ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶುಭ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:16 ರಿಂದ 01:43 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:56 ರಿಂದ 09:22 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:49 ರಿಂದ 12:16ರ ವರೆಗೆ.
ಧನು ರಾಶಿ : ಇಂದು ನಿಮ್ಮ ಶ್ರಮಕ್ಕೆ ಯೋಗ್ಯವಾದ ಫಲದ ನಿರೀಕ್ಷೆಯಲ್ಲಿ ಇರಬಹುದು. ಹೂಡಿಕೆಯಿಂದ ಸ್ವಲ್ಪ ನಷ್ಟವಾದಂತೆ ಕಾಣಬಹುದು. ಕಛೇರಿಯಲ್ಲಿ ಯಾರದೋ ತಪ್ಪಿಗೆ ನೀವು ತಲೆ ತಗ್ಗಿಸಬೇಕಾಗಬಹುದು. ಪ್ರಾಣಿಗಳ ಮೇಲೆ ಪ್ರೀತಿ ತೋರಿಸುವಿರಿ. ನಿಮ್ಮ ಕಾರ್ಯದಲ್ಲಿ ನಿಮಗೆ ತಪ್ಪು ಕಾಣಿಸುವುದು. ಹೊಗಳಿಕೆಯಿಂದ ನಿಮಗೆ ಸಂಕೋಚ ಉಂಟಾಗಬಹುದು. ನಿಮ್ಮ ಬಯಕೆಗಳಿಗೆ ಇನ್ಮೊಬ್ಬರು ಪ್ರೇರಣೆ ಆಗಬಹುದು. ಪ್ರೀತಿಯ ಕಾರಣಕ್ಕೆ ಮನಸ್ಸಿನ ಚಾಂಚಲ್ಯವನ್ನು ನಿಯಂತ್ರಿಸುವುದು ಕಷ್ಟವಾದೀತು. ಬಹಳ ಕಾಲದಿಂದ ಮುಗಿಯದ ಕೆಲಸವನ್ನು ಇಂದು ಒಂದು ಹಂತಕ್ಕೆ ತರುವಿರಿ. ನಿಮ್ಮ ಮಾತು ಇನ್ನೊಬ್ಬರಿಗೆ ನೋವನ್ನು ಕೊಡಬಹುದು. ಆರೋಗ್ಯದ ವ್ಯತ್ಯಾಸದಿಂದ ವಿಶ್ರಾಂತಿಯನ್ನು ಪಡೆಯುವಿರಿ.
ಮಕರ ರಾಶಿ : ನೂತನ ವಸ್ತುಗಳ ಮೇಲೆ ನಿಮಗೆ ಪ್ರೀತಿ ಹೆಚ್ಚಿರುವುದು. ವಿದೇಶದಲ್ಲಿ ಓದುವ ಆಸೆಯು ನಿಮ್ಮೊಳಗೆ ಆರಂಭವಾಗುವುದು. ನಿಮಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ಉತ್ತಮ ವಿಶ್ವಾಸಿಗಳನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಜೊತೆ ಬಹಳ ಸಂಯೋಷದ ಕ್ಷಣವನ್ನು ಕಳೆಯುವಿರಿ. ಉದ್ಯೋಗದ ಸ್ಥಳದಲ್ಲಿ ಉಂಟಾದ ಪಕ್ಷಪಾತದಿಂದ ದ್ವೇಷಭಾವವು ಉಂಟಾಗಬಹುದು. ಕಲಾವಿದರು ಅವಕಾಶವನ್ನು ಹುಡುಕಿಕೊಂಡು ಹೋಗಬೇಕಾಗಬಹುದು. ಸಾಲದ ವಿಚಾರವಾಗಿ ಕುಟುಂಬದ ಜೊತೆ ಬಿಸಿ ಚರ್ಚೆಯಾಗಬಹುದು. ಆಸ್ತಿಯ ಹಂಚಿಕೆಯಲ್ಲಿ ನಿಮಗೆ ಸಮಾಧಾನ ಇರದು. ಹಲವು ದಿನಗಳಿಂದ ಉಳಿಸಿಕೊಂಡ ವೈಯಕ್ತಿಕ ಕೆಲಸವೇ ಉಳಿಯಲಿದೆ. ಶತ್ರುಗಳು ನಿಮ್ಮ ಸ್ಥಿತಿಯನ್ನು ಕಂಡು ಸಂತೋಷಪಡಬಹುದು. ಯೋಜನೆಯನ್ನು ಯಾರಿಗೂ ಹೇಳದೇ ನಿಮ್ಮಷ್ಟಕ್ಕೇ ಮಾಡಿ.
