ್ಥಮಾಡಿಕೊಳ್ಳಲು ಬಯಸುವಿರಿ. ಆಪ್ತವಲಯನ್ನು ಕಟ್ಟಿಕೊಳ್ಳಬಹುದು.

ಮಿಥುನ: ಚಂಚಲಸ್ವಭಾವವನ್ನು ನಿಯಂತ್ರಿಸಲು ಕಷ್ಟವಾದೀತು.‌ ಅಲಂಕಾರಿಕಕ್ಕೆ ಹೆಚ್ಚು ಒತ್ತನ್ನು ನೀಡುವಿರಿ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಮನಸ್ಸು ಮಾಡುವರು. ತಾಯಿಯ ಸಂಪತ್ತನ್ನು ಪಡೆಯುವ ಸಾಧ್ಯತೆ ಇದೆ. ನಿಮ್ಮ ಕಾರ್ಯಗಳಿಗೆ ಪ್ರಶಂಸೆಯು ಸಿಗಬಹುದು. ಖುಷಿಯಿಂದ ಇರಲು ಅನೇಕ‌ ವಿಧಾನಗಳನ್ನು ಅನುಸರಿಸುವಿರಿ. ಹೆಚ್ಚಿನ‌ ಸಮಯವನ್ನು ಮಾತುಕತೆಯಲ್ಲಿ ಕಳೆಯುವಿರಿ. ನಿಮಗೆ ಮಾರ್ಗದರ್ಶನದ ಅಗತ್ಯವು ಹೆಚ್ಚಿದೆ. ಸರಳವಾಗಿ ಜೀವನವನ್ನು ನಡೆಸಲು ಇಂದು ಇಷ್ಟಪಡುವಿರಿ.

ಕಟಕ: ಇಂದು ಪರರ ವಿಚಾರದಲ್ಲಿ ಹೆಚ್ಚು ಮನಸ್ಸು ಇರಲಿದೆ. ನಿಮ್ಮ ಸುಳ್ಳು ಇತರರಿಗೆ ಗೊತ್ತಾಗಲಿದೆ. ಸಮಯಾಭಾವದಿಂದ ನೀವು ಒದ್ದಾಡುವ ಸಾಧ್ಯತೆ ಇದೆ. ಸಂಗಾತಿಯ ಮುನಿಸನ್ನು ನೀವು ಸಮಾಧಾನ ಮಾಡುವಿರಿ. ದೊಡ್ಡ ಕೆಲಸಕ್ಕೆ ಸೇರಲು ಯೋಚಿಸಬಹುದು. ನಿಮ್ಮ ಸರ್ಕಾರಿ‌ ಸಂಬದ್ಧವಾದ ಕೆಲಸವು ಅಂತಿಮ ಘಟ್ಟವನ್ನು ತಲುಪಿದ್ದು ಪೂರ್ಣವಾಗಲು ಸಮಯವನ್ನು ತೆಗೆದುಕೊಳ್ಳಬಹುದು. ಮಾತಿನ‌ ಮೇಲೆ ಯಾರನ್ನೂ ಅಳೆಯಬೇಡಿ. ಜೀವನ ನಿರ್ವಹಣೆಗೆ ಮತ್ತೊಂದು ವೃತ್ತಿಯನ್ನು ಆಶ್ರಯಿಸುವ ಸಂಭವವೂ ಇದೆ. ನಿಮ್ಮನ್ನು ನೀವು ಹೊಗಳಿಕೊಳ್ಳುವಿರಿ.

ಸಿಂಹ: ವಿದ್ಯುತ್ ಉಪಕರಣಗಳ ಮಾರಾಟವನ್ನು ನೀವು ಮಾಡುತ್ತಿದ್ದರೆ ಲಾಭವನ್ನು ಪಡೆಯಬಹುದಾಗಿದೆ. ಸಾರ್ವಜನಿಕವಾಗಿ ನೀವು ಹೆಚ್ಚು ಪ್ರಭಾವ ಉಳ್ಳವರಾಗಿದ್ದು ನಿಮಗೆ ಗೌರವವೂ ಸಿಗಲಿದೆ. ಸಹೋದ್ಯೋಗಿಗಳು ನಿಮ್ಮ ಮೇಲೆ ಒತ್ತಡ ಕೊಡುವ ಪ್ರಯತ್ನ ಮಾಡಬಹುದು. ಸ್ನೇಹಿತ ಬಳಗವನ್ನು ದೊಡ್ಡ ಮಾಡಿಕೊಳ್ಳುವಿರಿ. ಭೂಮಿಯ ಖರೀದಿಗೆ ಸ್ಥಳ ಪರಿಶೀಲನೆಗೆ ಹೋಗುವಿರಿ. ದಾಖಲೆಗಳು ಕಾಣೆಯಾಗಿದ್ದು ನಿಮಗೆ ಆತಂಕ ಉಂಟಾಗಬಹುದು. ಹೊಸ ಕೆಲಸಕ್ಕೆ ಹೋಗುವ ಸಾಧ್ಯತೆ ಇದೆ. ನಿಮ್ಮಿಂದ ಆಗುವ ಕೆಲಸಕ್ಕೆ ಹೆಚ್ಚು ಒತ್ತು ಕೊಡಿ.

ಕನ್ಯಾ: ನಿಮ್ಮ ಬಗ್ಗೆ ಸದ್ಭಾವನೆ ಇರುವವರು ನಿಮಗೆ ಶ್ರೇಯಸ್ಸನ್ನು ಹರಸುವರು. ಹಣಕಾಸಿನ ವಿಚಾರಕ್ಕೆ ಸಲ್ಲದ ಅಪವಾದ ಬಂದೀತು. ನಿಮ್ಮ ಸಮಸ್ಯೆಗಳನ್ನು ಆಪ್ತರ ಜೊತೆ ಹಂಚಿಕೊಳ್ಳುವುದು ಉತ್ತಮ. ಇಂದು ಕುಟುಂಬದ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ಇಷ್ಟವಿಲ್ಲದಿದ್ದರೂ ಸಂಗಾತಿಯ ಮಾತನ್ನು ಅನುಸರಿಸಿ. ಮಕ್ಕಳನ್ನು ವಿದ್ಯಾಭಾಸಕ್ಕೆ ನೀವು ಪ್ರೇರೇಪಿಸುವಿರಿ. ನಿಮ್ಮ ಲಾಭಾಂಶವನ್ನು ದಾನ ಮಾಡುವಿರಿ. ನಿಮ್ಮ ಒಳಗುಟ್ಟನ್ನು ಬಿಟ್ಟುಕೊಡಬೇಡಿ. ನಿಮ್ಮನ್ನು ಹಗುರಾಗಿ ಕಾಣಬಹುದು. ನಿಮ್ಮ ಸಣ್ಣ ವಿಷಯಗಳೂ ಬೇಕಾದಷ್ಟು ಪ್ರಯೋಜನಕಾರಿಯಾಗಲಿವೆ.