Horoscope: ದಿನಭವಿಷ್ಯ; ಅಂದುಕೊಂಡಷ್ಟು ಸಫಲತೆಯನ್ನು ಇಂದು ಸಾಧಿಸಲಿದ್ದೀರಿ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 01) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 21ಕ್ಕೆ, ರಾಹು ಕಾಲ ಸಂಜೆ 04:52 – 06:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:22 – 01:52ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:22 – 04:52ರ ವರೆಗೆ.
ಧನು ರಾಶಿ : ಅಂದುಕೊಂಡಷ್ಟು ಸಫಲತೆಯನ್ನು ಇಂದು ಸಾಧಿಸಲಿದ್ದೀರಿ. ಆರ್ಥಿಕವಾದ ಸಂತೃಪ್ತಿಯು ನಿಮ್ಮ ಮುಖದಲ್ಲಿ ಕಾಣುವುದು. ಇಂದಿನ ಪ್ರಯಾಣವು ನಿಮಗೆ ಸಮಾಧಾನ ನೀಡದು. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಲಿದ್ದು ನಿಮಗೆ ಸಹಿಸಲಾಗದು. ಹಳೆಯ ನೆನಪುಗಳು ನಿಮ್ಮ ಕಾಡುವುವು. ಇಂದು ನೀವು ಆಕರ್ಷಕ ವ್ಯಕ್ತಿಗಳಾಗಿ ಕಾಣುರುವಿರಿ. ಕೃಷಿಯ ಕೆಲಸದಲ್ಲಿ ನಿಮ್ಮ ಉತ್ಸಾಹ ಕಡಿಮೆ ಇರುವುದು. ಕುಶಲ ಕರ್ಮಗಳಲ್ಲಿ ಆಸಕ್ತಿಯು ಹೆಚ್ಚಿರುವುದು. ನಿಮಗೆ ಶೋಧನೆಯ ಕಾರ್ಯವು ಹೆಚ್ಚಿನ ಇಷ್ಟವಾಗುವುದು. ಕೆಲವರು ನಿಮ್ಮ ನಂಬಿಕೆಯನ್ನು ಘಾಸಿಗೊಳಿಸಬಹುದು. ನಿಮಗೆ ನಿಜವಾದ ಮಿತ್ರರ ಅರಿವಾಗುವುದು.
ಮಕರ ರಾಶಿ : ಇಂದು ಇನ್ನೊಬ್ಬರ ಮಾತು ನಿಮಗೆ ಸಮಾಧಾನ ತರಿಸದು. ಯಾರ ಮಾತನ್ನೂ ನೀವು ಕೇಳಲಾರಿರಿ. ಉದ್ಯೋಗದಲ್ಲಿ ನಿಮ್ಮ ಸ್ಥಾನವು ಬದಲಾಗುವುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ಆತ್ಮಿಯರ ಜೊತೆ ಮಾತುಕತೆಗೆ ಇಳಿಯುವಿರಿ. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ಬಂಧುಗಳು ನಿಮ್ಮ ಕಷ್ಟಕ್ಕೆ ನೆರವಾಗುವರು. ಹೊಸ ಪರಿಚಯದಲ್ಲಿ ಆತ್ಮೀಯತೆ ಬೆಳೆಯುವುದು. ಅತಿಯಾದ ಆಸೆಯಿಂದಾಗಿ ದುಃಖಿಸಬೇಕಾದೀತು. ಸಿಕ್ಕ ಅವಕಾಶದಿಂದ ವಂಚಿತರಾಗಿ ನೋಯುವಿರಿ. ಸ್ತ್ರೀಯರ ಜೊತೆ ಮಾತನಾಡುವುದು ನಿಮಗೆ ಕಷ್ಟವಾದೀತು. ನಿಮ್ಮ ಇಂದಿನ ಎಲ್ಲ ಕೆಲಸಗಳೂ ವಿಳಂಬವಾಗುವುದು.
ಕುಂಭ ರಾಶಿ : ನಿಮ್ಮ ಸ್ಥಿರಾಸ್ತಿಯಿಂದ ಲಾಭವನ್ನು ಗಳಿಸುವಿರಿ. ಧಾರ್ಮಿಕ ಆಚರಣೆಗಳಲ್ಲಿ ನಿಮಗೆ ಶ್ರದ್ಧೆಯು ಅಧಿಕವಾಗಿ ಇರುವುದು. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಜವಾಬ್ದಾರಿಗಳಿಂದ ನೀವು ಮುಕ್ತರಾಗಿ ಸಂತೋಷಿಸುವಿರಿ. ಅಪರಿಚಿತರು ನಿಮಗೆ ಸಮಸ್ಯೆಯನ್ನು ಕೊಡುವರು. ನಿಮ್ಮ ನಡವಳಿಕೆಯು ನಿಮ್ಮನ್ನು ಉನ್ನತ ಸ್ಥಾನಕ್ಕೆ ಕರೆದೊಯ್ಯುವುದು. ಕಛೇರಿಯ ಕೆಲಸಗಳನ್ನು ಯಾವದೇ ನಿರ್ಬಂಧವಿಲ್ಲದೇ ಮಾಡುವಿರಿ. ಅನಾರೋಗ್ಯದ ಕಾರಣಕ್ಕಡ ಹಣವನ್ನು ಖರ್ಚು ಮಾಡಬೇಕಾಗುವುದು. ಸಮಯಕ್ಕೆ ಸರಿಯಾಗಿ ನಿಮ್ಮ ಕಾರ್ಯವನ್ನು ಮಾಡಲು ಯಾರಾದರೂ ಸಿಗುವರು. ನಿಮ್ಮ ಮೌನವನ್ನು ಮುರಿದು ಅಭಿಪ್ರಾಯವನ್ನು ತಿಳಿಸಿ.
ಮೀನ ರಾಶಿ : ನೀವು ಬಯಸದಿದ್ದರೂ ನಿಮಗೆ ಪ್ರಶಂಸೆ ಸಿಗಲಿದೆ. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು. ನಿಮಗೆ ಅಧಿಕ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ. ಇಂದು ನೀವು ಕುಟುಂಬಕ್ಕೆ ಯಾವುದೇ ಕೊರತೆ ಆಗದಂತೆ ನೀವು ನೋಡಿಕೊಳ್ಳಬೇಕಾಗುವುದು. ಪ್ರೇಮಜೀವನಕ್ಕೆ ನಿಮಗೆ ಒಗ್ಗದು. ಬಂಧನದಂತೆ ಅನ್ನಿಸಬಹುದು. ಸಂಗಾತಿಯ ಆಲೋಚನೆಗಳು ನಿಮಗೆ ಇಷ್ಟವಾಗಬಹುದು. ಸಂತೋಷವಾಗುವಂತೆ ಇರುವಿರಿ. ಬೇಕಾದ ವಸ್ತುವನ್ನು ಕೇಳಿ ಪಡೆಯಿರಿ. ಗೆಳೆತನವು ನಿಮಗೆ ಮತ್ತಷ್ಟು ಸುಖವನ್ನು ಕೊಡುವುದು. ನೆನಪಿನ ಶಕ್ತಿಯು ಕಡಿಮೆ ಆದಂತೆ ಅನ್ನಿಸಬಹುದು.
-ಲೋಹಿತಶರ್ಮಾ – 8762924271 (what’s app only)