ಕುಂಭ ರಾಶಿ : ವಾಹನ ಖರೀದಿಗೆ ಮಿತ್ರರಿಂದ ಸರಿಯಾದ ಸಲಹೆ ಸಿಗಬಹುದು. ಮನೆಯ ದುರಸ್ತಿಯ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವಿರಿ. ಬಹಳ ಶ್ರಮದಿಂದ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶಪ್ರಯಾಣವನ್ನು ಮಾಡಬೇಕಾಗಬಹುದು. ಬಂಧುಗಳು ನಿಮ್ಮ ಬಳಿ ಬಂದು ನೋವನ್ನು ಹೇಳಿಕೊಳ್ಳುವರು. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಲು ಮನೆಯಿಂದ ಒಪ್ಪಿಗೆಯನ್ನು ನಿರಾಕರಿಸಬಹುದು. ಇಂದು ನೀವು ಕೋಪವನ್ನು ಮಾಡಿಕೊಳ್ಳಲು ಕಾರಣವೇ ಬೇಕಾಗದು. ನೌಕರರಿಂದ ನಿಮಗೆ ಸರಿಯಾದ ಪ್ರತಿಕ್ರಿಯೆ ಸಿಗದು. ವಿವೇಚನೆ ಇಲ್ಲದೇ ಆಡಿದ ನಿಮ್ಮ ಮಾತುಗಳಿಂದ ಕಲಹವಾಗಬಹುದು. ನಿಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶಗಳು ಸಿಗುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರ ಉಪಯೋಗಕ್ಕೆ ದಾನವಾಗಿ ನೀಡುವಿರಿ.
ಮೀನ ರಾಶಿ : ಸ್ನೇಹಸಂಬಂಧ ಗಟ್ಟಿಮಾಡಿಕೊಳ್ಳಲು ಇಷ್ಟವಾಗುವುದು. ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ಉದ್ಯೋಗದಲ್ಲಿನ ಒತ್ತಡವು ನಿಮ್ಮ ಆರೋಗ್ಯದ ಮೇಲೆ ಪರಿಣಾಮವನ್ನು ಉಂಟುಮಾಡಬಹುದು. ಮೊದಲೇ ಸಮಯವನ್ನು ಸರಿಯಾಗಿ ನಿರ್ಧರಿಸಿಕೊಂಡು ಕಾರ್ಯವನ್ನು ಆರಂಭಿಸಿದರೆ ಸಕಾಲಕ್ಕೆ ಮುಗಿಯುವುದು. ಆಸಕ್ತಿಯು ಇಲ್ಲದಿದ್ದರೂ ಒತ್ತಾಯಕ್ಕೆ ಧಾರ್ಮಿಕ ಕಾರ್ಯಗಳಲ್ಲಿ ತೊಡಗುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಖರ್ಚು ಬಂದರೆ ಆತಂಕಪಡುವಿರಿ. ಭೂಮಿಗೆ ಸಂಬಂಧಿಸಿದ ಸಂಕೀರ್ಣ ವಿಚಾರವನ್ನು ನ್ಯಾಯಾಲಯವೇ ಬಗೆಹರಿಸೀತು.
-ಲೋಹಿತಶರ್ಮಾ 8762924271 (what’s app only)