Horoscope: ಈ ರಾಶಿಯವರು ಅಪರಿಚಿತರ ಮೂಲಕ ಹಣವನ್ನು ಕಳೆದುಕೊಳ್ಳಲಿದ್ದೀರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಅಪರಿಚಿತರ ಮೂಲಕ ಹಣವನ್ನು ಕಳೆದುಕೊಳ್ಳಲಿದ್ದೀರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 04, 2023 | 12:45 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪುನರ್ವಸೂ, ಯೋಗ: ವೈಧೃತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:23 ರಿಂದ 10:50 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 03:09 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:30 ರಿಂದ 07:56ರ ವರೆಗೆ.

ಧನು ರಾಶಿ : ನಂಬಿಕೆಯನ್ನು ಉಳಿಸಿಕೊಳ್ಳಲು ಬಹಳ ಶ್ರಮಪಡುವಿರಿ. ಧಾರ್ಮಿಕ ಆಚಣೆಯು ತೋರಿಕೆಗೆಂದು ಮಾಡುವಿರಿ. ಅಪರಿಚಿತರ ಮೂಲಕ ನಿಮ್ಮ ಹಣವನ್ನು ಕಳೆದುಕೊಳ್ಳಲಿದ್ದೀರಿ. ಒಪ್ಪಿಕೊಂಡ ಕೆಲಸದಲ್ಲಿ ಯಶಸ್ಸು ಸಾಧಿಸುವುದು ಆಗದು.‌ ಸಂಗಾತಿಯ ಬೆಂಬಲವು ನಿಮ್ಮ‌‌ ಕಾರ್ಯಗಳಿಗೆ ಸಿಗಲಿದೆ. ಅಗತ್ಯವಿದ್ದಾಗ ಮಾತ್ರ ಸಾಲದ ಬಗ್ಗೆ ಆಲೋಚಿಸಿ. ಸರ್ಕಾರಿ ಉದ್ಯೋಗದವರು ವರ್ಗಾವಣೆಯಿಂದ ದೂರವಿರಬೇಕಾಗಬಹುದು. ಗೃಹ ನಿರ್ಮಾಣದ ಕಾರ್ಯವನ್ನು ಕೆಲವು ದಿನ ಮುಂದೂಡುವುದು ಉತ್ತಮ. ನಿಮ್ಮ ಮನೆಯಲ್ಲಿ ಮಂಗಳ ಕಾರ್ಯಕ್ಕೆ ತಯಾರಿ ಆಗಬಹುದು. ಹಳೆಯ ರೋಗಗಳು ಮರುಕಳಿಸದಂತೆ ಎಚ್ಚರಿಕೆ ಬೇಕಾದೀತು. ವೃತ್ತಿ ಜೀವನದ ಬಗ್ಗೆ ಹೇಳುವುದಾದರೆ, ಈ ದಿನ ನಿಮಗೆ ಉತ್ತಮ ಅವಕಾಶಗಳು ಸಿಗಬಹುದು.

ಮಕರ ರಾಶಿ : ಯಾರ ಮಾತನ್ನು ಒಪ್ಪಿಕೊಳ್ಳದೇ ನಿಮ್ಮದೇ ಆದ ದಾರಿಯಲ್ಲಿ ನಡೆಯುವಿರಿ. ಕಛೇರಿಯ ಕೆಲಸದಲ್ಲಿ ನಿಮ್ಮ ಮಧ್ಯೆ ಅನಗತ್ಯರ ಪ್ರವೇಶದಿಂದ ಕೋಪಗೊಳ್ಳುವಿರಿ. ಅಲ್ಪ ಆದಾಯದಲ್ಲಿ ತೃಪ್ತಿ ಹೊಂದಬೇಕಾದೀತು. ಹೆಚ್ಚಿನ ಆದಾಯದಿಂದ ದುರಭ್ಯಾಸವು ಹೆಚ್ಚಾಗಬಹುದು. ಶಿಕ್ಷಕರು ವೇತನವನ್ನು ಹೆಚ್ಚಿಸಿಕೊಳ್ಳುವರು. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ. ನಿಮ್ಮ ಮಕ್ಕಳ ವರ್ತನೆಯಿಂದ ಬೇಸರ ಆಗುವುದು. ಬೇರೆಯವರಿಂದ ದೂರನ್ನೂ ಕೇಳಬೇಕಾದೀತು. ವಿಚಲಿತವಾಗದೇ ತಾಳ್ಮೆಯಿಂದ ವ್ಯವಹರಿಸಿ. ನೀವು ಮಿತ್ರರ ಜೊತೆ ಪ್ರವಾಸಕ್ಕೆ ಹೋಗುವಿರಿ. ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಇರುವುದಿಲ್ಲ. ಕಲಾವಿದರಿಗೆ ಅವಕಾಶಗಳು ಕಡಿಮೆ‌ ಸಿಗಬಹುದು.

