AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ರಾಶಿಭವಿಷ್ಯ, ಈ ರಾಶಿಯವರಿಗೆ ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 02) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ರಾಶಿಭವಿಷ್ಯ, ಈ ರಾಶಿಯವರಿಗೆ ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 02, 2023 | 12:30 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 09:27 ರಿಂದ 10:59ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 02:05 ರಿಂದ 03:38ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 06:22 ರಿಂದ 07:54ರ ವರೆಗೆ.

ಧನು ರಾಶಿ : ನಿಮ್ಮ ಕೆಲಸದಲ್ಲಿ ನಿಮಗೆ ತಪ್ಪು ಕಾಣಿಸಬಹುದು. ಸಮ್ಮಾನವನ್ನು ನೀವು ಇಷ್ಟಪಡುವುದಿಲ್ಲ. ನಿಮ್ಮ ಬಯಕೆಗಳು ಇನ್ಮೊಬ್ಬರಿಂದ‌ ಪ್ರೇರಣೆಯಿಂದ ಬರಲಿದೆ. ಮನಸ್ಸಿನ ನಿಯಂತ್ರಣವನ್ನು ಸಾಧಿಸಲು ನಿಮಗೆ ಆಗದು. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು. ನಿಮ್ಮ ನೌಕರರು ಸರಿಯಾಗಿ ಕೆಲಸ ಮಾಡದೇ ಕೊನೆಗೆ ನಿಮ್ಮ ಮೇಲೇ ಭಾರವು ಬರುವುದು. ನಿಮ್ಮ ಮಾತು ಇನ್ನೊಬ್ಬರಿಗೆ ನೋವುಂಟುಮಾಡುವಂತೆ ಇರಲಿದೆ. ವಿದ್ಯಾಭ್ಯಾಸಕ್ಕೆ ನೀವು ಇಷ್ಟಪಟ್ಟ ವಿಚಾರವೇ ಸಿಗಲಿದೆ. ಸಾಮಾಜಿಕ ಕಾರ್ಯಗಳನ್ನು ನೀವು ಸಾಮೂಹಿಕವಾಗಿ ಮಾಡವಿರಿ. ಕಳ್ಳತನದ ಆರೋಪವು ಬರಬಹುದು.

ಮಕರ ರಾಶಿ : ಉದ್ಯೋಗದ‌ ಸ್ಥಳದಲ್ಲಿ ಪಕ್ಷಪಾತವನ್ನು ಮಾಡಿ ದ್ವೇಷವನ್ನು ಬಿತ್ತುವ ಸಾಧ್ಯತೆ ಇದೆ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಸಿಗಲಿದೆ. ಸಾಲದ ವಿಚಾರವಾಗಿ ಕುಟುಂಬದ ಜೊತೆ ವಾಗ್ವಾದವು ಆಗಲಿದೆ. ಇಂದು ನಿಮ್ಮ ವೈಯಕ್ತಿಕ ಕೆಲಸಗಳೇ ಬಹಳ ಇರಲಿದ್ದು ಇನ್ನೊಂದರ ಕುರಿತು ಯೋಚನೆಯು ನಿಮಗೆ ಸಾಧ್ಯವಾಗದು. ಇಂದು ನಿಮ್ಮ ಗೌರವವನ್ನು ಕಂಡು ಕೆಲವು ಮಿತ್ರರೂ ಶತ್ರುಗಳಾದಾರು. ನಿಮ್ಮ ಆಲೋಚನೆಯನ್ನು ಯಾರ ಬಳಿಯೂ ಹೇಳಿಕೊಳ್ಳದೇ ಕಾರ್ಯರೂಪಕ್ಕೆ ತರುವುದು ಒಳ್ಳೆಯದು. ಏಕಾಂತವನ್ನು ಇಂದು ಹೆಚ್ಚು ಇಷ್ಟಪಡುವಿರಿ. ದೇವರಲ್ಲಿ ಭಕ್ತಿಯು ಇರಲಿದೆ. ಕ್ರಮಬದ್ಧ ಜೀವನವನ್ನು ನೀವು ನಡೆಸುವಿರಿ.

