Horoscope: ಈ ರಾಶಿಯವರ ದಾಂಪತ್ಯದ ಮೇಲೆ‌ ದುಷ್ಟರ ದೃಷ್ಟಿಯು ಬೀಳಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 03) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರ ದಾಂಪತ್ಯದ ಮೇಲೆ‌ ದುಷ್ಟರ ದೃಷ್ಟಿಯು ಬೀಳಬಹುದು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 03, 2023 | 12:45 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಐಂದ್ರ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:49 ರಿಂದ ಮಧ್ಯಾಹ್ನ 12:16 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:36 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:56 ರಿಂದ 09:23ರ ವರೆಗೆ.

ಧನು ರಾಶಿ : ದಾಂಪತ್ಯದ ಮೇಲೆ‌ ದುಷ್ಟರ ದೃಷ್ಟಿಯು ಬೀಳಬಹುದು. ನಿಮ್ಮ ನಡೆ-ನುಡಿಗಳು ಆದಷ್ಟು ಸರಳವಾಗಿ ಇರಲಿ. ಮಿತಿಮೀರಿದ ಆಹಾರಸೇವನೆಯಿಂದ ನಿಮಗೆ ಕಷ್ಟವಾದೀತು. ಮಕ್ಕಳ ಬಗೆಗೆ ನಂಬಿಕೆ ಕಡಿಮೆಯಾಗಬಹುದು. ಧಾರ್ಮಿಕ ಕಾರ್ಯದಲ್ಲಿ ಸಂಭ್ರಮದಲ್ಲಿ ಪಾಲ್ಗೊಳ್ಳುವಿರಿ. ಯಾರದೋ ಮಾತಿನಿಂದ ನಿಮಗೆ ಸಂಕಟವಾಗುವುದು. ಆಪ್ತರನ್ನು ಸತ್ಕಾರಕ್ಕಾಗಿ ಮನೆಗೆ ಆಹ್ವಾನಿಸುವಿರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಯಲ್ಲಿ‌ ಮಗ್ನರಾಗುವಿರಿ. ತುರ್ತು ಕಾರ್ಯಕ್ಕಾಗಿ ಅವಸರವಸರವಾಗಿ ಪ್ರಯಾಣ ಮಾಡಬೇಕಾಗಬಹುದು. ಶುಭ ಸಮಯವು ನಿಮ್ಮ ದಿಕ್ಕನ್ನು ಬದಲಿಸೀತು. ಮಾನಸಿಕವಾಗಿ ನೀವು ಬಲಗೊಳ್ಳುವ ಅವಶ್ಯಕತೆ ಇದೆ. ಆಸ್ತಿಯ ಖರೀದಿಗಾಗಿ ಹಣಕೊಟ್ಟು ಕಳೆದುಕೊಳ್ಳುವಿರಿ.

ಮಕರ ರಾಶಿ : ವೃತ್ತಿಯಲ್ಲಿ ಹಿತಶತ್ರುಗಳ ಕಾಟದಿಂದ ಸಿಗಬೇಕಾದ ಸ್ಥಾನಕ್ಕೆ ತೊಂದರೆಯಾಗಬಹುದು. ಸರಳವಾದ ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಒಟ್ಟಿಗೇ ಬರುವ ಕೆಲಸದಿಂದ ನೀವು ಉದ್ವೇಗಕ್ಕೆ ಬೀಳುವಿರಿ. ಔದಾರ್ಯ ಗುಣವು ದುರುಪಯೋಗವಾಗಬಹುದು. ಸಾಲದಿಂದ ಬಿಡುಗಡೆ ಸಿಕ್ಕಿ ಮನಸ್ಸು ನಿರಾಳವಾಗಲಿದೆ. ಹಿರಿಯರ ಶುಶ್ರೂಷೆಗೆ ಅವಕಾಶ ಸಿಗುವುದು. ಸಂಪೂರ್ಣ ಮಾಹಿತಿಯನ್ನು ಪಡೆದು ಮುಂದಡಿ ಇಡುವುದು ಸೂಕ್ತ. ಹೊಸ ಉದ್ಯೋಗವನ್ನು ಆರಂಭಿಸುವತ್ತ ನಿಮ್ಮ ಆಲೋಚನೆಯು ಗಾಢವಾಗಿ ಇರುವುದು. ಮಕ್ಕಳಿಗೆ ಖುಷಿಯಾಗುವಂತೆ ನಡೆದುಕೊಳ್ಳುವಿರಿ. ಸಂಗಾತಿಯ ಆರೋಗ್ಯದಲ್ಲಿ ಏರಿಳಿತವು ಕಂಡು ಉದ್ವಿಗ್ನವಗಬಹುದು. ಚಿತ್ತವು ನಾನಾ ಬಗೆಯ ಆಲೋಚನೆಯಲ್ಲಿ‌ ಮಗ್ನವಾಗುವುದು.

ಕುಂಭ ರಾಶಿ : ಹಿರಿಯರ ಮಾತನ್ನು ನಿರಾಕರಿಸಿದ್ದ ನಿಮಗೆ, ಅದೇ ಉಪಯೋಗಕ್ಕೆ ಬರಲಿದೆ. ವಿದ್ಯಾರ್ಥಿಗಳು ಸತತ ಶ್ರಮದಿಂದ ಇಂದು ಹಂತವನ್ನು ತಲುಪುವರು. ನಿಮ್ಮ ನೋವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ಕೃಷಿಯಿಂದ ಲಾಭ ಗಳಿಸಲು ತಜ್ಞರ ಸಲಹೆ ಸಿಗಲಿದೆ. ಶತ್ರುಗಳ ಚಲನವಲನಗಳ‌ ಮೇಲೆ‌ ಕಣ್ಣಿಡುವಿರಿ. ಅಕಾಸ್ಮಾತ್ತಾಗಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ.‌ ಕುಟುಂಬದಲ್ಲಿ ನಿಮ್ಮಿಂದ ಸಂತೋಷವನ್ನು ಇರುವುದು. ಬಂಧುಗಳ ಪ್ರೀತಿಯೂ ಸಿಗುವುದು. ಅತಿಥಿ ಸತ್ಕಾರವನ್ನು ಮಾಡಲು ಉತ್ಸುಕತೆ ಇರುವುದು. ನಿಮ್ಮ ಚಿಂತೆಯನ್ನು ನೀವು ಕಡಿಮೆ ಮಾಡಿಕೊಳ್ಳುವ ಮಾರ್ಗವನ್ನು ಕಂಡುಕೊಳ್ಳಿ. ಸಂಪತ್ತಿನ ರಕ್ಷಣೆಯ ವಿಚಾರದಲ್ಲಿ ನಿಮಗೆ ಆತಂಕವಿರುವುದು.

ಮೀನ ರಾಶಿ : ಇಂದಿನ ನಿಮ್ಮ ವ್ಯವಹಾರವು ಹತ್ತಾರು ಗೊಂದಲಗಳಿಂದ ಇರಲಿದ್ದು ಮುಂದುವರಿದರೆ ನಷ್ಟವಾಗುವ ಭಯವೂ ಇರಲಿದೆ. ದ್ವಿಚಕ್ರ ಸವಾರರು ಬಹಳ ಎಚ್ಚರಿಕೆಯಿಂದ ಓಡಾಡಬೇಕು. ಅಧ್ಯಾತ್ಮದಲ್ಲಿ ಮನಸ್ಸನ್ನು ಇಡುವಿರಿ. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು ಕಾಣಿಸಿಕೊಳ್ಳುವುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಳ್ಳಲು ತಂತ್ರಗಳನ್ನು ಹೂಡಬಹುದು. ನಿರುದ್ಯೋಗಿ ಮಿತ್ರನಿಗೆ ನೀವು ಸಹಾಯ ಮಾಡುವಿರಿ. ನಿಮ್ಮ ಉದ್ಯಮಕ್ಕೆ ಹೊಸ ಸ್ಪರ್ಶವನ್ನು ಕೊಡುವಿರಿ.

-ಲೋಹಿತಶರ್ಮಾ 8762924271 (what’s app only)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್