AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಇತರರಿಗೆ ಹಣ ಕೊಡುವುದಕ್ಕೂ ಮುಂಚೆ ಒಮ್ಮೆ ಯೋಚಿಸಿ!

ನೀವು ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇತರರಿಗೆ ಹಣ ಕೊಡುವುದಕ್ಕೂ ಮುಂಚೆ ಒಮ್ಮೆ ಯೋಚಿಸಿ!
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 09, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 09 ರವಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಸೌಭಾಗ್ಯ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ರಿಂದ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ರಿಂದ 04 ನಿಮಿಷಕ್ಕೆ, ರಾಹು ಕಾಲ ಸಂಜೆ 05:28 ರಿಂದ 07:04 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:38 ರಿಂದ 02:14ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ 05:28ರ ವರೆಗೆ.

ಮೇಷ: ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ಆತುರದಿಂದ ಏನ್ನಾದರೂ ಮಾಡಿಕೊಳ್ಳಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳಲು ಹೋಗಬೇಡಿ. ನಿಮ್ಮ‌ ಚೌಕಟ್ಟಿನಲ್ಲಿ ನೀವಿರುವುದು ಉತ್ತಮ. ನಿಮ್ಮ ದಾರಿಯು ಸರಿಯಾಗಿದೆಯೇ ಎಂದು ಪರೀಕ್ಷಿಸಿಕೊಳ್ಳಿ. ವಸ್ತುಗಳ ವಿಚಾರದಲ್ಲಿ ನೀವು ಮೋಸ ಹೋಗಬಹುದು. ಖರೀದಿಯನ್ನು ಬಹಳ ಸಂತೋಷದಿಂದ ಮಾಡುವಿರಿ. ಸಂಗಾತಿಗೆ ಬೇಕಾದ ವಸ್ತುಗಳನ್ನು ಕೊಡುವಿರಿ. ಇನ್ನೊಬ್ಬರ ಬಗ್ಗೆ ಇಂದು ನಿಮಗೆ ಹೆಚ್ಚು ಕುತೂಹಲ ಇರಲಿದೆ.

ವೃಷಭ: ಮನಸ್ಸಿನ ನೆಮ್ಮದಿಯನ್ನು ನೀವು ಹಾಳುಮಾಡಿಕೊಳ್ಳಲಿದ್ದೀರಿ. ಸಂಗಾತಿಯಿಂದ ಸಿಗುವ ಸುಖದಿಂದ ನೀವು ವಂಚಿತರಾಗಬಹುದು. ನಿಮ್ಮ ನಿರೀಕ್ಷೆಯು ಹುಸಿಯಾಗಬಹುದು. ಉತ್ತಮವಾದ ಆಯ್ಕೆಯಲ್ಲಿ ನೀವು ಸೋಲುವಿರಿ. ನೀವು ಇಂದು ಅಸಹಜವಾಗಿ ವರ್ತಿಸುವಿರಿ. ಆಲಸ್ಯದ ಕಾರಣ ಕಾರ್ಯಕ್ಕೆ ನೆಪವನ್ನು ಕೊಡುವಿರಿ. ಸಾಧಿಸಲಾಗದ ಹೆಚ್ಚು ಶ್ರಮಹಾಕಿ ವ್ಯರ್ಥಮಾಡಿಕೊಳ್ಳಬಹುದು. ಸಂಬಂಧಗಳು ನಿಮ್ಮ ಜೊತೆ ಶಾಶ್ವತವಾಗಿ ಇರಲಾರದು ಎಂಬ ಬೇಸರವೂ ಇರಲಿದೆ. ಮನಸ್ಸನ್ನು ಖಾಲಿ ಬಿಡದೇ ಏನನ್ನಾದರೂ ಆಲೋಚಿಸಿ.

ಮಿಥುನ: ಅನಿರೀಕ್ಷಿತ ದ್ರವ್ಯದ ಲಾಭದಿಂದ ನಿಮಗೆ ಸಂತೋಷವಾಗಲಿದೆ. ಹೆಚ್ಚಿನ ಸಮಯವನ್ನು ಏಕಾಂತದಲ್ಲಿ ಕಳೆಯುವಿರಿ. ನೆಮ್ಮದಿಯ ಕೊರೆತೆಯು ಹೆಚ್ಚು ಕಾಡಬಹುದು. ನಿಷ್ಠುರದ ನಿಮ್ಮ ಮಾತಗಳನ್ನು ಕೇಳಿ ನಿಮ್ಮ ಬಗ್ಗೆ ಭಾವವು ಬದಲಾಗಬಹುದು. ಕಳೆದುಕೊಂಡಿದ್ದನ್ನು ಹೆಚ್ಚು ನೆನಪಿಸಿಕೊಳ್ಳುವಿರಿ. ಪುತ್ರೋತ್ಸವದ ಸಂತೋಷವು ಇರಲಿದೆ. ಸಾಮನ್ಯಜ್ಞಾನದ ಕೊರತೆಯು ನಿಮಗೆ ತಿಳಿಯಬಹುದು. ಎಲ್ಲರೊಡನೆ ಆಪ್ತವಾಗಿ ಮಾತನಾಡುವಿರಿ. ನಿಮ್ಮನ್ನು ಪ್ರೀತಿಸುವವರ ಸಂಖ್ಯೆ ಹೆಚ್ಚಾಗಬಹುದು.