ಕುಂಭ ರಾಶಿ : ವೃತ್ತಿಯ ಕಾರಣಕ್ಕೆ ನೀವು ವಿದೇಶಪ್ರಯಾಣವನ್ನು ಮಾಡಲಿದ್ದೀರಿ. ಬಂಧುಗಳ ನೋವಿಗೆ ಸ್ಪಂದಿಸುವಿರಿ. ಪ್ರಯಾಣದಿಂದ ನಿಮಗೆ ಆಲಸ್ಯವಿರಲಿದೆ. ಅಪಮಾನವನ್ನು ನೀವು ನುಂಗಿಕೊಳ್ಳುವಿರಿ. ಕೋಪವನ್ನು ಮಾಡಿಕೊಳ್ಳಲು ನಿಮಗೆ ಕಾರಣವೇ ಬೇಕಾಗದು. ನೌಕರರಿಂದ ನಿಮಗೆ ಎದುರುತ್ತರ ಸಿಗಲಿದೆ. ವಿವೇಚನೆ ಇಲ್ಲದೇ ಆಡಿದ ನಿಮ್ಮ ಮಾತುಗಳು ಕಲಹಕ್ಕೆ ಕಾರಣವಾಗಬಹುದು. ನಿಮ್ಮ ಪ್ರತಿಭೆಯನ್ನು ತೋರಿಸಲು ಇದು ಸೂಕ್ತ ಸಮಯ. ನಿಮ್ಮ ವಸ್ತುವನ್ನು ಇನ್ನೊಬ್ಬರ ಉಪಯೋಗಕ್ಕೆ ದಾನವಾಗಿ ಕೊಡುವಿರಿ. ಇಂದು ಕೆಲಸವನ್ನು ಮುಗಿಸಿ ಆರಾಮಾಗಿ ಇರಬೇಕು ಎಂದು ಅಂದುಕೊಳ್ಳುವಿರಿ

ಮೀನ ರಾಶಿ : ಅನಿವಾರ್ಯ ಕಾರಣದಿಂದ ನಿಮಗೆ ಅಧಿಕಾರ ಲಾಭವಾಗಬಹುದು. ಉದ್ಯೋಗದಲ್ಲಿ ಒತ್ತಡದಿಂದ ಕೆಲವು ಸಮಸ್ಯೆಗಳು ಆಗಬಹುದು. ವ್ಯಾಪಾರದಲ್ಲಿ ಲಾಭದ ಅಂಶವು ಕಡಿಮೆ ಇರಬಹುದು. ಸಮಯವನ್ನು ನಿರ್ಧರಿಸಿಕೊಂಡು ಕೆಲಸವನ್ನು ಆರಂಭಿಸಿದರೆ ಸಕಾಲಕ್ಕೆ ಎಲ್ಲವೂ ಮುಗಿಯಲಿದೆ. ಆಸಕ್ತಿಯು ಇಲ್ಲದಿದ್ದರೂ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಆಪತ್ತಿನಲ್ಲಿ ಇದ್ದರೆ ಸ್ನೇಹಿತರ ಸಹಾಯ ಸಿಗಬಹುದು. ಖರ್ಚಿಗೆ ಇಂದು ಬಹಳ ಆತಂಕಪಡುವಿರಿ. ಭೂಮಿಗೆ ಸಂಬಂಧಿಸಿದ ನಿಮ್ಮ ಕಲಹವು ನ್ಯಾಯಾಲಯಕ್ಕೆ ಹೋಗಬಹುದು. ನಿಮ್ಮ ಬಳಿ ಯಾರಾದರೂ ಕೇಳಿ ಬರಬಹುದು. ಪ್ರೀತಿಯಲ್ಲಿ ನಿಮಗೆ ಸೋಲಾಗಬಹುದು.

-ಲೋಹಿತಶರ್ಮಾ 8762924271 (what’s app only)

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್