ಕುಂಭ ರಾಶಿ : ಶ್ರಮಕ್ಕೆ ತಕ್ಕ ಫಲಿತಾಂಶವು ದೊರೆಯದಿದ್ದರೂ ನೆಮ್ಮದಿ ಇರಲಿದೆ. ಜಾಣ್ಮೆಯ ಮಾತಿಗೆ ಯಾರೂ ಮರುಳಾಗರು. ನಿಮಗೆ ಬೇರೆಯವರಿಂದ ಹಣವು ಸಹಾಯದ ರೂಪದಲ್ಲಿ ಬರಬಹುದು. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳಿದ್ದರೂ ಕಾರ್ಯದ ಒತ್ತಡದಿಂದ ಸಾಧ್ಯವಾಗದು. ನಿಮ್ಮ ಬದುಕಿನ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಿಕೊಳ್ಳಬೇಕಾಗಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು. ಸಹೋದ್ಯೋಗಿಗಳಿಗೆ ಸಹಕರಿಸುವ ಮನಸ್ಸಾಗುವುದು. ಮೋಜಿನ ಕಾರಣಕ್ಕೆ ಸುತ್ತಾಟ ಮಾಡುವಿರಿ. ಬಂಧುಗಳ ಜೊತೆ ಅನಗತ್ಯ ವಾಗ್ವಾದ ಬೇಡ. ನಿಮ್ಮ ಮೇಲಿನ‌ ಪ್ರೀತಿ ಕಡಿಮೆ‌ ಆಗುವುದು.‌ ಉದ್ಯಮದ ತೊಂದರೆಯನ್ನು ಇಲ್ಲ ವಾಗಿಸುವುದು ನಿಮಗೆ ಸವಾಲಾದೀತು.

ಮೀನ ರಾಶಿ : ಸಾಮಾಜಿಕ ಕಾರ್ಯಕ್ಕೆ ನಿಮ್ಮ ಕೊಡುಗೆಯನ್ನು ನೀಡುವಿರಿ. ಕಛೇರಿಯ ಕೆಲಸಗಳನ್ನು ವೇಗವಾಗಿ ಮಾಡಿ ಜವಾಬ್ದಾರಿಯನ್ನು ಮುಗಿಸುವಿರಿ. ಹಿರಿಯರನ್ನು ಅನಾದರ ಮಾಡಿದಂತೆ ಅನ್ನಿಸಬಹುದು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಮಕ್ಕಳ ಆರೋಗ್ಯಕ್ಕೆ ಖರ್ಚು ಮಾಡಬೇಕಾದೀತು. ವ್ಯವಹಾರದಲ್ಲಿ ಹೆಚ್ಚಿನ ಲಾಭವು ಬರಬಹುದು. ಪ್ರಸಾರ ಮಾಧ್ಯಮದವರು ದೂರ ಹೀಗಬೇಕಾಗಬಹುದು. ಸಾಹಿತ್ಯ ಕ್ಷೇತ್ರದಲ್ಲಿ ಇರುವವರಿಗೆ ಸಮ್ಮಾನ ಸಿಗುವುದು. ಅವಿವಾಹಿತರು ಕಂಕಣಬಲವನ್ನು ನಿರೀಕ್ಷಿಸಬಹುದು. ಪ್ರಸಿದ್ಧ ಸಂಸ್ಥೆಗೆ ಹೂಡಿಕೆ ಮಾಡಲಿದ್ದೀರಿ. ಯಾರ ಜೊತೆಗಾದರೂ ವಿವಾದವಾಗುವ ಸಾಧ್ಯತೆ ಇದೆ. ಬುದ್ಧಿವಂತಿಕೆಯಿಂದ ನಡೆದುಕೊಂಡರೆ ಸಮಸ್ಯೆಗಳನ್ನು ನಿವಾರಿಸಬಹುದು.

-ಲೋಹಿತಶರ್ಮಾ 8762924271 (what’s app only)

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು