AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು, ಮಾತನಾಡುವಾಗ ತಿಳಿದು ಮಾತನಾಡಿ

ಸಿಂಹ, ಕನ್ಯಾ, ತುಲ, ವೃಶ್ಚಿಕ ರಾಶಿಯವರ ಇಂದಿನ (2023 ಜುಲೈ 22) ಭವಿಷ್ಯದ ಮಾಹಿತಿ ಇಲ್ಲಿದೆ. ಸಿಂಹ ರಾಶಿಯವರು ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು ತುಲಾ ರಾಶಿಯವರಿಗೆ ಹಣಕಾಸಿನ ಕೊರತೆಯು ಸಲ್ಲದ ಕೆಲಸಕ್ಕೆ ನಿಮ್ಮನ್ನು ಜೋಡಿಸುವ ಸಾಧ್ಯತೆ ಇದೆ.

Horoscope: ದಿನಭವಿಷ್ಯ, ಈ ರಾಶಿಯವರು ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು, ಮಾತನಾಡುವಾಗ ತಿಳಿದು ಮಾತನಾಡಿ
ಇಂದಿನ ರಾಶಿಭವಿಷ್ಯImage Credit source: istock
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 22, 2023 | 12:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 22 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವರಿಯಾನ್​, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:27 ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:14 ರಿಂದ 07:50ರ ವರೆಗೆ.

ಸಿಂಹ: ಅಧಿಕಾರದಲ್ಲಿರುವವರು ಒತ್ತಡಕ್ಕೆಸಿಲುಕಿರುವರು. ಗೆಳೆಯರ ಮಾತಿಗೆ ಹೆಚ್ಚು ಬೆಲೆ ಆದರವನ್ನು ತೋರುವಿರಿ. ಆರೋಗ್ಯದ ಕಡೆ ಹೆಚ್ಚು ಗಮನವಿರಲಿ. ಬಂಧುಗಳು ಆರ್ಥಿಕ ಸಹಾಯವನ್ನು ಕೇಳಿಕೊಂಡು ಬರುವರು. ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು. ಸರ್ಕಾರಿ ನೌಕರಿ ಸಿಕ್ಕುವ ಅವಕಾಶಗಳು ಕಡಿಮೆ‌ ಇರಲಿದೆ. ಮಾತಮಾಡುವಾಗ ತಿಳಿದು ಮಾತನಾಡಿ. ಹಣವನ್ನು ಸಂಪಾದಿಸುವ ಛಲವಿದ್ದು ಸರಿಯಾದ ಮಾರ್ಗದಲ್ಲಿ ಮುಂದುವರಿಯಿರಿ. ಇನ್ನೊಬ್ಬರನ್ನು‌ ಅನುಕರಿಸಿ ನಡೆಯುವುದು ಬೇಡ. ನಿಮಗೆ ಗೊತ್ತಿಲ್ಲದೇ ನಿಮ್ಮ ಬಗ್ಗೆ ಕೆಲವು ಮಾತುಗಳು ಇರಲಿವೆ. ಸೋಲನ್ನು ಒಪ್ಪಿಕೊಂಡು ಸಂತೋಷದಿಂದ‌ ಮುನ್ನಡೆಯುವಿರಿ.

ಕನ್ಯಾ: ನೆಮ್ಮದಿಗಾಗಿ ಬಹಳ ಹುಡುಕಾಟ ಮಾಡುವಿರಿ. ಒತ್ತಡದಿಂದ ಹೊರಗೆ ಬರುವ ಮಾರ್ಗವನ್ನು ಕಂಡುಕೊಳ್ಳುವಿರಿ. ಉಳಿತಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉಂಟಾದ ಪ್ರಗತಿಯಿಂದ ಸಂತೋಷವಾಗಲಿದೆ. ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಿ. ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ಇಂದ ಇರುವುದು ಮುಖ್ಯ. ಹೊರಗೆ ಸುತ್ತಾಟ ಮಾಡಿ ಮನಸ್ಸನ್ನು ಹಗುರಾಗಲಿದೆ. ಬಂಧುಗಳ ಮನೆಗೆ ಹೋಗಲಿದ್ದೀರಿ. ಗೌರವವಿಲ್ಲದ ಸ್ಥಳದಿಂದ ನೀವು ದೂರ ಸರಿಯುವಿರಿ. ಮಕ್ಕಳ ಜೊತೆ ಅಧಿಕ ಸಮಯವನ್ನು ಕಳೆಯುವಿರಿ.

ತುಲಾ: ಹಣಕಾಸಿನ ಕೊರತೆಯು ಸಲ್ಲದ ಕೆಲಸಕ್ಕೆ ನಿಮ್ಮನ್ನು ಜೋಡಿಸುವ ಸಾಧ್ಯತೆ ಇದೆ. ಪರೋಕ್ಷವಾಗಿ ನಿಮ್ಮ ನಿಮ್ಮವರನ್ನು ದ್ವೇಷಿಸುವಿರಿ.‌ ಮಕ್ಕಳ‌ ಮೇಲೆ‌ ನಿಮ್ಮ ಕಾಳಜಿಯು ಅತಿಯಾಗಿರಲಿದೆ. ಅಸಾಧಾರ ಕೆಲಸವನ್ನು ಮಾಡಲು ಉತ್ಸಾಹಶೀಲರಾಗಿರುವಿರಿ. ನಿಮ್ಮ ಹಣದ ಅಭಾವವನ್ನು ಗೌಪ್ಯವಾಗಿ ಇಟ್ಟುಕೊಳ್ಳಿ. ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸವನ್ನು ಮಾಡಿ.‌ ಮನೆಯ ಕೆಲಸವನ್ನು ಹೆಚ್ಚು ಆನಂದದಿಂದ ಮಾಡುವಿರಿ. ಆಸ್ತಿಯ ಹಂಚಿಕೆಯಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು.

ವೃಶ್ಚಿಕ: ಭೂಮಿಯ ವ್ಯವಹಾರದಲ್ಲಿ ಮಾತುಕತೆಗಳು ಯಥೇಚ್ಛವಾಗಿ ಆದರೂ ಲಾಭವು ಬಹಳ ಕಡಿಮೆ ಇರಲಿದೆ. ಓಡಾಟದಲ್ಲಿ ನಿಮ್ಮ‌ ವಸ್ತವು ಕಳೆದುಹೋಗಬಹುದು. ಅಪರಿಚಿತರು ನಿಮ್ಮಿಂದ ಏನನ್ನಾದರೂ ಬಯಸಿಯಾರು. ಮನೆಗೆ ಬಂದ ಅತಿಥಿಯನ್ನು ಸತ್ಕಾರದಿಂದ ಸಂತೋಷಪಡಿಸುವಿರಿ. ವಾಹನದಿಂದ ಬಿದ್ದು ಗಾಯವನ್ನು ಮಾಡಿಕೊಳ್ಳುವಿರಿ. ಸಹೋದರಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಇರಲಿದೆ. ಸಂಗಾತಿಯ ಜೊತೆ ಪರಸ್ಥಳಗಳಿಗೆ ಹೋಗುವಿರಿ. ಕೆಲವು ಮಾತಗಳು ಪ್ರಶಾಂತವಾದ ಮನಸ್ಸನ್ನು ಹಾಳುಮಾಡುವುದು. ಉಸಿರಾಟದ ತೊಂದರೆಯಾಗುವ ಸಾಧ್ಯತೆ ಇದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!