ಕಟಕ: ನಿಮ್ಮನ್ನು ವ್ಯಕ್ತಪಡಿಸಲಾಗದ ಸಮಸ್ಯೆಯೊಂದು ಕಾಡುತ್ತಿದ್ದು ಅದನ್ನು ಪರಿಹಾರ ಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಸಣ್ಣ ಕಿರಿಕಿರಿ ಆರಂಭವಾಗುವುದು. ನಿಮ್ಮ ಇಷ್ಟದವರನ್ನು ಭೇಟಿಯಾಗುವಿರಿ. ದ್ವೇಷಭಾವವನ್ನು ಬಿಟ್ಟು ಮುಂದುವರಿಯುವುದು ಉತ್ತಮ. ಉದ್ವೇಗದಿಂದ ಏನನ್ನಾದರೂ ಹೇಳಲುಹೊಇಗುವಿರಿ. ಬಂಧುಗಳನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಇಚ್ಛೆಗೆ ಅನುಸಾರವಾಗಿ ನಡೆದುಕೊಳ್ಳುವಿರಿ. ನಿಮ್ಮವರ ವರ್ತನೆಯು ನಿಮ್ಮ‌ ದುಃಖಕ್ಕೆ ಕಾರಣವಾಗಬಹುದು. ನಿಮ್ಮಿಂದ ಹೆಚ್ಚು ಉಪಯುಕ್ತವಾದ ಕೆಲಸಗಳು ಆಗಬಹುದು.

ಸಿಂಹ: ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಅಸ್ತವ್ಯಸ್ತಗೊಳಿಸಬಹುದು. ಸಂಗಾತಿಯ ಮೌನವು ನಿಮ್ಮಲ್ಲಿ ಆತಂಕವನ್ನು ಹುಟ್ಟಿಸಬಹುದು. ನಿಯಮ ಉಲ್ಲಂಘನೆಯನ್ನು ಮಾಡಿ ದಂಡ ಕಟ್ಟಬಹುದು. ಇಷ್ಟವಾದ ವಸ್ತುವು ನಷ್ಟವಾಗಿ ಸಂಕಟ ಪಡುವಿರಿ. ನಿಮಗೆ ಸಂಬಂಧಿಸದ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ಆರೋಗ್ಯವನ್ನು ಸರಿ ಮಾಡಿಕೊಳ್ಳಿ.‌ ಸಂಗಾತಿಯ ಮಾತುಗಳು ನಿಮಗೆ ಸಿಟ್ಟನ್ನು ತರಿಸೀತು. ಸುತ್ತಾಟದಲ್ಲಿ ಸುಖವನ್ನು ಕಾಣುವಿರಿ. ಮನಸ್ಸಿನಲ್ಲಿ ಅಧಿಕ ಚಿಂತೆಗಳು ಸುಳಿದಾಡುವುದು. ನಿಮ್ಮನ್ನು ಅಪರಿಚಿತರು ಭೇಟಿ ಮಾಡಬಹುದು. ಅವಶ್ಯಕತೆಗೆ ಇದ್ದಷ್ಟನ್ನು ಮಾತ್ರ ಹೇಳಿ.

ಕನ್ಯಾ: ನಿಮ್ಮ ಮನಸ್ಸಿನಲ್ಲಿ ಅವ್ಯಕ್ತವಾಗಿ ಆತಂಕವು ಮನೆ ಮಾಡಬಹುದು. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ಅಸಮಾಧನ ಇರಲಿದೆ. ಶತ್ರುಗಳನ್ನು ಹೆಚ್ಚು ಮಾಡಿಕೊಳ್ಳಲು ಬಯಸುವಿರಾದರೆ ನಿಮ್ಮ‌ ಬಗ್ಗೆ ಎಲ್ಲರ ಬಳಿ ಹೇಳಿಕೊಳ್ಳಯವುದು ಬೇಡ. ಸಹನೆಯಿಂದ ಆಗುವ ಲಾಭವು ಅನುಭವವೇದ್ಯವಾಗಿರಲಿದೆ. ಮಕ್ಕಳು ನಿಮ್ಮ ಮಾತನ್ನು ಕೇಳದೇ ಸ್ವೇಚ್ಛೆಯಿಂದ ನಡೆದುಕೊಳ್ಳುವರು.‌ ಪದೋನ್ನತಿಯನ್ನು ನೀವು ಬಯಸಲಿದ್ದೀರಿ. ಭೂಮಿಯ ವ್ಯವಹಾರವು ಲಾಭದಾಯಕವಾಗಿಲ್ಲ. ಅಲ್ಪ ಸುಖಕ್ಕಾಗಿ ನೀವು ಹೆಚ್ಚು ಶ್ರಮಿಸುವಿರಿ.

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